ಸಮತೋಲನ ಕಾಯ್ದುಕೊಳ್ಳಲು ಆರ್‌ಬಿಐ ಪ್ರಯತ್ನ


Team Udayavani, Feb 8, 2021, 6:45 AM IST

Udayavani Kannada Newspaper

ಸಂಕಷ್ಟದಿಂದ ಹೊರಬರುತ್ತಿರುವ ಆರ್ಥಿಕತೆಗೆ ವೇಗ ನೀಡುವ ನಿಟ್ಟಿನಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ರೆಪೋ ದರ ಮತ್ತು ರಿವರ್ಸ್‌ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದಿ ರುವ ತೀರ್ಮಾನವನ್ನು ಕೈಗೊಂಡಿದೆ. ಇದರಿಂದಾಗಿ ಭಿನ್ನ ರೀತಿಯ ಸಾಲಗಳ ಮೇಲಿನ ಬಡ್ಡಿದರ ಕಡಿಮೆಯಾಗುವ ಸಾಧ್ಯತೆ ಸದ್ಯಕ್ಕಂತೂ ಕಾಣಿಸುತ್ತಿಲ್ಲ. ಅಲ್ಲದೆ ಇದರಿಂದಾಗಿ ನಿಶ್ಚಿತ ಠೇವಣಿಗಳ ಮೇಲೆ ಬ್ಯಾಂಕ್‌ಗಳು ನೀಡುತ್ತಿರುವ ಬಡ್ಡಿದರವೂ ಇಳಿಕೆಯಾಗುವ ಸಾಧ್ಯತೆ ತಗ್ಗಿದೆ. ಆರ್‌ಬಿಐ ರೆಪೋ ದರವನ್ನು 4 ಪ್ರತಿಶತ ಹಾಗೂ ರಿವರ್ಸ್‌ ರೆಪೋ ದರವನ್ನು 3.35 ಪ್ರತಿಶತದವರೆಗೆ ನಿಗದಿ ಗೊಳಿಸಿದೆ. ಇದರಿಂದ ಸ್ಪಷ್ಟವಾಗುವ ಅಂಶವೆಂದರೆ, ಕೇಂದ್ರೀಯ ಬ್ಯಾಂಕ್‌ ಸದ್ಯಕ್ಕೆ ಯಾವ ಅಪಾಯವನ್ನೂ ಮೈಮೇಲೆ ಎಳೆದು ಕೊಳ್ಳುವಂಥ ಹೆಜ್ಜೆಗಳನ್ನು ಇಡುತ್ತಿಲ್ಲ ಎನ್ನುವುದು. ಪಾಲಿಸಿ ದರಗಳಲ್ಲಿ ಯಾವುದೇ ರೀತಿಯ ಬದಲಾವಣೆ ಆಗದಿರುವ ಕಾರಣ ವಾಣಿಜ್ಯ ಬ್ಯಾಂಕ್‌ಗಳು ಸಹ ಸದ್ಯಕ್ಕೆ ಸಾಲದ ಮೇಲಿನ ಬಡ್ಡಿದರವನ್ನು ತಗ್ಗಿಸುವುದಿಲ್ಲ. ಇದರ ಹೊರತಾಗಿಯೂ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು, ಒಂದು ವೇಳೆ ಅಗತ್ಯ ಎದುರಾದರೆ ರೆಪೋ ಮತ್ತು ರಿವರ್ಸ್‌ ರೆಪೋ ದರಗಳನ್ನು ಕೆಳಕ್ಕೆ ಇಳಿಸಲೂಬಹುದು ಎನ್ನುವ ಸಂಕೇತವನ್ನಂತೂ ನೀಡಿದೆ.

ಅರ್ಥವ್ಯವಸ್ಥೆಯಲ್ಲಿ ವೇಗ ತರುವುದಕ್ಕಾಗಿ ಸರಕಾರ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು, ಅನುದಾನಗಳನ್ನು ಈಡೇರಿಸಲು ಬಹಳ ಹಣದ ಅಗತ್ಯ ಎದುರಾಗಲಿದೆ. ಸರಕಾರಕ್ಕೆ ಸಾಲ ಪಡೆಯದೆ ಇವುಗಳನ್ನು ಈಡೇರಿಸುವುದು ಕಷ್ಟವಾಗಲಿದೆ. ಈ ಕಾರಣಕ್ಕಾಗಿಯೇ ಮಾರುಕಟ್ಟೆಯಲ್ಲಿ ಲಿಕ್ವಿಡಿಟಿಯನ್ನು ತರುವುದು ಆರ್‌ಬಿಐಗೆ ಅತ್ಯಗತ್ಯವಾಗಿದೆ. ಮುಂದಿನ ವಿತ್ತ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು 10.5 ಪ್ರತಿಶತದವರೆಗೂ ಏರಬಹುದು ಎಂಬ ಭರವಸೆಯಲ್ಲಿದೆ ಆರ್‌ಬಿಐ. ಇದರಿಂದ ಸ್ಪಷ್ಟವಾಗುವುದೇನೆಂದರೆ ಈಗ ಮಾರುಕಟ್ಟೆಯಲ್ಲಿ ಮತ್ತೆ ಬೇಡಿಕೆ ಅಧಿಕವಾಗಿದೆ. ಆದರೆ ಬೇಡಿಕೆ, ಬಳಕೆ ಮತ್ತು ಉತ್ಪಾದನೆಯ ಚಕ್ರ ಸರಿಯಾಗಿ ತಿರುಗಲು ಇನ್ನೂ ಬಹಳ ಸಮಯವೇ ಹಿಡಿಯಲಿದೆ ಎನ್ನುವುದೂ ಸ್ಪಷ್ಟ.

ಇನ್ನು ಆರ್‌ಬಿಐ ಮುಂದಿರುವ ಅನೇಕ ಸವಾಲುಗಳಲ್ಲಿ ಬ್ಯಾಂಕಿಂಗ್‌ ಕ್ಷೇತ್ರವನ್ನು ಬಲಿಷ್ಠಗೊಳಿಸುವುದೂ ಒಂದು. ಈಗಲೂ ದೇಶದ ಅನೇಕ ಬ್ಯಾಂಕ್‌ಗಳು ಅನುತ್ಪಾದಕ ಆಸ್ತಿಯ ಸಮಸ್ಯೆ ಯಿಂದ ಬಳಲುತ್ತಿವೆ. ಈ ಸಮಸ್ಯೆಯನ್ನು ನಿಭಾಯಿಸುವು ದಕ್ಕಾಗಿಯೇ ಸರಕಾರ ಬಜೆಟ್‌ನಲ್ಲಿ ಬ್ಯಾಡ್‌ ಬ್ಯಾಂಕ್‌ ಸ್ಥಾಪನೆಯ ಪ್ರಸ್ತಾವನೆಯನ್ನೂ ಇಟ್ಟಿದೆ. ಒಂದು ವೇಳೆ ಈ ಪ್ರಯತ್ನದಿಂದಾಗಿ ಬ್ಯಾಂಕ್‌ಗಳು ಎನ್‌ಪಿಎ ಸಮಸ್ಯೆಯಿಂದ ಹೊರಬರಲು ಯಶಸ್ವಿ ಯಾದರೆ ಅದರಿಂದ ಬಹಳ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಹಣದುಬ್ಬರದಲ್ಲೂ ಇಳಿಕೆ ಆಗುವ ಸಾಧ್ಯತೆಯ ಬಗ್ಗೆಯೂ ಆರ್‌ಬಿಐ ಹೇಳುತ್ತಿದೆ. ಆದರೆ ಇವೆಲ್ಲವೂ ಉತ್ಪಾದನೆ ಮತ್ತು ಪೂರೈಕೆಯ ಸ್ಥಿತಿ ಹೇಗಿರುತ್ತದೆ ಎನ್ನುವುದರ ಮೇಲೆ ಅವಲಂಬಿತವಾಗಿದೆ. ಅರ್ಥವ್ಯವಸ್ಥೆಯು ಎಲ್ಲಾ ಕೋನಗಳಿಂದಲೂ ಸವಾಲುಗಳನ್ನು ಎದುರಿಸುತ್ತಾ ಸಾಗುತ್ತಿದೆ ಎನ್ನುವುದರಲ್ಲಿ ಸಂದೇಹವಿಲ್ಲ. ಹೀಗಾಗಿಯೇ ಕೇಂದ್ರೀಯ ಬ್ಯಾಂಕ್‌ನ ಈಗಿನ ಸಂತುಲಿತ ನಡೆ ನಿರೀಕ್ಷಿತವೇ ಆಗಿತ್ತು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.