ಏಪ್ರಿಲ್ 10 ರಂದು ಪದ್ಮನಾಭನಗರದಲ್ಲಿ ರಾಮ ರಥಯಾತ್ರೆ : ಸಚಿವ ಆರ್.ಅಶೋಕ್
ಸರ್ವಧರ್ಮದ ಯಾರು ಬೇಕಾದರೂ ಭಾಗಿಯಾಗಬಹುದು
Team Udayavani, Apr 7, 2022, 3:37 PM IST
ಬೆಂಗಳೂರು: ಏಪ್ರಿಲ್ 10ರಂದು ರಾಮನವಮಿಯಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ರಾಮರಥಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ರಾಮರಥಯಾತ್ರೆ ಅಲ್ಲದೆ ಶನಿವಾರ ಮತ್ತು ಭಾನುವಾರ ಜಾನಪದ ಜಾತ್ರೆ ಹಮ್ಮಿಕೊಂಡಿದ್ದೇವೆ. ರಾಮರಥ ಯಾತ್ರೆಗೆ ರಾಮನನ್ನು ಪ್ರೀತಿಸುವ ಪ್ರತಿಯೊಬ್ಬರೂ ಪಾಲ್ಗೊಳ್ಳಬಹುದು.ನನ್ನ ಮನೆ ದೇವರು ಆಂಜನೇಯ.ಹಾಗಾಗಿ ನಾನು ರಾಮಭಕ್ತ.ಸರ್ವಧರ್ಮದ ಯಾರು ಬೇಕಾದರೂ ಭಾಗಿಯಾಗಬಹುದು.ಯಾರಿಗೂ ನಿರ್ಬಂಧವಿಲ್ಲ” ಎಂದರು.
”ಅಪಘಾತ, ಕೊಲೆ ಯಾವುದೇ ಅಪರಾಧ ಆದರೂ ಕಾನೂನಿನ ವ್ಯಾಪ್ತಿಯಲ್ಲಿ ತನಿಖೆ ಆಗುತ್ತದೆ.ಅದಕ್ಕೆ ಯಾವುದೇ ಧರ್ಮದ ಬಣ್ಣಕೊಡುವುದು ಬೇಡ.ಹಿಜಾಬ್ ವಿಚಾರದಲ್ಲಿ ವಿದೇಶಿ ಕೈವಾಡ ಇರುವುದು ಸಾಬೀತಾಗಿದೆ.ಇದರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.
ಮಂತ್ರಾಲಯ ಶ್ರೀಗಳ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಜಯನಗರದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಸಂಸದ ಪ್ರತಾಪ ಸಿಂಹ, ಬಿಜೆಪಿ ಮುಖಂಡ ಸುಬ್ಬಣ್ಣ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.
ಸರ್ಕಾರ ಸುಭದ್ರವಾಗಿ ಜನಪರ ಆಡಳಿತ ನೀಡಿ, ಶಾಂತಿ ಸುವ್ಯವಸ್ಥೆ ನೆಲೆಸಲಿ. ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬೆಳೆಯಾಗಲಿ. ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಮುಖ್ಯಮಂತ್ರಿಗಳು ಆಗಮಿಸಬೇಕು.ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯವರು ಎಂಬ ಸಂತೋಷ ಖುಷಿ ಇದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಆಶೀರ್ವಾದ ಮಾಡಿದರು.
ಸ್ವಾಮೀಜಿ ಭೇಟಿ ಮಾಡಿದ ಬಳಿಕ ಹೇಳಿಕೆ ನೀಡಿದ ಸಚಿವ ಅಶೋಕ್, ಮಂತ್ರಾಲಯದಲ್ಲಿ ದಾಸೋಹ ಭವನ ನಿರ್ಮಾಣ ಮಾಡಲು ಹಾಗೂ ಕುಡಿಯುವ ನೀರು ಒದಗಿಸಲು ಐದು ಕೋಟಿ ಕೊಡಲು ಮತ್ತು ಬೆಂಗಳೂರಿನಲ್ಲಿ ಒಂದೂವರೆ ಎಕರೆ ಜಮೀನು ಕೊಡಲು ಸಿಎಂ ಸಮ್ಮತಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.