KGF ಚಾಪ್ಟರ್ 2…ಅಮೆಜಾನ್ ಪ್ರೈಮ್ ನಲ್ಲಿ ಹೆಚ್ಚುವರಿ ಶುಲ್ಕವಿಲ್ಲದೇ ವೀಕ್ಷಿಸಿ;ದಿನಾಂಕ ಘೋಷಣೆ
ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ಲಭ್ಯವಿದೆ
Team Udayavani, May 31, 2022, 3:22 PM IST
ಬೆಂಗಳೂರು: ಜಗತ್ತಿನಾದ್ಯಂತ ಭರ್ಜರಿ ಯಶಸ್ಸು ಹಾಗೂ ಬಾಕ್ಸಾಫೀಸ್ ನಲ್ಲಿ ದಾಖಲೆ ನಿರ್ಮಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಜೂನ್ 3ರಿಂದ ಪ್ರೈಮ್ ಬಳಕೆದಾರರಿಗೆ ಲಭ್ಯವಾಗಲಿದೆ.
ಇದನ್ನೂ ಓದಿ:ಬೆಂಗಳೂರು: ತರಕಾರಿ ಕತ್ತರಿಸುವ ಚಾಕುವಿಗಾಗಿ ಶುರುವಾದ ಅಡುಗೆ ಭಟ್ಟರ ಜಗಳ ಕೊಲೆಯಲ್ಲಿ ಅಂತ್ಯ
ಜೂನ್ 3ರಿಂದ ಕೆಜಿಎಫ್ ಚಾಪ್ಟರ್ 2 ಸಿನಿಮಾವನ್ನು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೇ ವೀಕ್ಷಿಸಬಹುದಾಗಿದೆ ಎಂದು ಅಮೆಜಾನ್ ಪ್ರೈಮ್ ತನ್ನ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಮುಖ್ಯಪಾತ್ರದಲ್ಲಿ ನಟಸಿರುವ ಸಿನಿಮಾ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ಲಭ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
2018 ರಲ್ಲಿ ತೆರೆಕಂಡ ಕೆಜಿಎಫ್: ಚಾಪ್ಟರ್ 1ರ ಮುಂದುವರಿದ ಭಾಗ ಇದಾಗಿದ್ದು, ಕೋಲಾರ್ ಗೋಲ್ಡ್ ಫೀಲ್ಡ್ಸ್‌ನಲ್ಲಿ ರಾಕಿ ಬೆಳೆದ ಕಥಾ ಹಂದರ ಹೊಂದಿದೆ. ಆತ ಒಂದು ಕಡೆ ತನ್ನ ಮಿತ್ರರ ಜೊತೆಗೆ ತನ್ನ ಕ್ಷೇತ್ರವನ್ನು ವಿಸ್ತರಿಸುತ್ತಿದ್ದರೆ, ಸರ್ಕಾರ ಇವನನ್ನು ಮುಗಿಸಲು ಹೊಂಚು ಹಾಕುತ್ತಿರುತ್ತದೆ. ರಾಕಿ ಎಲ್ಲ ಕಡೆಯಿಂದಲೂ ಎದುರಾಗುವ ಶತ್ರುಗಳನ್ನು ಹೇಗೆ ಎದುರಿಸುತ್ತಾನೆ ಎಂಬುದು 2ನೇ ಚಾಪ್ಟರ್‌ನಲ್ಲಿನ ಕುತೂಹಲಕರ ಸಂಗತಿಯಾಗಿದೆ. ನರಾಚಿಯಲ್ಲಿನ ಜನರಿಗೆ ಈತ ಹೀರೋ ಆದರೆ, ತನ್ನ ತಾಯಿಯ ಕನಸನ್ನು ಪೂರೈಸುವುದಕ್ಕೆ ಅಧೀರ, ಇನಾಯತ್ ಖಲೀಲ್ ಮತ್ತು ರಮಿಕಾ ಸೇನ್‌ರಿಂದ ಪ್ರತಿರೋಧವನ್ನು ಹೇಗೆ ಎದುರಿಸುತ್ತಾನೆ ಎಂಬುದು ಕೆಜಿಎಫ್ ಚಾಪ್ಟರ್ 2ರ ಪ್ರಮುಖ ಕಥೆಯಾಗಿದೆ.
ಯಶ್ ಜೊತೆಗೆ ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರಾಜ್, ರಾವ್ ರಮೇಶ್, ಈಶ್ವರಿ ರಾವ್, ಅಚ್ಯುತ್ ಕುಮಾರ್ ಮತ್ತು ಅರ್ಚನಾ ಜೋಯಿಸ್ ಹಾಗೂ ಇತರರು ಪ್ರಮುಖ ಪಾತ್ರದಲ್ಲಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್: ಚಾಪ್ಟರ್ 2 ಅನ್ನು ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.