ಎಲ್ಲ ಎಸ್ಕಾಂಗಳಲ್ಲೂ ಕವಿಕಾ ನಿರ್ಮಿತ ಟಿಸಿ ಖರೀದಿಗೆ ನಿರ್ದೇಶನ : ಸುನೀಲ್ ಕುಮಾರ್
ಸುನೀಲ್ ಕುಮಾರ್ ಬಂದಿದ್ದು ಸುಧಾಮನ ಮನೆಗೆ ಶ್ರೀಕೃಷ್ಣ ಬಂದಂತೆ : ಹೆಪ್ಸಿಬಾ ರಾಣಿ
Team Udayavani, Mar 30, 2022, 2:26 PM IST
ಬೆಂಗಳೂರು : ರಾಜ್ಯದ ಎಲ್ಲ ಎಸ್ಕಾಂಗಳಲ್ಲೂ ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ನಿರ್ಮಿತ ಪರಿವರ್ತಕಗಳ ಖರೀದಿಗೆ ನಿರ್ದೇಶನ ನೀಡಲಾಗುವುದು. ಆ ಮೂಲಕ ಸರಕಾರಿ ಸ್ವಾಮ್ಯದ ಸಂಸ್ಥೆಯ ಬಲವರ್ಧನೆಗೆ ಕೈಜೋಡಿಸಲು ಇಲಾಖೆ ನಿರ್ಧರಿಸಿದೆ ಎಂದು ಇಂಧನ ಕನ್ನಡ- ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಮೈಸೂರು ರಸ್ತೆಯಲ್ಲಿರುವ ಕವಿಕಾಗೆ ಭೇಟಿ ನೀಡಿ ದಕ್ಷತೆ ಹಾಗೂ ನವವಿನ್ಯಾಸದ ಪರಿವರ್ತಕ ಬಿಡುಗಡೆಗೊಳಿಸಿ ಮಾತನಾಡಿದರು.
ಮೈಸೂರು ಮಹಾರಾಜರ ಒತ್ತಾಸೆಯಿಂದ 1933ರಲ್ಲಿ ಸ್ಥಾಪನೆಗೊಂಡ ಕವಿಕಾ ಏಷ್ಯಾ ಖಂಡದಲ್ಲೇ ವಿದ್ಯುತ್ ಪರಿವರ್ತಕ ಉತ್ಪಾದಿಸುವ ಮೊದಲ ಸಂಸ್ಥೆಯಾಗಿತ್ತು ಎಂಬುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ. ಇಂದಿಗೂ ಈ ಸಂಸ್ಥೆ ಲಾಭದಲ್ಲೇ ನಡೆಯುತ್ತಿರುವುದಕ್ಕೆ ಶ್ರಮಿಸುತ್ತಿರುವ ಸಂಸ್ಥೆಯ ಪ್ರತಿಯೊಬ್ಬ ಸಿಬ್ಬಂದಿ ಶ್ಲಾಘನೆಗೆ ಅರ್ಹರು ಎಂದು ಹೇಳಿದರು.
ಕವಿಕಾ ನಿರ್ಮಿತ ಪರಿವರ್ತಕಗಳ ಗುಣಮಟ್ಟ ಉತ್ತಮವಾಗಿದೆ. ವಾರ್ಷಿಕ 20,000 ಪರಿವರ್ತಕ ಉತ್ಪಾದನಾ ಸಾಮರ್ಥ್ಯವನ್ನು 50,000 ಕ್ಕೆ ಹೆಚ್ಚಳ ಮಾಡುವ ಮೂಲಕ ಸಂಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ಕವಿಕಾ ಪರಿವರ್ತಜ ಖರೀದಿಗೆ ಒತ್ತು ನೀಡುವಂತೆ ನರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಯಾವುದೇ ಸಂಸ್ಥೆ ನಿಂತ ನೀರಾಗಬಾರದು. ಕವಿಕಾ ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಬೇಕು. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲೂ ಕಾರ್ಖಾನೆ ಆರಂಭಿಸುವ ಮೂಲಕ ಆರೋಗ್ಯಕರ ಸ್ಪರ್ಧೆಗೆ ಅಣಿಯಾಗಬೇಕು. ಇದಕ್ಕೆ ಹಂತ ಹಂತವಾಗಿ ಯೋಜನೆ ರೂಪಿಸಿ. ಅಗತ್ಯ ಅನುಮೋದನೆಯನ್ನು ಸರಕಾರ ನೀಡುತ್ತದೆ ಎಂದು ಹೇಳಿದರು.
ಸಂಸ್ಥೆಯಲ್ಲಿ ಕಾರ್ಮಿಕರು ಹಾಗೂ ತಂತ್ರಜ್ಞರ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ. ಮುಂದಿನ ನಾಲ್ಕೈದು ವರ್ಷದಲ್ಲಿ ಶೇ.೮೦ರಷ್ಟು ಕಾರ್ಮಿಕರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ನೇರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ೨೫ ವರ್ಷದಲ್ಲಿ ಸಂಸ್ಥೆಯ ಪ್ರಗತಿ ಹೇಗಿರಬೇಕೆಂಬುದನ್ನು ನಿರ್ಧರಿಸಲು ಈಗಿನಿಂದಲೇ ನೀಲ-ನಕ್ಷೆ ರೂಪಿಸೋಣ ಎಂದರು.
ಕವಿಕಾ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಉಡುಪಿ ಜಿಲ್ಲೆಯವರಾದ ಸುನೀಲ್ ಕುಮಾರ್ ಅವರು ಕವಿಕಾಕ್ಕೆ ಬಂದಿದ್ದು ಸುಧಾಮನ ಮನೆಗೆ ಶ್ರೀಕೃಷ್ಣ ಬಂದಂತಾಗಿದೆ. ಇದು ಸಂಸ್ಥೆಯ ಬೆಳವಣಿಗೆಯ ದಿಕ್ಸೂಚಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಕವಿಕಾ ಅಧ್ಯಕ್ಷ ತಮ್ಮೇಶ್ ಗೌಡ, ಉಪಪ್ರಧಾನ ವ್ಯವಸ್ಥಾಪಕ ಶ್ರೀನಿವಾಸಯ್ಯ , ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಚಿತ್ರಾ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.