ಯುವಜನತೆಗೆ ರಾಜಕೀಯ ತರಬೇತಿ: ವಿನೂತನ ಪರಿಕಲ್ಪನೆ


Team Udayavani, Jun 30, 2023, 5:53 AM IST

politi

ಆಸಕ್ತ ಪದವೀಧರ ಯುವ ಜನತೆಗೆ ರಾಜಕೀಯ ತರಬೇತಿ ನೀಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ತರಬೇತಿ ಸಂಸ್ಥೆಯನ್ನು ಆರಂಭಿಸುವ ಪ್ರಸ್ತಾವವನ್ನು ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಮುಂದಿಟ್ಟಿದ್ದಾರೆ. ಇಂದಿನ ಯುವಪೀಳಿಗೆ ರಾಜಕೀಯದಲ್ಲಿ ಆಸಕ್ತಿ ತೋರುತ್ತಿಲ್ಲ ಮತ್ತು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸುವ ಯುವಜನತೆಗೆ ರಾಜಕೀಯದ ಒಳ-ಹೊರಗುಗಳ ಬಗೆಗೆ ಪ್ರಾಥಮಿಕ ಜ್ಞಾನ ಇರುವುದಿಲ್ಲ ಎಂಬ ಆರೋಪಗಳು ಸರ್ವೇ ಸಾಮಾನ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಸ್ಪೀಕರ್‌ ಅವರ ಈ ಪ್ರಸ್ತಾವ ನಿಜಕ್ಕೂ ಚಿಂತನೀಯ. ರಾಜಕೀಯದಲ್ಲೂ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಬೇಕೆಂಬ ಬೇಡಿಕೆ ಇತ್ತೀಚಿನ ವರ್ಷಗಳಲ್ಲಿ ತೀವ್ರ ಚರ್ಚೆಗೀಡಾಗಿರುವಂತೆಯೇ ಯುವಜನತೆಯನ್ನು ನಾಯಕರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ.

ಕಳೆದೊಂದು ದಶಕದಿಂದೀಚೆಗೆ ರಾಜ್ಯ ಮಾತ್ರವಲ್ಲದೆ ದೇಶದೆಲ್ಲೆಡೆ ರಾಜಕೀಯ ಕ್ಷೇತ್ರದಲ್ಲಿ ಯುವಜನರ ಹವಾ ಒಂದಿಷ್ಟು ಬೀಸತೊಡಗಿದ್ದು ಕೊಂಚ ಆಶಾವಾದ ಮೂಡಿಸಿದೆ. ಆದರೆ ಈ ಯುವ ಪ್ರತಿನಿಧಿಗಳು ರಾಜಕೀಯದಲ್ಲಿ ಇನ್ನಷ್ಟೇ ಪಳಗಬೇಕಾಗಿದ್ದು ಅವರ ಒಟ್ಟಾರೆ ಕಾರ್ಯವೈಖರಿ ದೇಶದ ಗಮನ ಸೆಳೆದಿಲ್ಲ. ಹೀಗಾಗಿ ಶಾಸನ ಸಭೆಗಳಿಗೆ ಚುನಾಯಿತರಾಗಿ ಆಯ್ಕೆಯಾಗಿ ಬರುವ ಯುವಕರಿಗೆ ಆರಂಭದಲ್ಲೇ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ವೇಳೆ  ನೂತನ ಶಾಸಕರಿಗೆ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವಿಕೆ, ಅವರ ಕಾರ್ಯವ್ಯಾಪ್ತಿ, ಸದನದಲ್ಲಿ ಉತ್ತಮ ನಡತೆ ಮತ್ತು ವರ್ತನೆ ತೋರುವುದು ಮತ್ತಿತರ ವಿಚಾರಗಳಲ್ಲಿ ತಜ್ಞರು ಮತ್ತು ರಾಜಕೀಯ ಮುತ್ಸದ್ಧಿಗಳಿಂದ ತರಬೇತಿಯನ್ನು ನೀಡುತ್ತ ಬರಲಾಗಿದೆ. ಇದರಿಂದಾಗಿ ನೂತನ ಶಾಸಕರು ಕೂಡ ಕಲಾಪಗಳಲ್ಲಿ ತಮ್ಮ ಹೊಣೆಗಾರಿಕೆಯನ್ನು ಅರಿತುಕೊಂಡು ಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿದೆ. ಹೀಗಾಗಿ ಸ್ಪೀಕರ್‌ ಯು.ಟಿ.ಖಾದರ್‌ ಅವರು ರಾಜಕೀಯದಲ್ಲಿ ಆಸಕ್ತಿಯುಳ್ಳ ಪದವೀಧರರನ್ನು ಸಜ್ಜು ಗೊಳಿಸಲು ಮುಂದಾಗಿರುವುದು ದೂರದೃಷ್ಟಿಯ ಕ್ರಮವಾಗಿದೆ.

ಸದ್ಯ ಈ ಪ್ರಸ್ತಾವ ಪ್ರಾಥಮಿಕ ಹಂತದಲ್ಲಿದ್ದು ಆದಷ್ಟು ಶೀಘ್ರದಲ್ಲಿ ಇದನ್ನು ಅನುಷ್ಠಾನಗೊಳಿಸುವುದಾಗಿ ಸ್ಪೀಕರ್‌ ಹೇಳಿದ್ದಾರೆ. ಹಾಲಿ ಪ್ರಸ್ತಾ ವನೆಯ ಪ್ರಕಾರ ತರಬೇತಿಯ ಅವಧಿ ಒಂದು ವರ್ಷದ್ದಾಗಿರಲಿದ್ದು ಇದ ರಲ್ಲಿ ಮೊದಲ ಆರು ತಿಂಗಳುಗಳ ಕಾಲ ಪಠ್ಯ ಸಹಿತ ತರಬೇತಿ ಹಾಗೂ ಬಳಿಕದ ಆರು ತಿಂಗಳ ಕಾಲ ಪ್ರಾಯೋಗಿಕ ಅನುಭವ ಪಡೆಯಲು ಶಾಸ ಕರು, ಸಚಿವರು ಮತ್ತು ಸ್ಪೀಕರ್‌ ಅವರ ಕಚೇರಿಗಳಲ್ಲಿ ಇಂಟರ್ನ್ಶಿಪ್‌ಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಇದರ ಜತೆಯಲ್ಲಿ ಹಿರಿಯ ನಾಯಕರು ಮತ್ತು ರಾಜಕೀಯ ಮುತ್ಸದ್ಧಿಗಳು, ಐಎಎಸ್‌ ಅಧಿಕಾ ರಿಗಳನ್ನು ಸಂಸ್ಥೆಗೆ ಕರೆಸಿಕೊಂಡು ಅವರೊಂದಿಗೆ ಸಂವಾದಗಳನ್ನು ಏರ್ಪಡಿಸುವ ಚಿಂತನೆಯನ್ನು ಇದು ಒಳಗೊಂಡಿದೆ.

ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಇಂತಹ ತರಬೇತಿ ನೀಡುತ್ತಿದೆ. ಈ ಸಂಸ್ಥೆಯ ಸಹಾಯ ಪಡೆದು ರಾಜ್ಯದಲ್ಲಿ ತೆರೆಯಲಾಗುವ ರಾಜಕೀಯ ತರಬೇತಿ ಸಂಸ್ಥೆಯ ಪಠ್ಯಕ್ರಮವನ್ನು ಅಖೈರುಗೊಳಿಸಲು ನಿರ್ಧರಿಸಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರ ಈ ವಿನೂತನ ಪರಿಕಲ್ಪನೆ ಯುವಜನತೆಗೆ ರಾಜಕಾರಣದ ವರ್ಣಮಾಲೆಯನ್ನು ಕಲಿಸಿಕೊಡುವುದರ ಜತೆಯಲ್ಲಿ ಅವರ ರಾಜಕೀಯ ಪ್ರವೇಶಕ್ಕೆ ಪ್ರಥಮ ಮೆಟ್ಟಿಲಾಗಲಿದೆ. ಭವಿಷ್ಯದ ರಾಜಕಾರಣಿಗಳನ್ನು ರೂಪಿಸುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ.

 

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.