ರಾಮನಗರ : ಮ್ಯಾನ್‌ಹೋಲ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಡಿಸಿಎಂ
Team Udayavani, Jun 4, 2021, 7:08 PM IST
ಬೆಂಗಳೂರು: ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ.
ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂ. ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರಕಾರ ತಕ್ಷಣವೇ ಪ್ರಕಟಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಈ ವಿಷಯವನ್ನು ಬೆಂಗಳೂರಿನಲ್ಲಿ ಪ್ರಕಟಿಸಿದರು.
ಇದನ್ನೂ ಓದಿ :ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.11 ಇದ್ದು, ಶೇ.5ಕ್ಕೆ ಬಂದರೆ ಅನ್ ಲಾಕ್ : ಸಿಎಂ BSY
ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.