ರಾಜ್ಯದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯ ನಿರ್ವಹಿಸಲಿವೆ :ಸಚಿವ ಸುಧಾಕರ್

ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪಿಎಚ್ ಸಿ ನಿರ್ಮಾಣಕ್ಕೆ ಕ್ರಮ

Team Udayavani, Nov 12, 2020, 6:34 PM IST

ರಾಜ್ಯದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರಗಳು 24×7 ಗಂಟೆ ಕಾರ್ಯನಿರ್ವಹಿಸಲಿವೆ : ಸಚಿವ ಸುಧಾಕರ್

ಬೆಂಗಳೂರು : ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ 2,300 ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕೆಂಬ ನಿಯಮವಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಈ ನಿಯಮದಂತೆ ಆಸ್ಪತ್ರೆಗಳು ಇಲ್ಲ. ಹಾಗಾಗಿ ವಿಶ್ವಬ್ಯಾಂಕ್ ಸಹಕಾರದಿಂದ ಮುಂದಿನ ಮೂರು ವರ್ಷಗಳಲ್ಲಿ ಪಿಎಚ್ ಸಿಗಳನ್ನು ನಿರ್ಮಿಸಲಾಗುವುದು. ಜೊತೆಗೆ ಈಗ ಇರುವ ಪಿಎಚ್ ಸಿಗಳನ್ನು 24*7 ಸೇವೆ ನೀಡುವ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆರಂಭವಾಗಿ ದೊಡ್ಡ ಆಸ್ಪತ್ರೆಗಳವರೆಗೂ ಗುಣಮಟ್ಟದಲ್ಲಿ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ. ಕೆಲ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಹೋಗಿ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆರೋಗ್ಯ ಸಿಬ್ಬಂದಿ ಸೇವೆ ಸಲ್ಲಿಸುವ ಪ್ರದೇಶದ ಆಧಾರದಲ್ಲಿ ಬಡ್ತಿ, ವೇತನ, ಮಕ್ಕಳಿಗೆ ಶಿಕ್ಷಣ ನೀಡುವ ಅಂಶಗಳನ್ನು ಈ ಹೊಸ ನೀತಿಯಲ್ಲಿ ಸೇರಿಸಲಾಗುವುದು ಎಂದು ವಿವರಿಸಿದರು.

ಇದನ್ನೂ ಓದಿ:ಧರ್ಮಶಾಲಾದ ಕೆಫೆಯಲ್ಲಿ ಬಾಲಿವುಡ್ ನಟ ಬಾಸ್ರಾ ಆತ್ಮಹತ್ಯೆಗೆ ಶರಣು

1,250 ಎಂಬಿಬಿಎಸ್ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಜೊತೆಗೆ 1,500 ಹಿರಿಯ ರೆಸಿಡೆಂಟ್ ವೈದ್ಯರನ್ನು ನೇಮಿಸಲಾಗುವುದು. ಡಿಸೆಂಬರ್ ಅಥವಾ ಜನವರಿ ವೇಳೆಗೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ. ಅರೆ ವೈದ್ಯಕೀಯ, ನರ್ಸಿಂಗ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಉದ್ದೇಶವಿದ್ದು, ಅದಕ್ಕೆ ತಕ್ಕಂತೆ ನೀತಿಯಲ್ಲಿ ಬದಲಾವಣೆ ತರಲಾಗುವುದು ಎಂದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.