ಇಂಟೆಲಿಜೆಂಟ್, ಶಾರ್ಪ್ ಮ್ಯಾನ್: ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡರ ಮೆಚ್ಚುಗೆ
Team Udayavani, Feb 11, 2021, 6:20 AM IST
ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಇಂಟೆಲಿಜೆಂಟ್, ಶಾರ್ಪ್ ಮ್ಯಾನ್ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಬಣ್ಣಿಸಿದರು.
ನಾನು ನಡೆದು ಬಂದ ಹಾದಿ, ಹಿನ್ನೆಲೆ, ನನ್ನ ವ್ಯಕ್ತಿತ್ವವನ್ನು ತಿಳಿದುಕೊಂಡೇ ಅವರು ನನ್ನ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನನ್ನ ಬಗ್ಗೆ ಚೆನ್ನಾಗಿ ಗೊತ್ತಿದೆ. ಸದನದಲ್ಲಿ ರೈತರ ಹೋರಾಟದ ಕುರಿತು ತುಂಬಾ ಸೊಗಸಾಗಿ ಮಾತನಾಡಿದರು. ಆದರೆ ಹೋರಾಟವನ್ನು ಹೇಗೆ ಅಂತ್ಯಗೊಳಿಸಬೇಕು ಎಂಬುದನ್ನೇ ಹೇಳಲಿಲ್ಲ. ದಿಲ್ಲಿ ರೈತರ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಬಾರದು. ರೈತರಿಗೆ ತಮ್ಮ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯ ಇರುತ್ತದೆ. ರೈತರ ಮೇಲೆ ಅಂಥ ಕಠಿನ ಕ್ರಮ ಜರಗಿಸುವ ಅಗತ್ಯವಿಲ್ಲ. ಲೋಕಸಭೆಯಲ್ಲಿ ಬಹುಮತ ಇದೆ ಎಂಬ ಕಾರಣಕ್ಕೆ ಕೃಷಿ ಮಸೂದೆಗಳು ಪಾಸ್ ಆದವು. ಆದರೆ ಮರುದಿನವೇ ರಾಜ್ಯಸಭೆಯಲ್ಲಿ ಮಂಡಿಸುವ ಅನಿವಾರ್ಯತೆ ಇರಲಿಲ್ಲ.
ಬಿಎಸ್‌ವೈಗೆ ಅಡ್ಡಿ ಮಾಡಲಾರೆ
ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ನಾವು ಮುಂದಾಗುವುದಿಲ್ಲ. ಮುಂದಿನ 2.5 ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರಲಿ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳಿಗೆ ಪಕ್ಷ ಸ್ಪರ್ದಿಸುವುದಿಲ್ಲ ಎಂದು ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಅವರ ಹೇಳಿಕೆ ಸಮಂಜಸವಾಗಿದೆ. ಈಗ ನಮ್ಮ ಬಳಿ ಚುನಾವಣೆ ಎದುರಿಸಲು ಹಣ ಇಲ್ಲ.
– ಎಚ್.ಡಿ. ದೇವೇಗೌಡ, ಜೆಡಿಎಸ್ ರಾಷ್ಟ್ರಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!
Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.