ಮಹಿಳೆಯ ಅತ್ಯಾಚಾರಗೈದು ಹತ್ಯೆ ಆರೋಪಿಯ ಅಪರಾಧ ಕೃತ್ಯ ಸಾಬೀತು
Team Udayavani, Jun 27, 2023, 5:42 AM IST
ಮಂಗಳೂರು: ಮಹಿಳೆಯ ಅತ್ಯಾಚಾರ, ಹತ್ಯೆ ನಡೆಸಿದ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಶಿಕ್ಷೆಯ ಪ್ರಮಾಣದ ವಿಚಾರಣೆ ಮಂಗಳವಾರ ನಡೆಯಲಿದೆ.
ಮಂಜೇಶ್ವರ ಪಾತೂರು ವರ್ಕಾಡಿ ಬದಿಮಾಲೆ ನಿವಾಸಿ ಮಹಮ್ಮದ್ ಅಶ್ರಫ್ ಯಾನೆ ಅಶ್ರಫ್ (33) ಶಿಕ್ಷೆಗೊಳಗಾದನು. ಬಾಳೆಪುಣಿ ಗ್ರಾಮದ ಬೆಳ್ಕೆರಿಯ ಮಹಿಳೆ ಹತ್ಯೆಯಾದವರು.
ಮಹಮ್ಮದ್ ಅಶ್ರಫ್ ಕೂಲಿ ಕೆಲಸ ಮಾಡಿಕೊಂಡಿದ್ದು, ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು, ಈ ಸಂದರ್ಭ ಮಹಿಳೆ ಮನೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿದ್ದ. ಒಂದು ದಿನ ಮಹಿಳೆ ವಾಸವಿದ್ದ ಮನೆಯ ಬಾವಿಗೆ ಹೆಬ್ಟಾವು ಬಿದ್ದಿತ್ತು. ಅದನ್ನು ತೆಗೆಯಲು ಹೋದಾಗ ಪರಿಚಯ ಮಾಡಿಕೊಂಡಿದ್ದ. ಮಹಿಳೆಯನ್ನು ಅತ್ಯಾಚಾರಗೈಯುವ ಉದ್ದೇಶದಿಂದ 2020ರ ಸೆ. 24ರಂದು ಬೆಳಗ್ಗೆ 10 ಗಂಟೆಗೆ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಚಿಲಕ ಹಾಕಿದ್ದ. ಬಾತ್‌ರೂಮ್‌ನಲ್ಲಿ ಕ್ಲೀನ್ ಮಾಡುತ್ತಿದ್ದ ಮಹಿಳೆಯನ್ನು ಹಿಂದಿನಿಂದ ಬಿಗಿಯಾಗಿ ಹಿಡಿದು ನೆಲಕ್ಕೆ ಬೀಳಿಸಿದ್ದ. ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ.
ಮಹಿಳೆ ಮೇಲೆ ಬೆಂಕಿ ಹಚ್ಚಿದ್ದ
ಹತ್ಯೆಯ ಬಳಿಕ ಆರೋಪಿ ಅಶ್ರಫ್ ಮಹಿಳೆಯ ಕಿವಿಯಲ್ಲಿದ್ದ ಚಿನ್ನದ ಓಲೆಯನ್ನು ತೆಗೆದಿದ್ದ. ಮನೆಯಲ್ಲಿದ್ದ 18,000 ರೂ. ದೋಚಿದ್ದ. ಬಳಿಕ ಮಹಿಳೆಯ ಮೈಮೇಲೆ ಬಟ್ಟೆ ಹಾಕಿ ಬೆಂಕಿ ಕೊಟ್ಟು ಸಾಕ್ಷ್ಯ ನಾಶ ಮಾಡಿದ್ದ. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಕೊಣಾಜೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು 2020ರ ಜು. 13ರಂದು ಬಂಧಿಸಿದ್ದರು.
6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಪ್ರಕರಣದ ಸಮಗ್ರ ವಿಚಾರಣೆ ನಡೆಸಿ ಆರೋಪಿಯ ವಿರುದ್ಧ ಐಪಿಸಿ 376 (ಅತ್ಯಾಚಾರ), ಐಪಿಸಿ 302 (ಕೊಲೆ) ಪ್ರಕರಣವನ್ನು ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ವಿಶೇಷ ತನಿಖಾಧಿಕಾರಿಯಾಗಿದ್ದು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಆರೋಪಿಯ ಅತ್ಯಾಚಾರ, ಕೊಲೆ ಪ್ರಕರಣಗಳು ಸಾಬೀತಾಗಲು ಬಲವಾದ ಸಾಕ್ಷ್ಯ, ದಾಖಲೆಗಳು ಕಾರಣವಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ಡಾ| ಮಹಾಬಲ ಶೆಟ್ಟಿ ಮತ್ತು ಡಾ| ಸೂರಜ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಿದ್ದರು. ಸರಕಾರದ ಪರ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಮತ್ತು ಬಿ. ಶೇಖರ್ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.