ಕಟಪಾಡಿ: ಪ್ರತ್ಯೇಕ ಅಪಘಾತ; ಇಬ್ಬರ ಸಾವು
Team Udayavani, Jun 18, 2023, 5:43 AM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಎರಡು ದಿನಗಳ ಅಂತರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಕೂಲಿ ಕಾರ್ಮಿಕ ಸಾವು
ಕಟಪಾಡಿ ಕೆನರಾ ಬ್ಯಾಂಕ್ ಬಳಿ ಬುಧವಾರ ರಾತ್ರಿ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಜಗದೀಶ್ (30) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ ಬುಧವಾರ ರಾತ್ರಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಜಗದೀಶ್ ಅವರಿಗೆ ಮಂಗಳೂರಿನತ್ತ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.
ಕಾರು ಪಲ್ಟಿ: ಹೋಂ ನರ್ಸ್ ಸಾವು
ಇನ್ನೊಂದು ಪ್ರಕರಣದಲ್ಲಿ ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಳಿ ರಸ್ತೆ ಬದಿಯ ಕಲ್ಲು ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಹೋಮ್ ನರ್ಸ್ ಬಾರ್ಕೂರು ನಿವಾಸಿ ರತ್ನಾ (42) ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.
ಮಣಿಪಾಲದ ವೈದ್ಯರೊಬ್ಬರ ಮಗುವಿನ ಕೇರ್ ಟೇಕರ್ ಆಗಿ ಕೆಲಸ ಮಾಡಿಕೊಂಡಿದ್ದ ರತ್ನಾ ಅವರು ಗುರುವಾರ ವೈದ್ಯರನ್ನು ಕಾರಿನಲ್ಲಿ ಮಂಗಳೂರಿನ ರೈಲ್ವೇ ನಿಲ್ದಾಣಕ್ಕೆ ಬಿಟ್ಟು, ಮಣಿಪಾಲಕ್ಕೆ ಹಿಂದಿರುಗುತ್ತಿದ್ದಾಗ ಕಟಪಾಡಿ ಫಾರೆಸ್ಟ್ ಗೇಟ್ ಬಳಿ ಕಾರು ಪಲ್ಟಿ ಹೊಡೆದು ಅಪಘಾತ ಸಂಭವಿಸಿತ್ತು.
ತಲೆಗೆ ಗಂಭೀರ ಏಟಾಗಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಪರೀಕ್ಷಿಸಿದ ವೈದ್ಯರು ರತ್ನಾ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದರು.
ಕೂಲಿ ಕಾರ್ಮಿಕನ ಸಾವಿಗೆ ಕಾರಣ ನಾದ ಕಾರು ಚಾಲಕ ಪ್ರದೀಪ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.