Rajastan ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ಆಗಿದೆ: ಅಶೋಕ್ ಗೆಹ್ಲೋಟ್
Team Udayavani, Apr 13, 2023, 7:03 AM IST
ಜೈಪುರ: ಭ್ರಷ್ಟಾಚಾರದ ವಿರುದ್ಧ ರಾಜಸ್ಥಾನ ಸರಕಾರ ಕ್ರಮ ಕೈಗೊಂಡಿದೆ. ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳವು(ಎಸಿಬಿ) ಅನೇಕ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದರು. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಈಗಿನ ಕಾಂಗ್ರೆಸ್ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮಂಗಳವಾರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ನಿರಶನ ನಡೆಸಿದರು.
ಈ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಗೆಹ್ಲೋಟ್ , “ಭ್ರಷ್ಟಾಚಾರದ ವಿರುದ್ಧ ದೇಶದ ಯಾವುದೇ ರಾಜ್ಯದಲ್ಲಿ ತೆಗೆದುಕೊಳ್ಳದ ಕ್ರಮವನ್ನು ರಾಜಸ್ಥಾನ ಸರಕಾರ ತೆಗೆದುಕೊಂಡಿದೆ. ಹಣದುಬ್ಬರ ತಗ್ಗಿಸುವುದು ಈಗ ನಮ್ಮ ಮುಂದೆ ಇರುವ ಗುರಿ. ಇದನ್ನು ಹೊರತುಪಡಿಸಿ ಬೇರೆಡೆ ನಮ್ಮ ಲಕ್ಷ್ಯವನ್ನು ತಿರುಗಲು ಬಿಡುವುದಿಲ್ಲ,” ಎಂದರು.
ತಮ್ಮದೇ ಸರಕಾರದ ವಿರುದ್ಧ ನಿರಶನ ನಡೆಸಿದ ಮರು ದಿನವಾದ ಬುಧವಾರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ದಿಲ್ಲಿಗೆ ಆಗಮಿಸಿದ್ದಾರೆ. ಪೈಲಟ್ ನಿರಶನ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ರಾಂಧವಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.