ರಮೇಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ ಅವರದ್ದೂ ಸಾಲ ಬಾಕಿ ಇದೆ: ಸಚಿವ ಸೋಮಶೇಖರ
Team Udayavani, May 10, 2022, 11:29 AM IST
ಬೆಳಗಾವಿ: ಅಪೆಕ್ಸ್ ಬ್ಯಾಂಕಿನಿಂದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅಷ್ಟೇ ಅಲ್ಲದೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಬಂಡೆಪ್ಪ ಕಾಶಂಪುರ್ ಸೇರಿದಂತೆ ಅನೇಕರು ಸಾಲ ಪಡೆದಿದ್ದಾರೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 24 ಜನ ಅಪೆಕ್ಸ್ ಬ್ಯಾಂಕಿನಿಂದ ಸುಮಾರು ಆರು ಸಾವಿರ ಕೋಟಿ ರೂ. ವರೆಗೆ ಸಾಲ ಪಡೆದಿದ್ದಾರೆ. ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಬಂಡೆಪ್ಪ ಕಾಶೆಂಪುರ್ ಸೇರಿದಂತೆ ಅನೇಕರು ಸಾಲ ಪಡೆದಿದ್ದಾರೆ. ಸಾಲ ಪಡೆದವರಿಗೆ ನೋಟಿಸ್ ನೀಡಲಾಗಿದೆ ಎಂದರು.
ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಸಾಲ ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ. ಸಾಲ ಕಟ್ಟದವರ ಆಸ್ತಿ ಜಪ್ತಿ ಹೇಗೆ ಮಾಡಿಕೊಳ್ಳುತ್ತದೆಯೋ ಹಾಗೆಯೇ ಅಪೆಕ್ಸ್ ಬ್ಯಾಂಕ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಕೆಲವರು ಬಡ್ಡಿ ಮತ್ತು ಅಸಲು ಎರಡನ್ನೂ ಕಟ್ಟಿಲ್ಲ. ತುಮಕೂರು, ದಕ್ಷಿಣ ಕರ್ನಾಟಕ ಸೇರಿದಂತೆ ಡಿಸಿಸಿ ಬ್ಯಾಂಕುಗಳಿಂದ ಸಾಲ ಪಡೆದಿದ್ದಾರೆ. ಅಪೆಕ್ಸ್ ಬ್ಯಾಂಕಿನಿಂದ ರಾಜ್ಯದಲ್ಲಿ 6 ಸಾವಿರ ಕೋಟಿ ರೂ.ವರೆಗೆ ಸಾಲ ನೀಡಲಾಗಿದೆ.ಸಾಲ ವಸೂಲಾತಿಗಾಗಿ ಗಂಭೀರ ಕ್ರಮ ಕೈಗೊಳ್ಳಲಾಗುವುದು, ಎಷ್ಟು ಕೋಟಿ ರೂ. ಸಾಲ ಪಡೆದಿದ್ದಾರೆ ಎಂಬುದರ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದರು.
ಇದನ್ನೂ ಓದಿ:ಸಿಎಂ ದಿಲ್ಲಿಗೆ ಹೊರಟರೂ ಆಕಾಂಕ್ಷಿಗಳಿಗಿಲ್ಲ ಉತ್ಸಾಹ!: ಇದರ ಗುಟ್ಟೇನು?
ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ಇದೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡುವುದರ ಬಗ್ಗೆ ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ. ನಮ್ಮ ಶಾಸಕರಿಗೆ ಯಾವ ಸ್ಥಾನ ಸಿಕ್ಕಿಲ್ಲ ಎಂಬುದು ಕೇಂದ್ರದ ವರಿಷ್ಠರಿಗೆ ಗೊತ್ತಿದೆ ಎಂದರು.
ರಾಜ್ಯ ಸರ್ಕಾರದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹಗರಣ ಆರೋಪ ಮಾಡುತ್ತ ಉಡಾಫೆ ಮಾತುಗಳನ್ನು ಹೇಳುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ಹಾಸಿಗೆ ದಿಂಬುಗಳ ಹಗರಣ ಆಗಿಲ್ಲವೇ? ಅವೆಲ್ಲ ಹೇಗೆ ಮುಚ್ಚಿಹಾಕಿದ್ದಾರೆ ಎಂದು ನಮಗೆ ಎಲ್ಲವೂ ಗೊತ್ತು ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.