ಪ್ರವೀಣ್ ಹತ್ಯೆ: ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲಿ ಭಾಗಿ; ಆರಗ ಜ್ಞಾನೇಂದ್ರ
ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇದ್ದರೂ, ರಕ್ತ ಹರಿಸುವುದು ಸರಿಯಲ್ಲ
Team Udayavani, Jul 27, 2022, 11:55 AM IST
ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಹತ್ಯೆ ಮಾಡಲಾಗಿದೆ ಇದು ಖಂಡನೀಯ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ:ಪುತ್ತೂರು ಸುಳ್ಯ ಹಾಗೂ ಕಡಬ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ
ಈ ಮತಾಂಧ ಶಕ್ತಿಗಳು ಒಂದು ರಾಜ್ಯದಲ್ಲಿ ಮಾತ್ರ ಕಾರ್ಯಾಚರಣೆ ಮಾಡುತ್ತಿಲ್ಲ. ಅವರ ಕಾರ್ಯಾಚರಣೆ ಎರಡು ರಾಜ್ಯಗಳಲ್ಲಿ ನಡೆಯುತ್ತಿದೆ. ಗಡಿ ಭಾಗದಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕೇರಳ ಸರ್ಕಾರದ ಜತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.