ರಾಮದೇವರ ಬೆಟ್ಟದಲ್ಲಿ ರಾಮಮಂದಿರ; ದಕ್ಷಿಣ ಅಯೋಧ್ಯೆಗೆ ಸಮರ
Team Udayavani, Dec 29, 2022, 6:55 AM IST
ಬೆಂಗಳೂರು/ಬೆಳಗಾವಿ: ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಆಯೋಧ್ಯೆ ಕೇಂದ್ರ ವಾಗಿಸುವ ವಿಷಯ ವಾಕ್ಸಮರಕ್ಕೆ ಕಾರಣವಾಗಿದೆ.
ಈ ಬಗ್ಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ, ರಾಮನಗರದ ರಾಮದೇವರ ಬೆಟ್ಟ ದಲ್ಲಿನ ಶ್ರೀರಾಮನ ದೇವಸ್ಥಾನದ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಯವರು ಸೂಚಿಸಿದ್ದು, ಮುಂದಿನ ಬಜೆಟ್ನಲ್ಲಿ ಅನು ದಾನ ದೊರೆಯಲಿದೆ. ಈ ದೇವಸ್ಥಾನ ವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಯನ್ನಾಗಿಸಿ ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಿದ್ದೇವೆ ಎಂದರು.
ಎಚ್ಡಿಕೆ ಕಿಡಿ
ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಜೆಡಿ ಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಮೂರು ವರ್ಷದಿಂದ ಮಾಡದೇ ಇದ್ದವರು ಈಗ ದಕ್ಷಿಣ ಭಾರತದಲ್ಲಿ ರಾಮಮಂದಿರ ನಿರ್ಮಿಸುತ್ತೇವೆ ಎನ್ನುತ್ತಿದ್ದಾರೆ. ರಾಮನಗರದಲ್ಲಿ ಬಿಜೆಪಿಯ ಆಟ ನಡೆಯದು ಎಂದು ಗುಡುಗಿದರು.
ಇನ್ನು 3 ತಿಂಗಳಲ್ಲಿ ಚುನಾವಣೆ ಬರಲಿದೆ. ಜನರು ಬಿಜೆಪಿಯನ್ನು ಹೊರ ಗಿಡುವ ಪ್ರಯತ್ನದಲ್ಲಿದ್ದಾರೆ. ಹೀಗಾಗಿ ಈಗ ರಾಮನಗರದಲ್ಲಿ ರಾಮ ಮಂದಿರ ಕಟ್ಟಲು ಹೊರಟಿದ್ದಾರೆ ಎಂದು ಕಿಡಿ ಕಾರಿದರು.
ನಮ್ಮ ರಾಜ್ಯ ದರಿದ್ರ ರಾಜ್ಯ ಅಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಕರೆತಂದು ಇಲ್ಲಿ ಅಡಿಪಾಯ ಹಾಕುವ ಅವಶ್ಯಕತೆ ಇಲ್ಲ. ನಮ್ಮ ಸುತ್ತೂರು ಮಠಾ ಧೀಶರು ಹಾಗೂ ಆದಿಚುಂಚನಗಿರಿ ಶ್ರೀಗಳನ್ನು ಕರೆ ತಂದು ನಾನೇ ಮಂದಿರ ನಿರ್ಮಿಸುವೆ ಎಂದರು.
ರಾಮಮಂದಿರ ವನ್ನಾದರೂ ಕಟ್ಟಲಿ, ಸೀತಾ ಮಂದಿರ, ಹನುಮಂತನ ಮಂದಿರ, ಶಿವ ಮಂದಿರವನ್ನಾದರೂ ಕಟ್ಟಲಿ. ಬೇಕಾದರೆ ತಮ್ಮ ದೇ ಮಂದಿರವನ್ನೂ ಕಟ್ಟಿಕೊಳ್ಳಲಿ. ನಾವೇನು ತಡೆಯೋದಿಲ್ಲ, ಸಿಟ್ಟಾಗುವುದೂ ಇಲ್ಲ. ಅವರನ್ನು ತಡೆದವರಾರು ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ರಾಮನಗರದಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ನಡೆದಿದೆ. ಅಶ್ವತ್ಥ ನಾರಾ ಯಣ ಅವರು ಹೇಳಿರುವ ಹೇಳಿಕೆಗೆ ಏನು ಸಂಬಂಧ ವಿದೆ? ರಾಮಮಂದಿರ ಕಟ್ಟುವು ದಾದರೆ ಕಟ್ಟಲಿ ಬಿಡಿ. ಅಶ್ವತ್ಥ ನಾರಾ ಯಣ ಅವರಿಗೂ ಅದಕ್ಕೂ ಏನು ಸಂಬಂಧ. ಅವರು ಹೆಚ್ಚು ಮಾತ ನಾಡದಿರುವುದು ಸೂಕ್ತ.
-ಎಚ್.ಡಿ. ದೇವೇಗೌಡ, ಮಾಜಿ ಪ್ರಧಾನಿ
ರಾಮನಗರದಲ್ಲಿ ರಾಮಮಂದಿರ ಕಟ್ಟಿಸುವ ಬದಲು ಅತಿವೃಷ್ಟಿಯಿಂದ ನಿರಾಶ್ರಿತರಾದ ಬಡವರಿಗೆ ಮನೆ ಕಟ್ಟಿಸಿ ಪುಣ್ಯ ಕಟ್ಟಿಕೊಳ್ಳಿ. ಕೋವಿಡ್ನಿಂದ ಅನಾಥರಾದವರಿಗೆ ಮನೆ ಕಟ್ಟಿಸಿಕೊಡಬೇಕು. ರಾಮಮಂದಿರಕ್ಕೆ ಯೋಗಿ ಆದಿತ್ಯನಾಥರಿಂದ ಶಂಕುಸ್ಥಾಪನೆ ಮಾಡುವುದಾಗಿ ಹೇಳುತ್ತೀರಿ. ಬಡವರಿಗೆ ಮನೆ ಕಟ್ಟಿಸುವ ಕೆಲಸಕ್ಕೆ ಬಿ.ಎಸ್.ಯಡಿಯೂರಪ್ಪ ಅವರಿಂದ ಶಿಲಾನ್ಯಾಸ ಮಾಡಿಸಲಿ.
– ಸಿ.ಎಂ. ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.