4 ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ಸಿದ್ಧತೆ

 ಫೆಬ್ರವರಿ ಅಂತ್ಯದಲ್ಲಿ ರಥಯಾತ್ರೆ ಆರಂಭವಾಗುವ ಸಾಧ್ಯತೆ 

Team Udayavani, Jan 21, 2023, 6:55 AM IST

4 ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ಸಿದ್ಧತೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ದಿಕ್ಕುಗಳಿಂದ ಬಿಜೆಪಿ ನಡೆಸಲು ಉದ್ದೇಶಿಸಿರುವ ರಥಯಾತ್ರೆಯ ಅಂತಿಮ ರೂಪುರೇಷೆ ಸಿದ್ಧವಾಗಿದೆ. ಫೆಬ್ರವರಿ ಅಂತ್ಯದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ,  ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು  ನೇತೃತ್ವ ದಲ್ಲಿ ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ.

ರಥಯಾತ್ರೆ ಸಿದ್ಧತೆಗೆ ಸಂಬಂಧಪಟ್ಟಂತೆ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲು ಸಹಿತ ಹಿರಿಯ ಮುಖಂಡರು ಭಾಗವಹಿಸಿ  ಚರ್ಚಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಬೊಮ್ಮಾಯಿ, ಜನವರಿ ಮತ್ತು ಫೆಬ್ರವರಿಯಲ್ಲಿ ಹಮ್ಮಿ ಕೊಳ್ಳುವ ಕಾರ್ಯಕ್ರಮಗಳು, ಅಧಿವೇಶನದ ಜತೆಗೇ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಫೆಬ್ರವರಿ ಅಂತ್ಯ ದವರೆಗೆ ಜನ ಸಂಕಲ್ಪ ಯಾತ್ರೆ ಮುಂದುವರಿಯ ಲಿದ್ದು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಣಾಳಿಕೆ ಸಿದ್ಧಪಡಿ ಸಲಾಗುವುದು. ರಾಷ್ಟ್ರೀಯ ನಾಯಕರ ಕಾರ್ಯಕ್ರಮ ಆಯೋಜನೆ ಬಗ್ಗೆಯೂ ಚರ್ಚಿಸಲಾಯಿತು ಎಂದರು.

ಶನಿವಾರ ಪ್ರಾರಂಭವಾಗುವ ಬೂತ್‌ ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಳ್ಳುವರು. ನಾನು ತುಮಕೂರಿನಲ್ಲಿ ಯಾತ್ರೆಯನ್ನು ಆರಂಭಿಸುತ್ತಿವೆ ಎಂದು ತಿಳಿಸಿದರು.

ರಾಜ್ಯ ಹಾಗೂ ಕೇಂದ್ರ ಸರಕಾರದ ಕಾರ್ಯಕ್ರಮಗಳ ಪಟ್ಟಿಯನ್ನು ಮನೆಮನೆಗೆ ತಲುಪಿಸುವುದು, ತಾಲೂಕು ಮಟ್ಟದ ಸಮ್ಮೇಳನ, ಹಲವು ಮೋರ್ಚಾಗಳ ಜಿಲ್ಲಾ ಮಟ್ಟದ ಸಮಾವೇಶ ಆಯೋಜನೆಗೂ ನಿರ್ಧರಿಸಲಾಗಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರು ನಿರ್ಧರಿಸುವರು. ಚುನಾವಣೆ ತಯಾರಿ, ಪಕ್ಷದ ಸಂಘಟನೆ ಹಾಗೂ ಜನಸಂಪರ್ಕದ ಬಗ್ಗೆ ಪ್ರಾಥಮಿಕ ಹಂತದ ಚರ್ಚೆ ಮಾಡಿದ್ದೇವೆ ಎಂದರು.

ಮೊದಲ ಸಭೆಗೇ ಬಿಎಸ್‌ವೈ ಗೈರು
ಚುನಾವಣ ದೃಷ್ಟಿಯಿಂದ ಆಯೋಜಿಸಿದ್ದ ಬಿಜೆಪಿಯ ಮೊದಲ ಸಭೆಗೆ   ಬಿ.ಎಸ್‌. ಯಡಿಯೂರಪ್ಪ ಗೈರಾದ ಬಿಸಿ ತಟ್ಟಿತು. ಅವರನ್ನು ಆಹ್ವಾನಿಸದಿದ್ದುದು ಪಕ್ಷದ ವಲಯದಲ್ಲಿ ಚರ್ಚೆ ಹುಟ್ಟು ಹಾಕಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ, ಇದು ಪ್ರಾಥಮಿಕ ಹಂತದ ಸಭೆ. ಹೀಗಾಗಿ ಯಡಿಯೂರಪ್ಪ ಅವರು ಬಂದಿಲ್ಲ. ರಥಯಾತ್ರೆಯ ದಿನಾಂಕ ಇತ್ಯಾದಿ ನಿಗದಿಯಾದ ಬಳಿಕ ಯಡಿಯೂರಪ್ಪ ಅವರ ಜತೆಯಾಗಿಯೇ ಯಾತ್ರೆ ನಡೆಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಯಾರು ಉಳಿಯಲಿದ್ದಾರೆ ಎಂಬುದನ್ನು ಅವರು ಗಮನಿಸಲಿ. ಡಿ.ಕೆ. ಶಿವಕುಮಾರ್‌ ಹತಾಶೆಯಿಂದ ಈ ರೀತಿ (ಹಾವೇರಿಯಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆಬರುತ್ತಾರೆ) ಮಾತನಾಡುತ್ತಿದ್ದಾರೆ.
-ಬಸವರಾಜ ಬೊಮ್ಮಾಯಿ,  ಮುಖ್ಯಮಂತ್ರಿ

 

ಟಾಪ್ ನ್ಯೂಸ್

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.