Union Budget 2024: ಉದ್ಯೋಗ, ಶಿಕ್ಷಣ, ಕೌಶಲ್ಯಾಭಿವೃದ್ದಿಗೆ 1.48 ಲಕ್ಷ ಕೋಟಿ ರೂ. ಮೀಸಲು
7ನೇ ಬಾರಿ ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ
Team Udayavani, Jul 23, 2024, 11:47 AM IST
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಜು.23) ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ್ದು, ಈ ಬಾರಿ ಬಡವರು, ಮಹಿಳೆಯರು, ಕೃಷಿಕರು, ರೈತರು ಕಾರ್ಮಿಕರಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಭವಿಷ್ಯದ ಹಿತದೃಷ್ಟಿಯಿಂದ 9 ವಿಷಯಗಳಿಗೆ ಆದ್ಯತೆ ನೀಡುವ ಮೂಲಕ ಭವಿಷ್ಯದ ಬಜೆಟ್ ಅನ್ನು ರೂಪಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಕೃಷಿ, ಉದ್ಯೋಗ, ಕೌಶಲ್ಯ, ಮಾನವ ಸಂಪನ್ಮೂಲದ ಸುಧಾರಣೆ, ಸಾಮಾಜಿಕ ನ್ಯಾಯ, ಉತ್ಪಾದನೆ ಮತ್ತು ಸೇವೆಗಳು, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲಸೌಕರ್ಯ, ಆವಿಷ್ಕಾರ, ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಸೀತಾರಾಮನ್ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಭವಿಷ್ಯದ ಬಜೆಟ್ ನಲ್ಲಿ 9 ಅಂಶಗಳಿಗೆ ಒತ್ತು ನೀಡುವ ಮೂಲಕ ಎಲ್ಲರಿಗೂ ಸಮಾನ ಆದ್ಯತೆ ನೀಡಲಾಗಿದೆ. 2024ರ ಬಜೆಟ್ ನಲ್ಲಿ ನಾಲ್ಕು ಪ್ರಾಥಮಿಕ ಅಂಶಕ್ಕೆ ಒತ್ತು ನೀಡಿದ್ದು, ಅದರಲ್ಲಿ ಉದ್ಯೋಗ, ಕೌಶಲ್ಯ, ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮ ಮತ್ತು ಮಧ್ಯಮ ವರ್ಗಕ್ಕೆ ಆದ್ಯತೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
Budget Priorities
🔹 The Budget envisages sustained efforts on 9⃣ priorities for generating ample opportunities for all #UnionBudget2024 #BudgetForViksitBharat #Budget2024 pic.twitter.com/X6fo507LzX
— PIB India (@PIB_India) July 23, 2024
ಈ ಯೋಜನೆಗಳಿಂದ ಐದು ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಲಾಭವಾಗಲಿದೆ. ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಐದು ಸ್ಕೀಮ್ ಗಳ ಪ್ಯಾಕೇಜ್ ಅನ್ನು ನಾನು ಸಂತೋಷದಿಂದ ಘೋಷಿಸುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.