Rain ಕರಾವಳಿಯಲ್ಲಿ ಫಲಪ್ರದ ಪೂರ್ವ ಮುಂಗಾರು
ಋತು ಪೂರ್ಣ; ಕರಾವಳಿಯಲ್ಲಿ ವರ್ಷದ ಬಳಿಕ ಅಧಿಕ ಮಳೆ
Team Udayavani, Jun 1, 2024, 7:10 AM IST
ಮಂಗಳೂರು: ರಾಜ್ಯದಲ್ಲಿ ಮಾರ್ಚ್- ಮೇ ತಿಂಗಳುಗಳ ಪೂರ್ವ ಮುಂಗಾರು ಅವಧಿಯ ವಾಡಿಕೆಯಂತೆ ಮುಕ್ತಾಯಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತ ಕರಾವಳಿಯಲ್ಲಿ ವರ್ಷದ ಬಳಿಕ ವಾಡಿಕೆಗಿಂತಲೂ ಅಧಿಕ ಮಳೆ ಸುರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 237 ಮಿ.ಮೀ. ವಾಡಿಕೆ ಮಳೆಯ ಪೈಕಿ 326 ಮಿ.ಮೀ. ಮಳೆ ಸುರಿದಿದ್ದು, ಶೇ. 38 ಏರಿಕೆ ಕಂಡಿದೆ. ಉಡುಪಿ ಜಿಲ್ಲೆಯಲ್ಲಿ 199 ಮಿ.ಮೀ. ವಾಡಿಕೆ ಮಳೆಯಲ್ಲಿ 257 ಮಿ.ಮೀ. ಮಳೆಯಾಗಿ ಶೇ. 29 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 102 ಮಿ.ಮೀ. ವಾಡಿಕೆ ಮಳೆಯ ಪೈಕಿ 134 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ. 31ರಷ್ಟು ಮಳೆ ಹೆಚ್ಚಳವಾಗಿದೆ. ಕಳೆದ ವರ್ಷ ಈ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಕ್ಷೀಣವಾಗಿ ಸುರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 51 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 73ರಷ್ಟು ಮಳೆ ಕೊರತೆ ಉಂಟಾಗಿತ್ತು.
ಈ ಬಾರಿಯ ಪೂರ್ವ ಮುಂಗಾರು ಆರಂಭದಲ್ಲಿ ಕರಾವಳಿಯಲ್ಲಿ ಮಳೆಯ ತೀವ್ರ ಕೊರತೆ ಇತ್ತು. ಗರಿಷ್ಠ ಉಷ್ಣಾಂಶದಲ್ಲಿ ಭಾರೀ ಏರಿಕೆ ಆಗಿತ್ತು. ಆದರೆ ಮೇ ತಿಂಗಳ ಕೊನೆಯ ಮೂರು ವಾರಗಳಲ್ಲಿ ಉಭಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ, ಕೃತಕ ನೆರೆಗೂ ಕಾರಣವಾಗಿತ್ತು. ಈವರೆಗೆ ಸುರಿಯದ ಮಳೆ ಕೇವಲ ಒಂದೇ ತಿಂಗಳಿನಲ್ಲಿ ಸುರಿದಿದೆ.
ಮುಂಗಾರಿನಲ್ಲಿ
ವಾಡಿಕೆ ಮಳೆ ಸಾಧ್ಯತೆ
ನೈಋತ್ಯ ಮುಂಗಾರು ಅವಧಿಯಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಕಳೆದ ವರ್ಷ ಕರಾವಳಿಯಲ್ಲಿ ಮೂರು ವರ್ಷಗಳಿಂದ ವಾಡಿಕೆಗಿಂತ ಅಧಿಕ ಮುಂಗಾರು ಮಳೆ ಸುರಿದಿಲ್ಲ. 2021ರಲ್ಲಿ ಶೇ. 13, ಮತ್ತು ಕಳೆದ ವರ್ಷ ಶೇ. 14ರಷ್ಟು ಮಳೆ ಕೊರತೆ ಉಂಟಾಗಿತ್ತು. 2022ರಲ್ಲಿ ಮಳೆ ಕೊರತೆ ಆಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.