ಟಿಇಟಿ ಭ್ರಷ್ಟಾಚಾರ: 269 ಶಿಕ್ಷಕರು ಹುದ್ದೆಯಿಂದ ವಜಾ, ಸಂಬಳಕ್ಕೆ ತಡೆ: ಕೋಲ್ಕತಾ ಹೈಕೋರ್ಟ್
ಸಂಬಳವನ್ನು ತಡೆ ಹಿಡಿಯುವಂತೆ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.
Team Udayavani, Jun 13, 2022, 5:43 PM IST
ನವದೆಹಲಿ: ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 269 ಶಿಕ್ಷಕರು ಶಾಲೆಗೆ ಹಾಜರಾಗುವುದನ್ನು ನಿಷೇಧಿಸಿ ಕೋಲ್ಕತಾ ಹೈಕೋರ್ಟ್ ಸೋಮವಾರ (ಜೂನ್ 13) ತೀರ್ಪು ನೀಡಿದ್ದು, ಈ ಬಗ್ಗೆ ಸಿಬಿಐ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿದೆ.
ಪ್ರಾಥಮಿಕ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಭ್ರಷ್ಟಾಚಾರ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿತ್ತು. ಈ ನಿಟ್ಟಿನಲ್ಲಿ ಕೋಲ್ಕತಾ ಹೈಕೋರ್ಟ್, 2017ರಲ್ಲಿ ಪ್ರಕಟಿಸಿರುವ ಶಿಕ್ಷಕರ ನೇಮಕಾತಿ ಪಟ್ಟಿ ಮತ್ತು ನೇಮಕಾತಿ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ 269 ಶಿಕ್ಷಕರನ್ನು ಅವರ ಹುದ್ದೆಯಿಂದ ವಜಾಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಅಷ್ಟೇ ಅಲ್ಲ 269 ಶಿಕ್ಷಕರು ಶಾಲೆಗೆ ಹಾಜರಾಗುವುದನ್ನು ನಿರ್ಬಂಧಿಸಿ, ಅವರ ಸಂಬಳವನ್ನು ತಡೆ ಹಿಡಿಯುವಂತೆ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.
ಕೋಲ್ಕತಾ ಹೈಕೋರ್ಟ್ ಆದೇಶದಲ್ಲೇನಿದೆ?
- 2017ರಲ್ಲಿನ 2ನೇ ನೇಮಕಾತಿ ಪಟ್ಟಿ ಕಾನೂನು ಬಾಹಿರವಾಗಿದೆ
- ಎರಡನೇ ನೇಮಕಾತಿಯಲ್ಲಿ ಆಯ್ಕೆಯಾದ 269 ಮಂದಿ ಶಿಕ್ಷಕರ ಆಯ್ಕೆ ಕಾನೂನು ಬಾಹಿರವಾಗಿದೆ.
- 269 ಶಿಕ್ಷಕರ ಸಂಬಳವನ್ನು ಅಮಾನತಿನಲ್ಲಿರಿಸುವಂತೆ ಸೂಚನೆ
- 269 ಶಿಕ್ಷಕರು ಯಾವುದೇ ಕಾರಣಕ್ಕೂ ಶಾಲೆಯೊಳಗೆ ಬರುವಂತಿಲ್ಲ, ಬೋಧಿಸುವಂತೆಯೂ ಇಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.