‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಪುನೀತ್ ‌ ಹೆಸರು

ಮೈಸೂರು, ಬೆಳಗಾವಿ,ಮಂಗಳೂರು ಹಾಗೂ ತುಮಕೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ

Team Udayavani, Nov 9, 2021, 5:48 PM IST

1-muru

ಬೆಂಗಳೂರು: ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಕಲಬುರಗಿಯಲ್ಲಿ ಇದೇ 11 ರಂದು ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಿಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.

ಇದೇ ತಿಂಗಳ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಉದ್ಯಮಿಯಾಗಿ ಉದ್ಯೋಗ ನೀಡು ಮತ್ತು ಕೈಗಾರಿಕೆ ಅದಾಲತ್ ಕಾರ್ಯಾಗಾರವನ್ನು ಆಯೋಜಿಸಿದೆ.

ಕಾರ್ಯಾಗಾರ ನಡೆಯುವ ವೇದಿಕೆಗೆ “ಪುನೀತ್ ರಾಜ್ ಕುಮಾರ್” ಎಂದು ಹೆಸರಿಟ್ಟು ಆಗಲಿದ ಮೇರು ನಟನೆಗೆ ಗೌರವ ಸಮರ್ಪಣೆ ಸಲ್ಲಿಸಲು ಸಚಿವ ನಿರಾಣಿ ಅವರು ಮುಂದಾಗಿದ್ದಾರೆ.

ಕಲಬುರಗಿ ಮಾತ್ರವಲ್ಲದೆ, ಮುಂದೆ ನಡೆಯಲಿರುವ ಮೈಸೂರು, ಬೆಳಗಾವಿ, ಕರಾವಳಿಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ “ಉದ್ಯಮಿಯಾಗು ಉದ್ಯೋಗ ನೀಡು” ಕಾರ್ಯಕ್ರಮದ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ವಸಮ್ಮತದ ತೀರ್ಮಾನವನ್ನು ಸಚಿವರು ತೆಗೆದುಕೊಂಡಿದ್ದಾರೆ.

ಕೇವಲ ಸಿನಿಮಾ ಕ್ಷೇತ್ರಕ್ಕೆ ಗುರುತಿಸಿಕೊಳ್ಳದ ಪುನೀತ್ ರಾಜ್ ಕುಮಾರ್ ಅನೇಕ ಸಮಾಜ‌ ಸೇವೆಗಳಲ್ಲೂ ತೊಡಗಿಸಿಕೊಂಡಿದ್ದರು. ನಿಜ ಜೀವನದಲ್ಲಿ ಪುನೀತ್ ರಾಜ್ ಕುಮಾರ್ ರಾಜಕುಮಾರನಾಗಿಯೇ ಮೆರೆದರು. ಮುಂದಿನ ಯುವಜನಾಂಗಕ್ಕೆ ಅವರ ಹೆಸರು “ಆಜಾರಮರಗೊಳಿಸಲು” ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿರುವುದಾಗಿ ನಿರಾಣಿ ಅವರು ಹೇಳಿದ್ದಾರೆ.

ಯುವಜನತೆಯು ಯಾರೊಬ್ಬರ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ಬದುಕಬೇಕು ಎಂಬುದು ಅಪ್ಪು ಅವರ ಕನಸಾಗಿತ್ತು. ಅವರು ಕಂಡಿದ್ದ ಕನಸನ್ನು ನನಸು ಮಾಡುವ ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಉದ್ಯಮಶೀಲತೆ ತೋರಿದರು.
ಅವರು ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು ಎಂದು ನಿರಾಣಿ ಅವರು ಕೊಂಡಾಡಿದರು

ಕೇವಲ ಸಿನಿಮಾ ಕ್ಷೇತ್ರವಲ್ಲದೆ, ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು. ಗೋ ಶಾಲೆಗಳನ್ನು ಪೋಷಣೆ ಮಾಡುತ್ತಿದ್ದರು. ತಾನು ಸಮಾಜಕ್ಕೆ ಈ ಕೊಡುಗೆ ಕೊಟ್ಟಿದ್ದೇನೆ ಎಂದು ಎಲ್ಲೂ ಬಹಿರಂಗಪಡಿಸದೇ ಸಮಾಜ ಸೇವೆ ಮಾಡುತ್ತಿದ್ದರು. ಈ ಮೂಲಕ ದೊಡ್ಡಮನೆಯ ದೊಡ್ಡತನ ಮೆರೆದಿದ್ದರು. ಅಂತಹ ಮೇರುನಟ ನಮಗೆ ಎಂದೆಂದಿಗೂ ಮಾದರಿ ಎಂದು ನಿರಾಣಿ ಕೊಂಡಾಡಿದ್ದಾರೆ.

ಸೋಮವಾರ ನಡೆದ ಪುನೀತ್ ರಾಜ್ ಕುಮಾರ್ ಅವರ 11 ನೇ ದಿನದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ನಿರಾಣಿ ಅವರು ಭಾಗವಹಿಸಿ ಆಗಲಿದ ಯುವನಟನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿದ್ದ ಅವರು ಅಪ್ಪುವಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ‌ಗೌರವ ನಮನ ಸಲ್ಲಿಸಿದರು. ಬಳಿಕ ಪುನೀತ್ ರಾಜ್ ಕುಮಾರ್ ಪತ್ನಿ ಶ್ರೀಮತಿ ಅಶ್ವಿನಿ, ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.