Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

ಕಾಂಗ್ರೆಸ್‌ ನಾಯಕನ ಹೇಳಿಕೆಗೆ ರಿಜಿಜು, ಅನುರಾಗ್‌ ಕೆಂಡಾಮಂಡಲ: ಕೈ ತಿರುಗೇಟು

Team Udayavani, Jun 3, 2023, 7:23 AM IST

rahul gandhi 1

ವಾಷಿಂಗ್ಟನ್‌/ಹೊಸದಿಲ್ಲಿ: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು “ಮುಸ್ಲಿಂ ಲೀಗ್‌’ ಕುರಿತು ನೀಡಿದ ಹೇಳಿಕೆಯೊಂದು ಈಗ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇರಳದಲ್ಲಿ ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಮುಸ್ಲಿಂ ಲೀಗ್‌ “ಪಕ್ಕಾ ಜಾತ್ಯತೀತ ಪಕ್ಷ’ ಎಂಬ ರಾಹುಲ್‌ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ವಾಷಿಂಗ್ಟನ್‌ ಡಿಸಿಯಲ್ಲಿನ ನ್ಯಾಶನಲ್‌ ಪ್ರಸ್‌

ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ನಡೆದ ಸಂವಾದದ ವೇಳೆ ವರದಿಗಾರರೊಬ್ಬರು ರಾಹುಲ್‌ಗೆ, “ಬಿಜೆಪಿಯ ಹಿಂದುತ್ವ ರಾಜಕೀಯವನ್ನು ವಿರೋಧಿಸುವ ಕಾಂಗ್ರೆಸ್‌, ಕೇರಳದಲ್ಲಿ ಮುಸ್ಲಿಂ ಲೀಗ್‌ ಜತೆಗೆ ಮೈತ್ರಿ ಮಾಡಿಕೊಂಡಿದೆಯಲ್ಲವೇ’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಉತ್ತರಿಸಿದ್ದ ರಾಹುಲ್‌ಗಾಂಧಿ, “ಮುಸ್ಲಿಂ ಲೀಗ್‌ ಎನ್ನುವುದು ಸಂಪೂರ್ಣವಾಗಿ ಜಾತ್ಯತೀತ ಪಕ್ಷ. ಅವರ ಜಾತ್ಯತೀತತೆಯಲ್ಲಿ ಎಳ್ಳಷ್ಟೂ ಅನುಮಾನವಿಲ್ಲ’ ಎಂದಿದ್ದರು.

ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸುತ್ತಿದ್ದಂತೆಯೇ ರಾಹುಲ್‌ ವಿರುದ್ಧ ವಾಗ್ಧಾಳಿ ನಡೆಸಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು, “ಮೊಹಮ್ಮದ್‌ ಅಲಿ ಜಿನ್ನಾ ಅವರ ಮುಸ್ಲಿಂ ಲೀಗ್‌ ಜಾತ್ಯತೀತವೇ? ಧರ್ಮದ ಆಧಾರದಲ್ಲಿ ಭಾರತದ ವಿಭಜನೆಗೆ ಕಾರಣವಾದ ಪಕ್ಷ ಜಾತ್ಯತೀತವೇ?’ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್‌ ನಾಯಕ ಪವನ್‌ ಖೇರಾ, “ಮೊಹಮ್ಮದ್‌ ಅಲಿ ಜಿನ್ನಾರ ಮುಸ್ಲಿಂ ಲೀಗ್‌ಗೂ, ಕೇರಳ ಮೂಲದ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ ನಡುವೆ ವ್ಯತ್ಯಾಸವೇ ಗೊತ್ತಿಲ್ಲದಷ್ಟು ಬಿಜೆಪಿಯವರು ಅನಕ್ಷರಸ್ಥರೇ? ಜಿನ್ನಾರ ಮುಸ್ಲಿಂ ಲೀಗ್‌ ಎಂದರೆ ನಿಮ್ಮ ಪೂರ್ವಜರು ಮೈತ್ರಿ ಮಾಡಿಕೊಂಡಿದ್ದ ಪಕ್ಷ. ಕೇರಳದ ಮುಸ್ಲಿಂ ಲೀಗ್‌ ಎನ್ನುವುದು ಒಂದು ಕಾಲದಲ್ಲಿ ಬಿಜೆಪಿ ಜತೆ ಕೈಜೋಡಿಸಿದ್ದ ಪಕ್ಷ’ ಎಂದು ಟ್ವೀಟ್‌ ಮಾಡಿದ್ದಾರೆ. ಪವನ್‌ ಖೇರಾ ಈ ಹೇಳಿಕೆಗೆ ಬಹಳ ಗಟ್ಟಿಯಾದ ಆಧಾರಗಳೇನಿಲ್ಲ. ಸ್ವಾತಂತ್ರ್ಯ ಚಳವಳಿ ಹೊತ್ತಿನಲ್ಲಿ ಜಿನ್ನಾ ಮುಸ್ಲಿಮ್‌ ಲೀಗ್‌ನೊಂದಿಗೆ ಆರ್‌ಎಸ್‌ಎಸ್‌ ಕೈಜೋಡಿಸಿತ್ತು ಎಂಬ ವದಂತಿಗಳು ಇವೆ.  ಹಾಗೆಯೇ 2012ರಲ್ಲಿ ನಾಗಪುರ ನಗರ ಪಾಲಿಕೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಇಬ್ಬರು ಐಯುಎಂಎಲ್‌ ಕಾರ್ಪೊರೇಟರ್‌ಗಳ ಬೆಂಬಲ ಪಡೆದಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಖೇರಾ ಹೇಳಿದ್ದಾರೆ.

ಇದನ್ನು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ವಿರೋಧಿಸಿದ್ದಾರೆ. “ಇವರೇ ದೇಶ ವಿಭಜನೆ ಬಳಿಕವೂ ಭಾರತದಲ್ಲೇ ಉಳಿದುಕೊಂಡವರು. ವಿಭಜನೆಯ ಅನಂತರ ಇಲ್ಲಿ ಮುಸ್ಲಿಂ ಲೀಗ್‌ ಸ್ಥಾಪಿಸಿ, ಸಂಸದರಾದರು. ಇವರು ಶರಿಯಾ ಕಾನೂನಿನ ಪರ ಧೋರಣೆ ಹೊಂದಿದವರು. ಮುಸ್ಲಿಮರಿಗೆ ಪ್ರತ್ಯೇಕ ಸೀಟುಗಳು ಮೀಸಲಿಡಬೇಕು ಎಂದು ಒತ್ತಾಯಿಸಿದವರು. ಹೀಗಿದ್ದರೂ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ಗೆ ಹಿಂದೂ ಭಯೋತ್ಪಾದನೆ ಕಾಣುತ್ತದೆ. ಆದರೆ ಮುಸ್ಲಿಂ ಲೀಗ್‌ ಜಾತ್ಯತೀತವಾಗಿ ಕಾಣುತ್ತದೆ’ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಕಿಡಿಕಾರಿದ್ದಾರೆ.

ಬಿಜೆಪಿ ರಾಷ್ಟ್ರೀಯ ವಕ್ತಾರ, ಸಂಸದ ಸುಧಾಂಶು ತ್ರಿವೇದಿ ಪ್ರತಿಕ್ರಿಯಿಸಿ, “ಕಾಂಗ್ರೆಸ್‌ಗೆ ಎಐಎಂಐಎಂ, ಮುಸ್ಲಿಂ ಲೀಗ್‌, ಇಂಡಿಯನ್‌ ಸೆಕ್ಯುಲರ್‌ ಫ್ರಂಟ್‌ನಂಥ ಪಕ್ಷಗಳೆಲ್ಲ ಜಾತ್ಯತೀತವಾಗಿಯೂ, ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ)ವು ಸಾಂಸ್ಕೃತಿಕ ಸಂಘಟನೆಯಾಗಿಯೂ ಕಾಣಿಸುತ್ತದೆ. ರಾಹುಲ್‌ ಅವರ ಹೇಳಿಕೆಯು ಅವರ ತಿಳಿವಳಿಕೆಯ ಮಟ್ಟವನ್ನು ತೋರಿಸುತ್ತಿದೆ’ ಎಂದಿದ್ದಾರೆ.

ಇನ್ನು  “ರಾಹುಲ್‌ ಅವರ ಬೌದ್ಧಿಕ ಸಾಮರ್ಥ್ಯವೇ ಸೀಮಿತವಾಗಿರುವ ಕಾರಣ, ಅವರ ಹೇಳಿಕೆಗಳನ್ನು ನಾನು ಕ್ಷಮಿಸುತ್ತೇನೆ’ ಎಂದು ಕೇರಳ ಬಿಜೆಪಿ ನಾಯಕ ಕೆ.ಜೆ. ಅಲೊ#àನ್ಸ್‌ ಹೇಳಿದ್ದಾರೆ.

ಬಿಜೆಪಿಗೆ ಸೋಲುಣಿಸುತ್ತೇವೆ: ರಾಹುಲ್‌

ಮುಂದಿನ ಮೂರು-ನಾಲ್ಕು ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿಯನ್ನು ಕಾಂಗ್ರೆಸ್‌ ಮಣಿಸಲಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಡಳಿತಾರೂಢ ಪಕ್ಷವು ಈಗ ಬಹುತೇಕ ಭಾರತೀಯರ ಬೆಂಬಲ ಕಳೆದುಕೊಂಡಿದೆ. ಬಿಜೆಪಿಯನ್ನು ಸೋಲಿಸಲು ಬೇಕಾದ ಅಗತ್ಯ ಕಾರ್ಯತಂತ್ರಗಳು ಈಗ ನಮ್ಮ ಬಳಿಯಿವೆ. ಕರ್ನಾಟಕದಲ್ಲಿ ನಾವೇನು ಮಾಡಿದೆವೋ ಅದನ್ನೇ ಉಳಿದ ರಾಜ್ಯಗಳಲ್ಲೂ ಮಾಡುತ್ತೇವೆ. ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿಯಿರುವ ರಾಜ್ಯಗಳಲ್ಲಿ ಬಿಜೆಪಿಯನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ ಎಂದೂ ರಾಹುಲ್‌ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.