ರಾಜ್ಯದ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ; ಸಿಎಂ ಬೊಮ್ಮಾಯಿ ದಿಲ್ಲಿ ಪ್ರವಾಸ ಫಲಪ್ರದ
Team Udayavani, Dec 1, 2022, 6:30 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಬಾರಿಯ ದಿಲ್ಲಿ ಪ್ರವಾಸ ಫಲಪ್ರದವಾಗಿದ್ದು, ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿ ಬಾಕಿಯಿರುವ ರಾಜ್ಯದ ಹಲವು ಯೋಜನೆಗಳ ತ್ವರಿತಗತಿಯ ಅನುಷ್ಠಾನಕ್ಕೆ ಸಮಾಲೋಚನೆ ನಡೆಸಿದರು.
ಮೂರು ದಿನಗಳ ಕಾಲ ಸಂಪೂರ್ಣವಾಗಿ ರಾಜ್ಯದ ಅಭಿವೃದ್ದಿ ಯೋಜನೆಗಳಿಗೆ ಸಂಬಂಧಿಸಿ ಕೇಂದ್ರ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳಿಗೆ ಅಗತ್ಯವಾದ ಅನುಮತಿ ಹಾಗೂ ಇತರ ಒಪ್ಪಿಗೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ.
ಕೇಂದ್ರ ಗೃಹ ಮಂತ್ರಿ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ರಕ್ಷಣ ಇಲಾಖೆಯ ಸುಪರ್ದಿಯಲ್ಲಿರುವ ಜಮೀನನ್ನು ರಾಜ್ಯ ಸರಕಾರಕ್ಕೆ ಹಸ್ತಾಂತರಿಸುವ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಯವರು, ಬೆಳಗಾವಿ ಜಿಲ್ಲೆ ಯಲ್ಲಿರುವ 732.24 ಎಕರೆ ಜಮೀನು ರಕ್ಷಣ ಇಲಾಖೆಗೆ ಅಗತ್ಯವಿಲ್ಲದ ಕಾರಣ ಈ ಜಾಗದಲ್ಲಿ ಜ್ಞಾನಾಧಾರಿತ ಆರ್ಥಿಕತೆಗೆ ಮತ್ತಷ್ಟು ಒತ್ತು ನೀಡುವ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮನವಿ ಮಾಡಿದರು.
ಕೇಂದ್ರ ಜಲಶಕ್ತಿ ಮಂತ್ರಿ ಗಜೇಂದ್ರ ಶೆಖಾವತ್ ಅವರನ್ನು ಭೇಟಿ ಮಾಡಿ ನೀರಾವರಿ ಯೋಜನೆಗಳ ಬಗ್ಗೆ, ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ಜವುಳಿ ಪಾರ್ಕ್ ಬಗ್ಗೆ, ಕೇಂದ್ರ ಅರಣ್ಯ ಪರಿಸರ ಸಚಿವರಾದ ಭೂಪೇಂದ್ರ ಯಾದವ್ ಅವರೊಂದಿಗೆ ಕರ್ನಾಟಕದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ವನ್ಯಧಾಮ ಹಾಗೂ ಅರಣ್ಯ ಕಾಯ್ದೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದರು.
ಗಡಿ ವಿವಾದಕ್ಕೆ ಸಂಬಂಧಿಸಿ ಹಿರಿಯ ವಕೀಲ ರೋಹಟಗಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಲ್ಲದೆ ಮತ್ತೂಬ್ಬ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರನ್ನೂ ಭೇಟಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.