ಎತ್ತಿನ ಭುಜ: ಅಧಿಕಾರಿಗಳ ಖಡಕ್ ನಿರ್ಧಾರ; ಮ್ಯಾರಥಾನ್ ರದ್ದು
ಗಮನ ಸೆಳೆದ ಉದಯವಾಣಿ ಆನ್‍ಲೈನ್ ವರದಿ
Team Udayavani, Nov 27, 2021, 2:59 PM IST
ಚಿಕ್ಕಮಗಳೂರು: ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರಿಂದ ವ್ಯಕ್ತವಾದ ವಿರೋಧದ ಹಿನ್ನೆಲೆಯಲ್ಲಿ ಎತ್ತಿನಭುಜ ಎತ್ತಿನ ಭುಜ: ಅಧಿಕಾರಿಗಳ ಖಡಕ್ ನಿರ್ಧಾರ; ಮ್ಯಾರಥಾನ್ ರದ್ದುಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಇಂದು ನಡೆಯಲಿದ್ದ ಮ್ಯಾರಥಾನ್ ರದ್ದಾಗಿದೆ.
ಅರಣ್ಯ ಪ್ರದೇಶ ಹೊರತುಪಡಿಸಿ ಉಳಿದ ಜಾಗದಲ್ಲಿ ಪೂರ್ವನಿಗದಿಯಂತೆ ಮ್ಯಾರಥಾನ್ ಓಟ ನಡೆದಿದ್ದು, ಇದಕ್ಕೆ ಅನುಮತಿ ನೀಡಿದ ಕ್ರಮವು ಟೀಕೆಗೆ ಗುರಿಯಾಗಿದೆ.
ಎತ್ತಿನಭುಜ ವ್ಯಾಪ್ತಿಯಲ್ಲಿ ಮ್ಯಾರಥನ್ ನಡೆಯುತ್ತಿರುವ ಬಗ್ಗೆ ಉದಯವಾಣಿ ವೆಬ್ ಸುದ್ದಿ ಮಾಡಿ ಗಮನ ಸೆಳೆದಿದ್ದು ತಕ್ಷಣ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆ ಗಮನಕ್ಕೆ ತಂದ ಫಲವಾಗಿ ಅರಣ್ಯ ಪ್ರದೇಶದಲ್ಲಿ ಮ್ಯಾರಥಾನ್ ಓಟಕ್ಕೆ ಕಡಿವಾಣ ಬಿದ್ದಿದೆ.
ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಎತ್ತಿನ ಭುಜ ಪ್ರದೇಶ ಅತ್ಯಂತ ನೈಸರ್ಗಿಕ ಮಹತ್ವ ಇರುವ ಪ್ರದೇಶ. ಇಲ್ಲಿ ಪ್ರವಾಸಿಗರಿಗೆ ಯಾವುದೇ ಮಾರ್ಗಸೂಚಿ ಇಲ್ಲದೆ ಮೋಜು ಮಸ್ತಿ, ಪಾರ್ಟಿ, ಇತ್ಯಾದಿ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತಿತ್ತು.
ಇದನ್ನೂ ಓದಿ:ಕೃಷಿ ಕಾಯ್ದೆ ರದ್ದಾಗುತ್ತೆ…ರೈತರು ಪ್ರತಿಭಟನೆ ಕೈಬಿಟ್ಟು, ಮನೆಗೆ ತೆರಳಬೇಕು: ಸಚಿವ ತೋಮರ್
ಇತ್ತೀಚೆಗೆ ಗುಡ್ಡ ಗಾಡು ಓಟ ಕಾರ್ಯಕ್ರಮವನ್ನು ಖಾಸಗಿ ಸಂಸ್ಥೆ ಆಯೋಜಿಸಿತ್ತು. ಇದಕ್ಕೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಿ ಗುಡ್ಡ ಗಾಡು ಓಟ ಅರಣ್ಯ ಪ್ರದೇಶದಲ್ಲಿ ಸಾಗದಂತೆ ತಡೆದಿದ್ದಾರೆ.
ಎತ್ತಿನ ಭುಜಕ್ಕೆ ಪ್ರವೇಶ ಮಾಡದಂತೆ ಮುಂದಿನ ಆದೇಶದವರೆಗೆ ನಿಷೇಧ ಹೇರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ ಪ್ರದೇಶ ದ್ವಾರದಲ್ಲಿ ತಂತಿ ಬೇಲಿ ಹಾಕಿ ಮುಚ್ಚಲಾಗಿದೆ.
ಎತ್ತಿನ ಭುಜ ಪ್ರದೇಶ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟಿದ್ದು ಸಾಕಷ್ಟು ಆನೆಗಳು ಇವೆ. ಪ್ರವಾಸಿಗರ ಚಟುವಟಿಕೆಗಳಿಂದ ಆನೆಗಳಿಗೆ ತೊಂದರೆ ಆಗುತ್ತಿದ್ದು, ಅರಣ್ಯ ಇಲಾಖೆ ತಂತಿ ಬೇಲಿ ನಿರ್ಮಿಸಿ ಎತ್ತಿನ ಭುಜಕ್ಕೆ ಪ್ರವೇಶ ನಿಷೇಧ ಮಾಡಿರುವುದನ್ನು ಪರಿಸರ ಪ್ರಿಯರು ಸ್ವಾಗತಿಸಿ, ಇಲ್ಲಿ ಶಾಶ್ವತವಾಗಿ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.