ಶೇ. 50 ಹಾಸಿಗೆ ಮೀಸಲು : ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರಕಾರದ ಸೂಚನೆ
Team Udayavani, Apr 6, 2021, 7:25 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕುಪೀಡಿತರ ಚಿಕಿತ್ಸೆಗೆ ಸರಕಾರಿ ಆಸ್ಪತ್ರೆಗಳಲ್ಲಿ 33 ಸಾವಿರ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಜತೆಗೆ ಖಾಸಗಿ ಆಸ್ಪತ್ರೆಗಳು ಶೇ. 50ರಷ್ಟು ಹಾಸಿಗೆ ಗಳನ್ನು ಸರಕಾರದಿಂದ ಶಿಫಾರಸಾಗುವ ಸೋಂಕು ಪೀಡಿತರಿಗೆ ಮೀಸಲಿಡುವಂತೆ ಸೂಚಿಸಲಾಗಿದೆ.
ಕೊರೊನಾ ಹೆಚ್ಚಳವಾಗುತ್ತಿದ್ದು, ಸೋಂಕು ಪೀಡಿತರ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳ ಲಾಗಿದೆ. ಸದ್ಯ 33,697 ಹಾಸಿಗೆಗಳನ್ನು ಸರಕಾರಿ ಆಸ್ಪತ್ರೆಗಳಲ್ಲಿ ಮೀಸಲಿಡಲಾಗಿದೆ. 15,733 ಆಕ್ಸಿಜನ್ ಸಹಿತ ಹಾಸಿಗೆಗಳಿದ್ದು, ಈ ಪೈಕಿ 10,083 ಹಾಸಿಗೆಗಳನ್ನು ಕೊರೊನಾಗೆ ಮೀಸಲಿಡ ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ತಿಳಿ ಸಿ ದ್ದಾರೆ.
ಖಾಸಗಿ ಆಸ್ಪತ್ರೆಗಳು ಶೇ. 50ರಷ್ಟು ಹಾಸಿಗೆ ಗಳನ್ನು ಕೊರೊನಾ ಪೀಡಿತರಿಗೆ ಮೀಸಲಿಡಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಾಸಿಗೆಗಳನ್ನು ಮೀಸಲಿರಿಸುವ ಕುರಿತು 2020 ಜೂನ್‌ನ ಸರಕಾರದ ಸುತ್ತೋಲೆಯ ನಿರ್ದೇಶನವನ್ನು ಪಾಲಿಸಬೇಕು. ಇದನ್ನು ನೋಡಲ್ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸಾ ವೆಚ್ಚ ಮರುಪಾವತಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೋಡಿಕೊಳ್ಳುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆಸ್ಪತ್ರೆಗಳಲ್ಲಿ ವಿಧಿಸುವ ದರ ಪಟ್ಟಿ ಬಗ್ಗೆಯೂ ಉಲ್ಲೇಖೀಸಲಾಗಿದೆ.
ಯುವಜನರು, ಮಧ್ಯವಯಸ್ಕರ ಸಾವು
ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಒಂದೇ ದಿನ ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಸೋಮವಾರ ಒಂದೇ ದಿನ 32 ಸಾವು ಸಂಭವಿಸಿದೆ. ಮಧ್ಯವಯಸ್ಕರು, 25 ವರ್ಷದ ಯುವ ಜನರು ಸಾವಿಗೀಡಾಗಿರುವುದು ಆತಂಕ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸಾವಿನ ಆಡಿಟ್ ಮಾಡಬೇಕೆಂದು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದೆ. ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆ ಬೇಗ ಹರಡು ತ್ತಿದೆ. ಇದರ ತೀವ್ರತೆ ಕಡಿಮೆ ಇದೆಯೋ ಅಥವಾ ಹೆಚ್ಚಿದೆಯೋ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಅದನ್ನು ಎದುರಿಸಲು ಬೇಕಾದ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಸುಧಾಕರ್ ತಿಳಿಸಿದರು.
ಯಾರಿಗೆ ಎಷ್ಟು ದರ?
ಸರಕಾರದ ಮೂಲಕ ಕಳುಹಿಸುವ ರೋಗಿಗಳಿಗೆ
ಜನರಲ್ ವಾರ್ಡ್ : 5,200 ರೂ.
ಆಕ್ಸಿಜನ್ ಹಾಸಿಗೆ : 7,000 ರೂ.
ವೆಂಟಿಲೇಟರ್ ರಹಿತ ಐಸಿಯು ಹಾಸಿಗೆ : 8,500 ರೂ.
ವೆಂಟಿಲೇಟರ್ ಸಹಿತ ಹಾಸಿಗೆ : 10,000 ರೂ.
ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವವರಿಗೆ
ಜನರಲ್ ವಾರ್ಡ್ : 10,000 ರೂ.
ಆಕ್ಸಿಜನ್ ಹಾಸಿಗೆ ; 12,000 ರೂ.
ವೆಂಟಿಲೇಟರ್ ರಹಿತ ಐಸಿಯು ಹಾಸಿಗೆ : 15,000 ರೂ.
ವೆಂಟಿಲೇಟರ್ ಸಹಿತ ಹಾಸಿಗೆ : 25,000 ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.