![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Feb 12, 2022, 7:21 PM IST
ಕೊರಟಗೆರೆ: ಹಲವಾರು ವರ್ಷಗಳಿಂದ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರು ಸರಕಾರಕ್ಕೆ ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಸರ್ಕಾರದ ನಿಯಮಾನುಸಾರ ಜಮೀನು ಮಂಜೂರು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೊರಟಗೆರೆ ಕ್ಷೇತ್ರದ ಶಾಸಕ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಗರ್ ಹುಕುಂ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ರೈತರಿಂದ ಸಲ್ಲಿಕೆಯಾಗಿರುವ100 ಅರ್ಜಿಗಳನ್ನು ಪರಿಶೀಲಿಸಿ ಯಾರೊಬ್ಬರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಭೂಮಿ ಇರುವವರಿಗೆ ಯಾವುದೇ ಕಾರಣಕ್ಕೂ ಭೂಮಿ ನೀಡಲಾಗುವುದಿಲ್ಲ ಆಮಿಷ ಮತ್ತು ಯಾವ ಮುಲಾಜಿಗೂ ಒಳಗಾಗದೇ ನಿಜವಾದ ಫಲಾನುಭವಿಗಳಿಗೆ ಸವಲತ್ತು ನೀಡಲಾಗುವುದು. ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನನ್ನ ವಿಧಾನಸಭಾ ಕ್ಷೇತ್ರದಲ್ಲಿ 3 ತಾಲೂಕುಗಳ ಹೊಬಳಿಗಳಾದ ಕೋರ ಮತ್ತು ಪುರವಾರ ಹೋಬಳಿಗಳು ಸೇರಿದಂತೆ ಕೊರಟಗೆರೆ ತಾಲ್ಲೂಕಿನ ನಾಲ್ಕು ಹೊಬಳಿಗಳಾದ ಹೊಳವನಹಳ್ಳಿ ಕೋಳಾಲ,ಕಸಬಾ, ಚನ್ನರಾಯನದುರ್ಗ. ಈ ನಾಲ್ಕು ಹೋಬಳಿಗಳಿಂದ ಬಂದಿರುವ ಅರ್ಜಿಗಳನ್ನು ಸರ್ಕಾರದ ನಿಯಮಾನುಸಾರ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಬಗರ್ ಹುಕುಂ ಕಾಯ್ದೆಯಡಿಯಲ್ಲಿ ಮಂಜೂರು ಮಾಡಲಾಗುವುದು ಹಾಗೂ ಇನ್ನೂ ಕೆಲವು ಅರ್ಜಿಗಳನ್ನು ಪರಿಶೀಲಿಸಿದ ನಂತರ ಸಂಬಂಧಪಟ್ಟ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ರೈತರು ಸಲ್ಲಿಸಿರುವ ಭೂಮಿಯಲ್ಲಿ ಸದರಿ ರೈತ ಅನುಭವದಲ್ಲಿ ಇದ್ದಾರೆಯೇ ಎಂದು ಪರಿಶೀಲಿಸಿ ಅಂತಹ ರೈತರು ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಅವರಿಗೆ ಬಗರ್ ಹುಕುಂ ಕಾಯ್ದೆಯಡಿಯಲ್ಲಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಬಗರ್ ಹುಕುಂ ಕಮಿಟಿಯ ಸದ್ಯರಾದ ನಂಜೇಗೌಡ, ಜಯಮ್ಮ,ನರಸಿಂಹಮೂರ್ತಿ, ಕೊರಟಗೆರೆ ತಹಶೀಲ್ದಾರ್ ನಾಹಿದಾ ಜಮ್ ಜಮ್, ತುಮಕೂರು ತಹಶೀಲ್ದಾರ್ ಮೋಹನ್ ಕುಮಾರ್ ಮಧುಗಿರಿ ತಾಲೂಕು ಪ್ರಭಾರ ತಹಶೀಲ್ದಾರ್ ಕಮಲಮ್ಮ ಸೇರಿದಂತೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಕಂದಾಯ ರಾಜ್ಯಸ್ವ ನೀರಿಕ್ಷಕ ಜಯಪ್ರಕಾಶ್, ಕಸಬಾ ರಾಜ್ಯಸ್ವ ನೀರಿಕ್ಷಕ ಪ್ರತಾಪ್ ಕುಮಾರ್, ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಸಂಬಂಧಪಟ್ಟ ಕಂದಾಯ ಇಲಾಖೆಯ ಹಲವಾರು ಅಧಿಕಾರಿಗಳು ಇದ್ದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.