ತಾಜ್ ಮಹಲ್ ಆವರಣದಲ್ಲಿ ಹನುಮಾನ್ ಚಾಲೀಸಾ ಪಠಣಕ್ಕೆ ಯತ್ನ: ಪೋಲೀಸರ ತಡೆ
ಹಿಜಾಬ್ ವಿವಾದ ಬಳಿಕ ದೇಶಾದ್ಯಂತ ಪರ ವಿರೋಧದ ಪ್ರತಿಭಟನೆ
Team Udayavani, Feb 16, 2022, 1:35 PM IST
ಆಗ್ರಾ : ಕರ್ನಾಟಕದಲ್ಲಿ ನಡೆಯುತ್ತಿರುವ ‘ಹಿಜಾಬ್’ ವಿವಾದದ ಬಗ್ಗೆ ಪ್ರತಿಭಟನೆಯ ಸಂಕೇತವಾಗಿ ತಾಜ್ ಮಹಲ್ ಆವರಣದಲ್ಲಿ ‘ಹನುಮಾನ್ ಚಾಲೀಸಾ’ ಪಠಿಸಲು ಮುಂದಾದ ಹಿಂದೂ ಪರ ಸಂಘಟನೆಗಳ ಸದಸ್ಯರನ್ನು ಪೊಲೀಸರು ತಡೆದ ಘಟನೆ ಬುಧವಾರ ನಡೆದಿದೆ.
ಶಾಲಾ-ಕಾಲೇಜುಗಳಲ್ಲಿ ಜನರು ತಮ್ಮ ನಂಬಿಕೆಗೆ ಅನುಗುಣವಾಗಿ ಉಡುಪುಗಳನ್ನು ಧರಿಸುವುದನ್ನು ನಿರ್ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು ಮತ್ತು ‘ಹಿಜಾಬ್’ ಹೆಸರಿನಲ್ಲಿ ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.
ಪ್ರತಿಭಟನಾಕಾರರನ್ನು ಶಿಲ್ಪಗ್ರಾಮ್ ಪಾರ್ಕಿಂಗ್‌ನಲ್ಲಿ ತಾಜ್ ಮಹಲ್‌ಗೆ ಪ್ರವೇಶಿಸದಂತೆ ತಡೆಯಲಾಯಿತು ಎಂದು ಸರ್ಕಲ್ ಅಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
“ನಾವು ಜ್ಞಾಪಕ ಪತ್ರವನ್ನು ಸ್ವೀಕರಿಸಿದ್ದೇವೆ ಮತ್ತು ಅದನ್ನು ಸಕ್ಷಮ ಪ್ರಾಧಿಕಾರಕ್ಕೆ ರವಾನಿಸಿದ್ದೇವೆ. ಪ್ರಸ್ತುತ ನಡೆಯುತ್ತಿರುವ ‘ಹಿಜಾಬ್’ ಪ್ರತಿಭಟನೆಯ ಬಗ್ಗೆ ಜ್ಞಾಪಕ ಪತ್ರವನ್ನು ನೀಡಲಾಗಿದೆ,” ಎಂದು ಅವರು ಹೇಳಿದರು.
“ತಾಜ್ ಮಹಲ್ ಅನ್ನು ನಾವು ಕೇಸರಿ ಬಟ್ಟೆಗಳನ್ನು ಧರಿಸಿ ‘ತೇಜೋ ಮಹಲೇ’ (ಶಿವ ದೇವಾಲಯ) ಎಂದು ಪರಿಗಣಿಸಿ ‘ಹನುಮಾನ್ ಚಾಲೀಸಾ’ ಪಠಣ ಮಾಡುವುದಾಗಿ ಘೋಷಿಸಿದ್ದೇವೆ. ಆದರೆ ಪೊಲೀಸರು ನಮ್ಮನ್ನು ತಡೆಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಬ್ರಜ್ ಪ್ರಾಂತ್ಯದ ಉಪಾಧ್ಯಕ್ಷ ಆಶೀಶ್ ಆರ್ಯ ಹೇಳಿದ್ದಾರೆ.
“ಆಗ್ರಾದ ವಿವಿಧ ಹಂತಗಳಲ್ಲಿ, ವಿಎಚ್‌ಪಿ, ಸೇವಾ ಭಾರತಿ ಮತ್ತು ದುರ್ಗಾ ವಾಹಿನಿಯ ಕಾರ್ಯಕರ್ತರನ್ನು ಪೊಲೀಸರು ತಡೆದರು. ಪೊಲೀಸರು ಬಂಧಿಸಿದ ನಂತರ ನಾನು ಸೇವಾ ಭಾರತಿ ಮತ್ತು ದುರ್ಗಾ ವಾಹಿನಿಯ ಸದಸ್ಯರೊಂದಿಗೆ ಹರಿಪರ್ವತ್ ಪೊಲೀಸ್ ಠಾಣೆಯಲ್ಲಿ ‘ಹನುಮಾನ್ ಚಾಲೀಸಾ’ ಪಠಿಸಿದೆ” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
‘ಸೇವಾ ಭಾರತಿ’ಯ ಭಾವನಾ ಶರ್ಮಾ, “ನಾವು ತಾಜ್ ಮಹಲ್ ಆವರಣದಲ್ಲಿ ಶಾಂತಿಯುತವಾಗಿ ‘ಹನುಮಾನ್ ಚಾಲೀಸಾ’ ಪಠಿಸಲು ಬಯಸಿದ್ದೇವೆ. ನಾವು ಟಿಕೆಟ್ ಖರೀದಿಸುತ್ತೇವೆ ಎಂದು ನಾವು ಪೊಲೀಸರಿಗೆ ಹೇಳಿದ್ದೇವೆ, ಆದರೆ ಪಾರ್ಕಿಂಗ್‌ನಲ್ಲಿ ತಾಜ್ ಮಹಲ್‌ನ ಮುಂದೆ ನಮ್ಮನ್ನು ತಡೆದು ನಿಲ್ಲಿಸಲಾಯಿತು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.