ಪುನೀತ್ ರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಿದ್ದರಾಮಯ್ಯ ಒತ್ತಾಯ
Team Udayavani, Nov 1, 2021, 6:21 PM IST
ತುಮಕೂರು : ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರವನ್ನು ಸೋಮವಾರ ಒತ್ತಾಯಿಸಿದ್ದಾರೆ.
ಗುಬ್ಬಿಯಲ್ಲಿ ನಡೆದ ಖಾಸಗಿ ಹೈಟೆಕ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,’ಪುನೀತ್ ಅವರಲ್ಲಿ ಅಪಾರವಾದ ಪ್ರತಿಭೆ ಇತ್ತು, ಹೀಗಾಗಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು’ ಎಂದು ಅಭಿಪ್ರಾಯ ಪಟ್ಟರು.
‘ಪುನೀತ್ ರಾಜ್ಕುಮಾರ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ರಾಜ್ಯ ಸರಕಾರ ಕೂಡ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದರು.
ಇದೇ ವೇಳೆ, ತಾವು ಕೂಡ ಕೇಂದ್ರ, ರಾಜ್ಯ ಸರಕಾರಕ್ಕೆ ಪತ್ರ ಬರೆದು, ಪ್ರಶಸ್ತಿ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.
ಪುನೀತ್ ಅವರು ಇನ್ನೂ ಎತ್ತರೆತ್ತರಕ್ಕೆ ಬೆಳೆಯುತ್ತಿದ್ದ ವಯಸ್ಸಿನಲ್ಲಿಯೇ ಅಕಾಲಿಕ ಮರಣಕ್ಕೆ ತುತ್ತಾಗಿರುವುದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ, ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.