ಗೋವಾ ವಿಧಾನಸಭೆಗೆ ರಾಣೆ ದಂಪತಿಗಳು : ಬಿಜೆಪಿಯ ಜೋಡಿಗೆ ಭರ್ಜರಿ ಜಯ
Team Udayavani, Mar 10, 2022, 2:01 PM IST
ಪಣಜಿ: ಗೋವಾದ ಸತ್ತರಿ ತಾಲೂಕಿನಲ್ಲಿ ಬಿಜೆಪಿಯ ರಾಣೆ ದಂಪತಿಗಳು ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿ ಮತ್ತೆ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.
ವಾಳಪೈ ಕ್ಷೇತ್ರದಲ್ಲಿ ಸಚಿವ ವಿಶ್ವಜಿತ್ ರಾಣೆ, ಪರ್ಯೆ ಕ್ಷೇತ್ರದಲ್ಲಿ ಪತ್ನಿ ದಿವ್ಯಾ ರಾಣೆ ಜಯಗಳಿಸಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಸುಲಭ ಗೆಲುವು ಸಾಧಿಸಿದೆ.
ವಾಳಪೈ ಮತ್ತು ಪರ್ಯೆ ಕ್ಷೇತ್ರವು ರಾಣೆ ಕುಟುಂಬದ ಭದ್ರಕೋಟೆ ಎಂದೇ ಹೇಳಲಾಗುತ್ತದೆ. ಪರ್ಯೆ ಕ್ಷೇತ್ರದಲ್ಲಿ ವಿಶ್ವಜಿತ್ ರಾಣೆಯವರ ತಂದೆ ಪ್ರತಾಪಸಿಂಗ್ ರಾಣೆ ಹಲವು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ಪ್ರತಾಪಸಿಂಗ ರಾಣೆ ತಮ್ಮ ಸೊಸೆ ದಿವ್ಯಾ ರಾಣೆ ಎದುರು ಪರ್ಯೆ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಪಕ್ಷದಿಂದ ಸ್ಫರ್ಧಿಸಿದ್ದ ಪ್ರತಾಪ ಸಿಂಗ್ ರಾಣೆ ಕಣದಿಂದ ಹಿಂದಕ್ಕೆ ಸರಿದು ಸೊಸೆಯ ಗೆಲುವಿಗೆ ದಾರಿ ಮಾಡಿ ಕೊಟ್ಟಿದ್ದರು.
2017 ರಲ್ಲಿ ಕಾಂಗ್ರೇಸ್ ಪಕ್ಷದಿಂದ ವಾಳಪೈ ಕ್ಷೇತ್ರದಿಂದ ವಿಶ್ವಜಿತ್ ರಾಣೆ ಸ್ಫರ್ಧಿಸಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸ್ಫರ್ಧಿಸಿ ವಿಶ್ವಜಿತ್ ರಾಣೆ ಜಯಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.