![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Dec 17, 2021, 11:30 AM IST
ಬೆಂಗಳೂರು : ಗುರುವಾರ ವಿಧಾನಸಭೆಯಲ್ಲಿ ಆಡಿದ ಮಾತು ವಿವಾದ ಸೃಷ್ಟಿಸಿ, ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸ್ಪೀಕರ್ ರಮೇಶ್ ಕಮಾರ್ ಶುಕ್ರವಾರ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ.
”ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನನಗಿರಲಿಲ್ಲ.ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದರೆ ಕ್ಷಮೆ ಕೇಳಲು ನನಗೆ ಯಾವುದೇ ತೊಂದರೆ ಇಲ್ಲ. ನನ್ನ ಹೃದಯಾಳದಿಂದ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕಲಾಪ ಆರಂಭಕ್ಕೂ ಮುನ್ನ ರಮೇಶ್ ಕುಮಾರ್ ಕ್ಷಮೆ ಯಾಚಿಸಿದ್ದಾರೆ.
”ಇದನ್ನು ಬೆಳೆಸುವುದು ಬೇಡ ಇಲ್ಲಿಗೆ ಮುಗಿಸಿ” ಎಂದು ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಅವರು ಸದನದಲ್ಲಿ ಮನವಿ ಮಾಡಿದರು.
ಮಳೆಯಿಂದ ಬೆಳೆ ನಷ್ಟ, ಪ್ರವಾಹದಿಂದ ಸಮಸ್ಯೆ ಕುರಿತ ಚರ್ಚೆ ಸಂದರ್ಭದಲ್ಲಿ ಸದಸ್ಯರು ತಾವು ಮಾತಾಡಬೇಕು ಎಂದು ಒತ್ತಾಯಿಸಿದಾಗ ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ, “ಹೀಗೆ ಎಲ್ಲರೂ ಬೇಡಿಕೆ ಇಟ್ಟರೆನನಗೆ ಸದನ ನಡೆಸುವುದು ಕಷ್ಟವಾಗುತ್ತದೆ’ಎಂದರು. ಆಗ ಮಧ್ಯಪ್ರವೇಶ ಮಾಡಿದ ರಮೇಶ್‌ಕುಮಾರ್ ಮಾತಿನ ಭರದಲ್ಲಿ,”ವೆನ್‌ರೇಪ್ ಈಸ್ ಇನ್ವಿಟೇಬಲ್ ಲೇ ಬ್ಯಾಕ್ ಅಂಡ್ ಎಂಜಾಯ್’ (ಅತ್ಯಾಚಾರ ಅನಿವಾರ್ಯ ಆದಾಗ ಮಲಗಿ ಆನಂದಿಸಿ) ಎಂದು ಹೇಳಿದರು. ಸ್ಪೀಕರ್ ಕಾಗೇರಿ ಅವರು, “ಈಗ ಪರಿಸ್ಥಿತಿ ಎಂಜಾಯ್ ಮಾಡಬೇಕು ಅನ್ನುವ ಹಾಗಾಗಿದೆ ನನ್ನ ಸ್ಥಿತಿ’ ಎಂದು ಹೇಳಿದರು. ಆದರೆ, ರಮೇಶ್ ಕುಮಾರ್ ಮಾತು ವಿವಾದಕ್ಕೆ ಗುರಿಯಾಗಿ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿ ಮಹಿಳಾ ಸಂಘಟನೆಗಳಿಂದ ಅಕ್ರೋಶ ವ್ಯಕ್ತವಾಗಿತ್ತು.
ಸಚಿವೆ ಶಶಿಕಲಾ ಜೊಲ್ಲೆ ಖಂಡನೆ
ರಮೇಶ್ ಕುಮಾರ್ ಅವರು ಇಂಗ್ಲಿಷ್ ಗಾದೆ ಮಾತು ಹೇಳಿದರು, ಅವರ ಮೇಲೆ ಗೌರವವಿತ್ತು.ಅವರು ಹಿರಿಯರು, ತುಂಬಾ ತಿಳಿದುಕೊಂಡವರು,ನಾವು ನೂತನ ಶಾಸಕರಾಗಿದ್ದಾಗ ಅವರನ್ನು ನೋಡಿ ಕಲಿತವರು. ಸ್ಪೀಕರ್ ಆಗಿದ್ದವರು ಆದ್ದರಿಂದ ಅವರು ಆ ರೀತಿ ಹೇಳಿಕೆ ನೀಡಬಾರದಿತ್ತು.ನಾನು ಅವರು ಹೇಳಿಕೆಯನ್ನು ಖಂಡಿಸುತ್ತೇನೆ. ಸದನದಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡುತ್ತೇವೆ. ಇದರ ಬಗ್ಗೆ ನಾವು ಧ್ವನಿ ಎತ್ತುತ್ತೇವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.
ರಮೇಶ್ ಕುಮಾರ್ ಹೇಳಿಕೆ ಬಳಿಕ ಸ್ಪೀಕರ್ ಕಾಗೇರಿ ನಗುವಿನ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ನಿನ್ನೆ ಸದನದಲ್ಲಿ ಇರಲಿಲ್ಲ,ರಮೇಶ್ ಕುಮಾರ್ ಅವರ ಹೇಳಿಕೆ ಅಷ್ಟೇ ನೋಡಿದ್ದೇನೆ. ಸ್ಪೀಕರ್ ನಗೆಯಾಡಿರುವುದು ನೋಡಿಲ್ಲ ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.