ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ: ಬಸ್ ಸಂಚಾರಕ್ಕೆ ಪೊಲೀಸ್ ಭದ್ರತೆ
Team Udayavani, Dec 14, 2020, 6:45 AM IST
ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಎಲ್ಲ ಬಸ್ ನಿಲ್ದಾಣಗಳು, ಡಿಪೋಗಳು, ವರ್ಕ್ಶಾಪ್ಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಈ ಮಧ್ಯೆ ಬೆಂಗಳೂರಿನ ಕೆಲಮಾರ್ಗಗಳಲ್ಲಿ ಬಿಎಂಟಿಸಿ ಹಾಗೂ ಮೈಸೂರು, ಮಂಗಳೂರು, ಶಿವಮೊಗ್ಗ, ಧರ್ಮಸ್ಥಳ, ಕುಂದಾಪುರ ಮಾರ್ಗದ ಕೆಎಸ್ಆರ್ಟಿಸಿ ಬಸ್ಗಳಿಗೆ ಪೊಲೀಸ್ ಮತ್ತು ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಭದ್ರತಾ ಸಿಬಂದಿ ಭದ್ರತೆಯಲ್ಲಿ ಸಂಚಾರ ನಡೆಸಲಾಯಿತು.
ಕೆಂಪೇಗೌಡ ಬಸ್ ನಿಲ್ದಾಣದಿಂದ ಶಿವಮೊಗ್ಗ, ಮಂಗಳೂರು, ಧರ್ಮಸ್ಥಳ, ಕುಂದಾಪುರ ಮಾರ್ಗದ ಸುಮಾರು 50ಕ್ಕೂ ಅಧಿಕ ಬಸ್ ಗಳು ಸಂಚಾರ ನಡೆಸಿವೆ. ಪ್ರತಿ ಬಸ್ನ ಮುಂಭಾಗ ಮತ್ತು ಹಿಂಭಾಗದಲ್ಲಿ ಪೊಲೀಸರು ಮತ್ತು ಸಾರಿಗೆ ಸಂಸ್ಥೆಗಳ ಭದ್ರತಾ ಸಿಬಂದಿಯ ವಾಹನಗಳು ಭದ್ರತೆ ನೀಡಿದ್ದವು. ವಿವಿಧೆಡೆ ಭದ್ರತೆಗಾಗಿ ಸುಮಾರು 600 ಮಂದಿಯನ್ನು ನಿಯೋಜಿಸಲಾಗಿತ್ತು.
ಈ ನಡುವೆ ಸ್ವಯಂಪ್ರೇರಿತರಾಗಿ ಕೆಲಸಕ್ಕೆ ಹಾಜರಾಗುತ್ತಿದ್ದ ಸಾರಿಗೆ ಸಿಬಂದಿಗೆ ತಡೆಯೊಡ್ಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ. ಮತ್ತೆ ಕೆಲವರನ್ನು ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.