ಸ್ತಬ್ಧಚಿತ್ರ ತಿರಸ್ಕಾರದ ವಿರುದ್ಧ ಪ್ರತಿಭಟನೆ: ಪಿರಿಯಾಪಟ್ಟಣ ತಹಶೀಲ್ದಾರ್ ಗೆ ಮನವಿ


Team Udayavani, Jan 17, 2022, 2:12 PM IST

15protest

ಪಿರಿಯಾಪಟ್ಟಣ: ಬ್ರಹ್ಮಶ್ರೀ ನಾರಾಯಣ ಗುರು, ರಾಷ್ಟ್ರಕವಿ ರವೀಂದ್ರನಾಥ ಟಾಗೋರ್ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟವರ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರ ತಿರಸ್ಕರಿಸಿರುವುದನ್ನು ಖಂಡಿಸಿ  ಕರ್ನಾಟಕ ದಲಿತ ಚಳುವಳಿ ನವನಿರ್ಮಾಣ ವೇದಿಕೆ ವತಿಯಿಂದ ತಹಶೀಲ್ದಾರ್ ಚಂದ್ರಮೌಳಿ ರವರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಆಡಳಿತ ಭವನದ ಎದುರು ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ನಾರಾಯಣಗುರುಗಳ ಸ್ತಬ್ಧ ಚಿತ್ರದ ಬಗ್ಗೆ ತೆಗೆದುಕೊಂಡಿರುವ ನಿರ್ಧಾರವನ್ನು ವೇದಿಕೆ ಕಾರ್ಯಕರ್ತರು ಖಂಡಿಸಿ ತರಾಟೆಗೆ ತೆಗೆದುಕೊಂಡರು.

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ದೇಶದ ಸಾಂಸ್ಕೃತಿಕ ಧಾರ್ಮಿಕ ಐತಿಹಾಸಿಕ ಅಭಿವೃದ್ಧಿ ಮತ್ತು ಮಿಲಿಟರಿ ಸಾಮರ್ಥ್ಯವನ್ನು ಪ್ರತಿನಿಧಿಸುವ ಸ್ತಬ್ದ ಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗುತ್ತಿದೆ.

ಹಾಗೆಯೇ ರಾಜ್ಯಗಳು ತಮ್ಮ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರವನ್ನು ಕಳುಹಿಸುವ ಪರಿಪಾಠವಿದೆ. ಅದರಂತೆ ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ನಾರಾಯಣಗುರುಗಳ ಶಬ್ದ ಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಮೂಲಕ ಅಪಚಾರವೆಸಗಲಾಗಿದೆ ಎಂದು ದೂರಿದರು.

ಭಾರತದ ಚಾರಿತ್ರಿಕ ಮಹತ್ವದ ಕ್ರಾಂತಿಕಾರಿ ಸಮಾಜ ಸುಧಾರಕರಿಗೆ ಅಪಮಾನಿಸಿದೆ. ಜೊತೆಗೆ ಶೋಷಣೆ ಮಹಿಳಾ ಅಸಮಾನತೆ ಜಾತಿ ಪ್ರತಿಪಾದನೆಯನ್ನು ಪರವಾಗಿ ಕೇಂದ್ರ ಸರ್ಕಾರ ಉತ್ತೇಜಿಸಿ ದಂತಾಗಿದೆ ಎಂದು ವೇದಿಕೆ ಕಾರ್ಯಕರ್ತರು ಆರೋಪಿಸಿದರು.

ನಾರಾಯಣಗುರುಗಳು ಶೋಷಣೆ, ಜಾತೀಯತೆ, ಅಸಮಾನತೆ ಹಾಗೂ ನಿಮ್ನ ವರ್ಗದವರ ಅಪಮಾನಿಸುವುದರ ವಿರುದ್ಧ ಸಿಡಿದು ನಿಂತು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿದ್ದಲ್ಲದೆ ಸಮಾಜದ ಸಮಾನತೆಗಾಗಿ ಬದುಕಿನುದ್ದಕ್ಕೂ ಶ್ರಮಿಸಿದವರು ಎಂದು ತಿಳಿಸಿದರು.

ತಿರಸ್ಕರಿಸಿರುವ ಕೇಂದ್ರ ಸರ್ಕಾರ ದೇಶದ ಮುಂದೆ ಕ್ಷಮೆಯಾಚಿಸಿ ನಾರಾಯಣಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯತೆ ಕೊಟ್ಟು ಅವಕಾಶ ನೀಡಬೇಕೆಂದು ಎಲ್ಲಾ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ದಂತೆ ಕರ್ನಾಟಕ ದಲಿತ ಚಳುವಳಿ ನವ ನಿರ್ಮಾಣ ವೇದಿಕೆಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ರಾಜ್ಯಪಾಲರಿಗೆ ತಹಶೀಲ್ದಾರ್ ಕೆ ಚಂದ್ರಮೌಳಿ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆ ಮುಖಂಡರಾದ ಸೀಗೂರು ವಿಜಯಕುಮಾರ್, ಎಚ್.ಡಿ ರಮೇಶ್, ಪಿ.ಪಿ.ಮಹದೇವ್, ಅಕ್ಷಯ್ ಕಾಂತರಾಜ್, ಜೆ. ಮೋಹನ್, ಎನ್ ಮುರುಳೀಧರ್, ಪಿ.ಟಿ.ನಾರಾಯಣ,  ಪಿ.ಎಂ. ಗಿರೀಶ್, ಪಿ.ವಿ.ಕೆಂಪಣ್ಣ, ಪಿ.ಟಿ. ಕುಮಾರ್, ಅಬ್ದುಲ್ ವಾಜಿದ್,  ನಂದೀಶ್,  ಕುಮಾರ್,  ಪ್ರಕಾಶ್,  ಸ್ವಾಮಿ, ಶಿವು,  ರಾಶಿ, ಶಿವಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.