ರಾಜಸ್ಥಾನ್:ಹಾಡಹಗಲೇ ಗುಂಡಿಟ್ಟು ವೈದ್ಯ ದಂಪತಿ ಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಶೀಘ್ರವಾಗಿ ಆರೋಪಿಗಳನ್ನು ಸೆರೆಹಿಡಿಯುವ ಪ್ರಯತ್ನ ನಡೆಸಲಾಗಿದೆ ಎಂದು ಐಜಿಪಿ ಪ್ರಶನ್ ಕುಮಾರ್ ಖಮೇಸ್ರಾ ತಿಳಿಸಿದ್ದಾರೆ.
Team Udayavani, May 29, 2021, 10:58 AM IST
ನವದೆಹಲಿ: ಹಾಡಹಗಲೇ ವೈದ್ಯ ದಂಪತಿಯ ಕಾರನ್ನು ತಡೆದು ಗುಂಡಿಟ್ಟು ಹತ್ಯೆಗೈದಿರುವ ಘಟನೆ ರಾಜಸ್ಥಾನದಲ್ಲಿ ಶುಕ್ರವಾರ(ಮೇ 28) ನಡೆದಿದ್ದು, ಈ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹಸೆಮಣೆಯಲ್ಲೇ ಕುಸಿದು ಬಿದ್ದು ವಧು ಸಾವು, ಬಳಿಕ ವಧುವಿನ ಸಹೋದರಿ ಜತೆ ವರನ ವಿವಾಹ!
ಹಾಡಹಗಲೇ ನಡೆದಿರುವ ಈ ಘಟನೆಯ ವಿಡಿಯೋವನ್ನು ಟ್ವೀಟರ್ ನಲ್ಲಿ ಶೇರ್ ಮಾಡಿರುವ ಬಿಜೆಪಿ ಮುಖಂಡ ರಾಜ್ಯವರ್ಧನ್ ರಾಥೋಡ್, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.
A doctor couple shot dead in broad daylight in Rajasthan. Such an absolute state of lawlessness in Rajasthan is due to a spineless state govt. that has done nothing to stop criminals who run amok in our cities & villages. pic.twitter.com/Ru0zKYgf2C
— Col Rajyavardhan Rathore (@Ra_THORe) May 28, 2021
“ಬೆಳ್ಳಂಬೆಳಗ್ಗೆ ಇಬ್ಬರು ದುಷ್ಕರ್ಮಿಗಳು ವೈದ್ಯ ದಂಪತಿಯನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ. ರಾಜಸ್ಥಾನದಲ್ಲಿ ಇಂತಹ ಕಾನೂನು ಬಾಹಿರ ಘಟನೆ ನಡೆಯಲು ಬೆನ್ನುಮೂಳೆ ರಹಿತ ರಾಜ್ಯ ಸರ್ಕಾರವೇ ಕಾರಣ. ನಮ್ಮ ನಗರ ಮತ್ತು ಗ್ರಾಮಗಳಲ್ಲಿ ರಾಜಾರೋಷವಾಗಿ ಓಡಾಡುವ ಅಪರಾಧಿಗಳನ್ನು ನಿಗ್ರಹಿಸಲು ಏನನ್ನೂ ಮಾಡುತ್ತಿಲ್ಲ” ಎಂದು ರಾಜ್ಯವರ್ಧನ್ ಆರೋಪಿಸಿದ್ದಾರೆ.
ಪಿಟಿಐ ವರದಿ ಪ್ರಕಾರ, ಈ ಘಟನೆ ರಾಜಸ್ಥಾನದ ಭಾರತ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳನ್ನು ಅಂಜು ಮತ್ತು ಮಹೇಶ್ ಎಂದು ಗುರುತಿಸಲಾಗಿದೆ ಎಂಬುದಾಗಿ ತಿಳಿಸಿದೆ. ಆದಷ್ಟು ಶೀಘ್ರವಾಗಿ ಆರೋಪಿಗಳನ್ನು ಸೆರೆಹಿಡಿಯುವ ಪ್ರಯತ್ನ ನಡೆಸಲಾಗಿದೆ ಎಂದು ಐಜಿಪಿ ಪ್ರಶನ್ ಕುಮಾರ್ ಖಮೇಸ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.