ಫೆ.18ರಿಂದ 21ರವರೆಗೆ ಉಡುಪಿ, ದಕ್ಷಿಣಕನ್ನಡ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Team Udayavani, Feb 17, 2021, 9:11 PM IST
ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಫೆ.18ರಿಂದ ಫೆ.21ರ ವರೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಫೆ.19ರಿಂದ ಫೆ.21ರ ವರೆಗೆ 20ರಿಂದ 25 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ತುಮಕೂರು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಫೆ.20ರ ವರೆಗೆ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ.
ಬುಧವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 13 ಡಿ. ಸೆಲ್ಸಿಯಸ್ ದಾಖಲಾಗಿದೆ.
ಇದನ್ನೂ ಓದಿ:ಬಾಲ್ಕನಿಂದ ಕೆಳಗೆ ಬಿದ್ದು ಮೃತಪಟ್ಟ ಹಸುಗೂಸು: ಅಂಗಾಂಗ ದಾನಮಾಡಿ 5 ಜೀವ ಉಳಿಸಿದ ಧನಿಷ್ಥಾ
ಕರಾವಳಿ ಭಾಗದಲ್ಲಿ ಗರಿಷ್ಠ 31ರಿಂದ 32ಡಿ. ಸೆಲ್ಸಿಯಸ್ ಹಾಗೂ ಕನಿಷ್ಠ 21ರಿಂದ 23 ಡಿ.ಸೆಲ್ಸಿಯಸ್ ದಾಖಲಾಗಿತ್ತು. ಉತ್ತರ ಒಳನಾಡಿನಲ್ಲಿ ಗರಿಷ್ಠ 30ರಿಂದ 32 ಡಿ. ಸೆಲ್ಸಿಯಸ್, ಕಲುಬುರಗಿಯಲ್ಲಿ 34ರಿಂದ 35 ಡಿ.ಸೆಲ್ಸಿಯಸ್,
ಬೀದರನಲ್ಲಿ ಕನಿಷ್ಠ 14, ದಾವಣಗೆರೆಯಲ್ಲಿ 13 ಡಿ. ಸೆ.,ಬೆಳಗಾವಿಯಲ್ಲಿ 15 ಹಾಗೂ ಬೆಂಗಳೂರಿನಲ್ಲಿ ಕನಿಷ್ಠ 14 ಡಿ.ಸೆಲ್ಸಿಯಸ್ ದಾಖಲಾಗಿದೆ. ಉಳಿದಂತೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 32 ಡಿ.ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿ.ಸೆಲ್ಸಿಯಸ್ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.