ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಶೀಘ್ರ ತೀರ್ಮಾನ: ಜನಾರ್ದನ ರೆಡ್ಡಿ
Team Udayavani, Jun 17, 2023, 7:21 AM IST
ಬೇಲೂರು: 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುವ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.
ಚನ್ನಕೇಶವ ಸ್ವಾಮಿ ದೇಗುಲಕ್ಕೆ ದಂಪತಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಸ್ಪರ್ಧೆಯಿಂದ ಯಾವ ಪಕ್ಷಕ್ಕೆ ಲಾಭ-ನಷ್ಟವಾಗಿದೆ ಎಂಬ ಬಗ್ಗೆ ಚರ್ಚೆ ನಡೆಸುವುದು ಅಪ್ರಸ್ತುತ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪಕ್ಷದಿಂದ 30 ಜಿಲ್ಲೆಗಳಲ್ಲಿ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ನಿಲ್ಲಿಸಬೇಕೆಂಬ ಬಗ್ಗೆ ಆಗಸ್ಟ್‌ನಲ್ಲಿ ಪಕ್ಷದ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಸಿಬಿಐ ಕೋರ್ಟ್‌ನಲ್ಲಿ 152 ಆಸ್ತಿಗಳ ವಿಚಾರಣೆ ನಡೆಯುತ್ತಿದೆ. ಇದರಲ್ಲಿ 80 ಆಸ್ತಿ ಪ್ರಕರಣಗಳನ್ನು ಕೈ ಬಿಡಲಾಗಿದ್ದು 72 ಪ್ರಕರಣಗಳು ಕೋರ್ಟ್‌ನಲ್ಲಿದ್ದು ಆಸ್ತಿ ಮಾರಾಟ ಮಾಡ ಬಾರದು ಎಂಬ ಷರತ್ತು ಇದೆಯೇ ಹೊರತು ಯಾವ ಆಸ್ತಿಯನ್ನೂ ವಶಪಡಿಸಿಕೊಂಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.