ನಾಳೆ 50 ಲಕ್ಷ ಕಾರ್ಯಕರ್ತರ ಜತೆ ಪ್ರಧಾನಿ ಸಂವಾದ

Team Udayavani, Apr 26, 2023, 7:58 AM IST

modi ji

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನಾಕರ್ಷಣೆಗಾಗಿ ದಿನಕ್ಕೊಂದು ತಂತ್ರಗಾರಿಕೆ ನಡೆಸುತ್ತಿರುವ ಬಿಜೆಪಿ ಗುರುವಾರ ರಾಜ್ಯದ 50 ಲಕ್ಷ ಕಾರ್ಯಕರ್ತರ ಜತೆಗೆ ವರ್ಚುವಲ್‌ ವಲ್‌ ಸಂವಾದ ನಡೆಸಲು ತೀರ್ಮಾನಿಸಿದೆ.

ಕೇಂದ್ರ ಸಚಿವೆ, ಬಿಜೆಪಿ ಚುನಾವಣಾ ಸಂಚಾಲಕಿ ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಈ ವಿಷಯ ತಿಳಿಸಿದ್ದಾರೆ. ರಾಜ್ಯದ 58,112 ಬೂತ್‌, 1,680 ಜಿಲ್ಲಾ ಪಂಚಾಯತ್‌ ಮಟ್ಟದಲ್ಲಿ ಈ ಸಂವಾದ ಹಮ್ಮಿಕೊಳ್ಳಲಾಗಿದೆ. ಬೂತ್‌ ಮಟ್ಟದಲ್ಲಿ ಟಿ.ವಿಗಳನ್ನು, ಜಿಪಂ ಮಟ್ಟದಲ್ಲಿ ಎಲ್‌ಇಡಿ ಸ್ಕ್ರೀನ್‌ ಅಳವಡಿಸಲಾಗಿದೆ. ಗುರುವಾರ ಬೆಳಗ್ಗೆ 9.30ಕ್ಕೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲಿದ್ದು, ಈಗಾಗಲೇ 24 ಲಕ್ಷ ಕಾರ್ಯಕರ್ತರು ಮೋದಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಬೂತ್‌ ಮಟ್ಟದಲ್ಲಿ 58 ಸಾವಿರ ಸ್ಥಳಗಳಲ್ಲಿ ಈ ಆ್ಯಪ್‌ ಗಳ ಮೂಲಕ ಕಾರ್ಯಕರ್ತರು ಸಂವಾದ ವೀಕ್ಷಿಸಲಿದ್ದಾರೆ. ಎಲ್‌ಇಡಿ ಸ್ಕ್ರೀನ್‌ ಇರುವ ಕಡೆ ಸುಮಾರು 1,000, ಬೂತ್‌ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5,000 ನಮೋಆ್ಯಪ್‌ ಡೌನ್‌ ಲೋಡ್‌ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿಯವರು ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್‌ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.

ಮಂಗಳವಾರದಿಂದ ಎರಡು ದಿನದ “ವಿಶೇಷ ಮಹಾ ಪ್ರಚಾರ ಅಭಿಯಾನ” ಆರಂಭವಾಗಿದೆ. ಎಲ್ಲ 224 ಕ್ಷೇತ್ರಗಳಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬೆಳಿಗ್ಗೆ ಮಠ-ಮಂದಿಗಳಿಗೆ ಭೇಟಿ ನೀಡಿ ಆ ನಂತರ ರಾಷ್ಟ್ರ ನಾಯಕರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ. ಮನೆ-ಮನೆಗೂ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ತಿಳಿಸುತ್ತಿದ್ದಾರೆ. ಅಭಿಯಾನದ ಭಾಗವಾಗಿ ಸುದ್ದಿಗೋಷ್ಠಿಗಳು, ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಂವಾದ, ರೋಡ್‌ ಶೋ, ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ನವ ಕರ್ನಾಟಕ ನಿರ್ಮಾಣದ ಸಂಕಲ್ಪ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮಾತನಾಡಿ, ಪ್ರಧಾನಿ ಮೋದಿ ಅವರು ನವ ಕರ್ನಾಟಕ ನಿರ್ಮಾಣದ ಸಂಕಲ್ಪ ಹೊಂದಿದ್ದಾರೆ. ಆದರೆ ಕಾಂಗ್ರೆಸ್‌ ಸುಳ್ಳು, ಒಡೆದಾಳುವ, ದಾರಿತಪ್ಪಿಸುವ, ಒಂದು ಸಮುದಾಯವನ್ನು ಓಲೈಸುವ ಕೆಲಸವನ್ನು ಮಾಡುತ್ತಿದೆ. ಜನರು ಕಾಂಗ್ರೆಸ್‌ ಪಕ್ಷವನ್ನು ಸಂಪೂರ್ಣ ತಿರಸ್ಕರಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

CMSIDDU1

Operation Fear: ಕಾಂಗ್ರೆಸ್‌ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ

Joshi–CTRavi

Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್‌ ಜೋಶಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.