Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ
Team Udayavani, Sep 30, 2024, 1:05 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ ತುಸು ಸೆಕೆಯಿಂದ ಕೂಡಿತ್ತು. ಸುಳ್ಯ, ಕಾರ್ಕಳದಲ್ಲಿ ಗುಡುಗು ಸಹಿತ ಮಳೆಯಾಗಿದ್ದರೆ ಉಳಿದ ಕಡೆ ಸಾಧಾರಣ ಮಳೆ ಸುರಿದಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಯಾವುದೇ ಅಲರ್ಟ್ ಘೋಷಣೆ ಮಾಡಲಾಗಿಲ್ಲ. ಆದರೆ, ಕೆಲವೊಂದು ಕಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ 31 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ.ಸೆ. ಅಧಿಕ ಮತ್ತು 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.5 ಡಿ.ಸೆ. ಅಧಿಕ ಉಷ್ಣಾಂಶ ಇತ್ತು.
ಸುಳ್ಯದಲ್ಲಿ ಉತ್ತಮ ಮಳೆ
ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ರವಿವಾರ ಸಂಜೆ ಭಾರೀ ಮಳೆಯಾಗಿದೆ.
ಗಡುಗು ಸಿಡಿಲಿನ ಅಬ್ಬರದೊಂದಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಭಾರೀ ಮಳೆಯಾಗಿದೆ. ಇದರಿಂದಾಗಿ ಚರಂಡಿಗಳು ತುಂಬಿ ಹರಿಯುತ್ತಿತ್ತು. ಚರಂಡಿ ಸಮರ್ಪಕವಾಗಿ ಇಲ್ಲದ ಕಾರಣ ಹಲವೆಡೆ ಕೆಸರು ಮಿಶ್ರಿತ ಮಳೆ ನೀರು ರಸ್ತೆಯಲ್ಲಿಯೇ ಹರಿದು ಹೊಳೆಯಂತಾಗಿತ್ತು.
ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಬಿಸಿಲ ವಾತಾವರಣ ಇದ್ದ ಸುಳ್ಯದಲ್ಲಿ ಅಪರಾಹ್ನ ಬಳಿಕ ಮಳೆ ಆರಂಭಗೊಂಡಿತ್ತು. ಸುಳ್ಯ ನಗರ, ಐವರ್ನಾಡು, ಜಾಲ್ಸೂರು, ಸಂಪಾಜೆ, ಅರಂತೋಡು ಭಾಗದ ವಿವಿಧೆಡೆ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.