ಸಕ್ಕರೆ ಕಾರ್ಖಾನೆಗಳಿಗೆ ಶಾಕ್ ಕೊಟ್ಟ ರಾಜ್ಯ ಸರಕಾರ
Team Udayavani, Dec 14, 2022, 1:17 PM IST
ಬೆಂಗಳೂರು : ತೂಕ ಮತ್ತು ಅಳತೆಯ ವ್ಯತ್ಯಾಸ ಪತ್ತೆ ಹಚ್ಚಲು ಸಕ್ಕರೆ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಬೆಳಗ್ಗೆ 7 ಗಂಟೆಯಿಂದ 21 ಸಕ್ಕರೆ ಕಾರ್ಖಾನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಕೆಲವೊಂದು ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ವ್ಯತ್ಯಾಸ ಕಂಡುಬಂದಿದ್ದು ಅಧಿಕಾರಿಗಳಿಂದ ಪರಿಶೀಲನೆ ಮುಂದುವರಿದಿದೆ.
ಪ್ರಥಮ ಹಂತದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದು, ಈ ಸಾಲಿನ ಕಬ್ಬು ಕಟಾವು ಹಂಗಾಮು ಮುಗಿಯುವವರೆಗೂ ನಿರಂತರವಾಗಿ ಗೌಪ್ಯತೆಯ ಮೂಲಕ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಲು ಸರಕಾರದಿಂದ ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ʼಅನುಭವʼ ಸಿನಿಮಾ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ
ಹಲವು ರೈತ ಸಂಘಟನೆಗಳು ತೂಕದಲ್ಲಿ ವ್ಯತ್ಯಾಸ ಕಂಡುಬರುವ ಕುರಿತು ತನಿಖೆ ನಡೆಸುವಂತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಇವರ ಬಳಿ ಒತ್ತಾಯಿಸಿದ್ದರು. ಈ ಬಗ್ಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವುದಾಗಿ ಸಚಿವರು ಭರವಸೆ ನೀಡಿದ್ದರು.
ಬೆಳಗಾವಿ -8
ಬಿಜಾಪುರ – 4
ಬಾಗಲಕೋಟೆ -4
ಬೀದರ್ – 2
ಗುಲಬರ್ಗ – 2
ಕಾರವಾರ – 1
ಸಕ್ಕರೆ ಇಲಾಖೆಯ ಆಯುಕ್ತರಾದ ಶಿವಾನಂದ್ ಹೆಚ್. ಕಲಕೇರಿ ಇವರ ನೇತೃತ್ವದಲ್ಲಿ ಈ ದಾಳಿ ನಡೆಸಿದ್ದು, ದಾಳಿಯಲ್ಲಿ ಸಕ್ಕರೆ ಇಲಾಖೆಯ ಅಧಿಕಾರಿಗಳು, ತೂಕ ಮತ್ತು ಅಳತೆ ಇಲಾಖೆಯ ಅಧಿಕಾರಿಗಳು, ಸಾರಿಗೆ ಇಲಾಖೆಯ ಅಧಿಕಾರಿಗಳು, ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.