ಅಂಗನವಾಡಿ ನೌಕರರಿಂದ ರಾಜ್ಯಾದ್ಯಂತ ಮಾ.15ರಂದು ಉಪವಾಸ ಸತ್ಯಾಗ್ರಹ

Team Udayavani, Mar 14, 2021, 8:39 PM IST

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಮತ್ತು ಕೊರೊನಾ ಸೋಂಕು ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತಿರುವ ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿರುವ ಸರ್ಕಾರದ ಧೋರಣೆ ವಿರೋಧಿಸಿ ಮಾ.15 ರಿಂದ ಹೆಚ್ಚುವರಿ ಕೆಲಸಗಳನ್ನು ಬಹಿಷ್ಕರಿಸಿ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಐಟಿಯು ಸಂಯೋಜಿತ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಗಂಜಿಗುಂಟೆ ಲಕ್ಷ್ಮೀದೇವಮ್ಮ ಹಾಗೂ ಪ್ರಧಾನ ಕಾರ್ಯದರ್ಶಿ ಬಾಗೇಪಲ್ಲಿ ರತ್ನಮ್ಮ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಸರ್ಕಾರದ ಆದೇಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ರಾಜ್ಯಾದ್ಯಂತ ಕೆಲಸದ ಒತ್ತಡದಿಂದ 35 ಹಾಗೂ ಕೊರೊನಾ ಸೋಂಕು ನಿಯಂತ್ರಿಸುವ ಸಂದರ್ಭದಲ್ಲಿ 28 ಮಂದಿ ಅಂಗನವಾಡಿ ನೌಕರರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದಾರೆ. 173 ಅಂಗನವಾಡಿ ನೌಕರರು ಕೊರೊನಾ ಸೋಂಕಿನ ಪ್ರಭಾವದಿಂದ ತಮ್ಮ ಕುಟುಂಬದ ಆದಾಯವನ್ನು ಕಳೆದುಕೊಂಡಿದ್ದಾರೆ.

ಸರ್ಕಾರಗಳ ನಿರ್ಲಕ್ಷ್ಯ ಧೋರಣೆಗಳ ವಿರುದ್ಧ ಸತತವಾಗಿ ಹೋರಾಟ ನಡೆಸಿದ ಪರಿಣಾಮ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರು ಅಂಗನವಾಡಿ ನೌಕರರಿಗೆ ಸೇವಾ ಜೇಷ್ಠತೆ ಆಧಾರದ ಮೇರೆಗೆ ವೇತನ, ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯ ನೇಮಕ, ಅಂಗನವಾಡಿ ಸಹಾಯಕರಿಗೆ ವೇತನ ತಾರತಮ್ಯ ಹಾಗೂ ನಿವೃತ್ತಿ ಸೌಲಭ್ಯವನ್ನು ಒದಗಿಸಲು ರಾಜ್ಯ ಬಜೆಟ್‍ನಲ್ಲಿ ಸೇರಿಸಲಾಗುವುದೆಂದು ನೀಡಿದ ಭರವಸೆ ಹುಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಇಲಾಖೆಯ ಶಿಫಾರಸ್ಸುಗಳನ್ನು ಪುರಸ್ಕರಿಸಿ ಬಜೆಟ್‍ನಲ್ಲಿ 339.48 ಕೋಟಿ ರೂಗಳ ಮೊತ್ತವನ್ನು ನೀಡಿದರೆ ರಾಜ್ಯದ 1 ಲಕ್ಷ 30 ಸಾವಿರ ಕುಟುಂಬಗಳಿಗೆ ಅನುಕೂಲವಾಗುತ್ತಿತ್ತು. ಆದರೇ ಸರ್ಕಾರ ಯಾವುದೇ ಶಿಫಾರಸ್ಸುಗಳನ್ನು ಗಣನೆಗೆ ತೆಗೆದುಕೊಂಡಿಲ್ಲ 2016 ರಿಂದ ಇದುವರೆಗೆ 7304 ಅಂಗನವಾಡಿ ನೌಕರರು ನಿವೃತ್ತಿಯಾಗಿದ್ದಾರೆ. ಅವರಿಗೆ ಕೊಡಬೇಕಾದ ಇಡಗಂಟು ಸಹ ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ದೂರಿದ ಅವರು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯೆಂದು ಬಜೆಟ್ ಮಂಡಿಸಿದ ಮಾತ್ರಕ್ಕೆ ಮಹಿಳೆಯರ ಕಲ್ಯಾಣ ಸಾಧ್ಯವೇ? ಎಂದು ಪ್ರಶ್ನಿಸಿರುವ ಅವರು ಬಜೆಟ್ ಅಂತಿಮಗೊಳಿಸುವ ಮುನ್ನ ಶಿಫಾರಸ್ಸುಗಳನ್ನು ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ಮಾ.15 ರಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಧರಣಿ ಸತ್ಯಾಗ್ರಹವನ್ನು ನಡೆಸಲಾಗುತ್ತಿದ್ದು ಹೆಚ್ಚುವರಿಯಾಗಿ ಮಾಡುತ್ತಿದ್ದ ಇ.ಸರ್ವೇ,ಆರ್.ಡಿ.ಪಿ.ಆರ್ ಸರ್ವೇ,ಬಿಪಿಎಲ್ ಕಾರ್ಡ್ ಆರ್.ಸಿ.ಹೆಚ್.ಸರ್ವೇ, ಭಾಗ್ಯಲಕ್ಷ್ಮೀ, ಮಾತೃವಂದನಾ, ಮಾತೃಶ್ರೀ,ಸ್ತ್ರೀಶಕ್ತಿ ಹಾಗೂ ಚುನಾವಣೆ ಕಾರ್ಯಗಳನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.