ಜೂನ್‌ನಲ್ಲಿ ಡಿಪ್ಲೊಮಾ ಪರೀಕ್ಷೆಗೆ ಸಿದ್ಧತೆ
Team Udayavani, May 24, 2020, 9:15 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೂನ್ ಅಥವಾ ಜುಲೈನಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಸಲು ತಾಂತ್ರಿಕ ಶಿಕ್ಷಣ ಇಲಾಖೆ ಸಜ್ಜಾಗುತ್ತಿದೆ.
ಜೂನ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಎಲ್ಲ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಆದರೆ ಪರೀಕ್ಷೆಯ ವೇಳಾಪಟ್ಟಿ ಇನ್ನೂ ಪ್ರಕಟಿಸಿಲ್ಲ. ನಾಲ್ಕನೇ ಹಂತದ ಲಾಕ್‌ಡೌನ್ ಸಡಿಲವಾದ ಅನಂತರ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಪರೀಕ್ಷಾ ದಿನಾಂಕ ನಿಗದಿಗೆ ಸರಕಾರದ ಅನುಮತಿ ಅಗತ್ಯವಿದೆ. ಸರಕಾರದ ನಿರ್ದೇಶನದಂತೆ ವೇಳಾಪಟ್ಟಿ ಪ್ರಕಟಿಸಲಿದ್ದೇವೆ. ಅದಕ್ಕೂ ಪೂರ್ವದಲ್ಲಿ ಎಲ್ಲ ರೀತಿಯ ಭದ್ರತೆ ಮತ್ತು ಸುರಕ್ಷತ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಲು ಕಾಲೇಜು ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಲಾಖೆಯಿಂದ ಮಾರ್ಗಸೂಚಿ
ಪರೀಕ್ಷಾ ಕೇಂದ್ರದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಬೋಧಕ, ಬೋಧಕೇತರ ವರ್ಗ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಸಂಸ್ಥೆ ಆವರಣ, ಕೊಠಡಿ, ಪರೀಕ್ಷಾ ಕೊಠಡಿ, ಶೌಚಾಲಯ, ನೀರು ಸಂಗ್ರಹಣ ಟ್ಯಾಂಕ್ ಹಾಗೂ ಸುತ್ತಲಿನ ಪರಿಸರ ಸ್ವತ್ಛವಾಗಿಡಬೇಕು. ವಿದ್ಯಾರ್ಥಿ ಹಾಗೂ ಸಿಬಂದಿ ವರ್ಗಕ್ಕೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪರೀಕ್ಷಾ ಬರುವ ವಿದ್ಯಾರ್ಥಿ, ಪ್ರಾಧ್ಯಾಪಕರು ಸ್ಯಾನಿಟೈಸರ್ ಬಳಸಬೇಕು. ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿರುತ್ತದೆ. ಸಾಮಾಜಿಕ ಅಂತರವನ್ನು ಪಾಲಿಸಬೇಕು. ವಿಶ್ವ ಆರೋಗ್ಯ ಸಂಸ್ಥೆ, ಸರಕಾರಗಳು ಹಾಗೂ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಪಾಲಿಸಬೇಕು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.