Repo Rate: ಸತತ 8ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
ಮೂರು ದಿನಗಳ ಕಾಲ ನಡೆದ ಹಣಕಾಸು ನೀತಿ ಸಮಿತಿ ಸಭೆ ನಡೆದಿತ್ತು...
Team Udayavani, Jun 7, 2024, 10:27 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿಯು ಸತತ 8ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ಶುಕ್ರವಾರ (ಜೂನ್ 07) ತಿಳಿಸಿದೆ.
ಇದನ್ನೂ ಓದಿ:Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು
ರೆಪೋ ದರದಲ್ಲಿ ಈ ಹಿಂದಿನಂತೆ ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಆರ್ ಬಿಐ (RBI) ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಬಾರಿಯೂ ರೆಪೋ ದರವನ್ನು ಶೇ.6.5ನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆದ ಹಣಕಾಸು ನೀತಿ ಸಮಿತಿ ಸಭೆ ನಡೆದಿದ್ದು, ಶುಕ್ರವಾರ (ಜೂನ್ 07) ಬೆಳಗ್ಗೆ ಮುಕ್ತಾಯಗೊಂಡಿತ್ತು.
ಇತ್ತೀಚೆಗಿನ ವರ್ಷಗಳಲ್ಲಿ ಜಗತ್ತಿನಲ್ಲಿ ಒಂದರ ನಂತರ ಮತ್ತೊಂದು ಬಿಕ್ಕಟ್ಟು ಉದ್ಭವಿಸುತ್ತಲೇ ಇದೆ. ಆದರೆ ಭಾರತದ ಆರ್ಥಿಕತೆ ಬಲಿಷ್ಠವಾಗುತ್ತಿದೆ. ಆದರೂ ನಾವು ಜಾಗತಿಕ ಮಟ್ಟದ ಬೆಳವಣಿಗೆ ಬಗ್ಗೆ ತೀವ್ರ ನಿಗಾ ಇರಿಸಬೇಕಾದ ಅಗತ್ಯವಿದೆ ಎಂದು ದಾಸ್ ಹೇಳಿದರು.
ಹಣಕಾಸು ನೀತಿ ಸಮಿತಿಯ ಆರು ಸದಸ್ಯರಲ್ಲಿ ನಾಲ್ವರು ರೆಪೋ ದರ ಯಥಾಸ್ಥಿತಿ ಕಾಪಾಡಿಕೊಳ್ಳುವ ಪರವಾಗಿ ಮತ ಚಲಾಯಿಸಿದ್ದರು. ರಿವರ್ಸ್ ರೆಪೋ ದರ ಶೇ.3.5ರಲ್ಲಿ ಮುಂದುವರಿಯಲಿದೆ ಎಂದು ಆರ್ ಬಿಐ (RBI) ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.