ಕರಾವಳಿಯಲ್ಲಿ ಮಳೆ ಅಬ್ಬರ: ಉಭಯ ಜಿಲ್ಲೆಗಳಲ್ಲಿ ಜುಲೈ 27 ರಂದು ಶಾಲೆಗಳಿಗೆ ರಜೆ
ಉಡುಪಿಯಲ್ಲಿ ಪಿಯುಸಿ ವರೆಗೆ , ದಕ್ಷಿಣ ಕನ್ನಡದಲ್ಲಿ ಪ್ರೌಢ ಶಾಲೆವರೆಗೆ ಮಾತ್ರ
Team Udayavani, Jul 26, 2023, 8:31 PM IST
ಮಂಗಳೂರು/ಉಡುಪಿ : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 27 ರಂದು (ಗುರುವಾರ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರೌಢ ಶಾಲೆಗಳವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿನ ಕ್ರಮ: ಡಿಸಿ
ಜಿಲ್ಲಾಧಿಕಾರಿಗಳ ಆದೇಶಕ್ಕೂ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಎಂದು ಸಾರುವ ಪ್ರಕಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಡಿಸಿ ಮುಲ್ಲೈ ಮುಗಿಲನ್ ಪ್ರತಿಕ್ರಿಯಿಸಿದ್ದು, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಡಳಿತ ಸೂಚನೆ
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ, ಪ್ರತೀ ತಾಲೂಕುಗಳಲ್ಲಿ ಕಾಳಜಿ
ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಡಳಿತದಿಂದ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು
ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು
ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.