ಬಹಳ ಧೈರ್ಯದಿಂದ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ :ಕಾಲೆಳೆದ ಅರುಣ್ ಸಿಂಗ್
ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ
Team Udayavani, Mar 31, 2022, 7:27 PM IST
ಬೆಂಗಳೂರು: ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಪ್ರಚಂಡ ಜಯ ಸಿಕ್ಕಿದೆ. ಇದೊಂದು ಐತಿಹಾಸಿಕ ಗೆಲುವಾಗಿದ್ದು, ಕರ್ನಾಟಕದ ಕಾರ್ಯಕರ್ತರಿಗೆ ಈ ಗೆಲುವು ಹುಮ್ಮಸ್ಸು ಮೂಡಿಸಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಕೆ ಕೆ ಗೆಸ್ಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ. ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯಲಿದೆ ಎಂದರು.
ರಾಹುಲ್ ಗಾಂಧಿ ರಾಜ್ಯ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇಶಾದ್ಯಂತ ಕಾಂಗ್ರೆಸ್ ಸೋಲುತ್ತಿದೆ. ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲು. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ. ಸೋಲಾಗುತ್ತದೆ ಅಂತ ಗೊತ್ತಿದ್ದರೂ ರಾಹುಲ್ ಗಾಂಧಿ ಇಲ್ಲಿಗೆ ಬರುವ ಧೈರ್ಯ ತೋರಿಸಿರುವುದು ಮೆಚ್ಚಬೇಕಾದದ್ದೇ, ಬಹಳ ಧೈರ್ಯದಿಂದ ರಾಹುಲ್ ಗಾಂಧಿ ಇಲ್ಲಿಗೆ ಬಂದಿದ್ದಾರೆ. ಅವರು ಬಂದು ರ್ಯಕ್ರಮಗಳಲ್ಲಿ ಭಾಗವಹಿಸಲಿ. ಆದರೆ ಅವರ ನೇತೃತ್ವದಲ್ಲಿ ಯಾವುದೂ ನೆಟ್ಟಗೆ ನಡೆಯುತ್ತಿಲ್ಲ.ಅವರಿಂದ ಹೊಸದೇನೂ ಮಾಡುವುದಕ್ಕೆ ಆಗುತ್ತಿಲ್ಲ ಎಂದು ಕಾಲೆಳೆದರು.
ಸಂಪುಟ ಸರ್ಜರಿ ಬಗ್ಗೆ ದ್ವಂದ್ವ
ಸಂಪುಟ ಸರ್ಜರಿ ಬಗ್ಗೆ ಯಾವುದೇ ಬದಲಾವಣೆ ಇಲ್ಲ ಅಂತ ಒಂದು ಕಡೆ ಹೇಳಿದರೆ ಮತ್ತೊಂದು ಕಡೆ ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ರಾಜ್ಯದಲ್ಲಿ ಬಿಜೆಪಿ ನಾಯಕರು ಲೋಕಪ್ರಿಯರಿದ್ದಾರೆ, ಜನಪ್ರಿಯರಿದ್ದಾರೆ. ಬೊಮ್ಮಾಯಿಯವರು ತಮ್ಮ ಆಡಳಿತ ವೈಖರಿಯಿಂದ ಹೆಸರು ಮಾಡಿದ್ದಾರೆ. ಈ ಆಧಾರದಲ್ಲೇ ಚುನಾವಣೆ ಎದುರಿಸುತ್ತೇವೆ, ಗೆಲ್ಲುತ್ತೇವೆ. ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್ ಇಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದರು.
ಯಾವುದೇ ಬದಲಾವಣೆ ಮಾಡುವುದಿಲ್ಲ, ಈಗ ಪಕ್ಷ ಹೇಗಿದೆಯೋ ಅದೇ ಸ್ಥಿತಿಯಲ್ಲಿ ಚುನಾವಣೆ ಎದುರಿಸುತ್ತೇವೆ. ಬಿಜೆಪಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದರು.
ಸಂಪುಟ ಸೇರಲು ತುಂಬಾ ಜನ ಆಕಾಂಕ್ಷಿಗಳು ಕಾಯುತ್ತಿದ್ದಾರೆ ಎಂಬ ಪ್ರಶ್ನೆಗೆ, ಸಂಪುಟಕ್ಕೆ ಸೇರಿಸುವುದು ಬಿಡುವುದು ಸಿಎಂ ವಿವೇಚನೆಗೆ ಸೇರಿದ ವಿಚಾರ ಎಂದರು.
ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡುವ ವಿದ್ಯಮಾನಗಳು ನಡೆಯುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಅಭಿವೃದ್ಧಿ ಕೆಲಸಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ನಮ್ಮ ಮೇಲೆ ವೃಥಾ ಆರೋಪ ಮಾಡುತ್ತಿದೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ. ನಮ್ಮ ಗಮನ ಅಭಿವೃದ್ಧಿ ಮೇಲೆ ಮಾತ್ರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.