ಜಿ20 ಸಭೆಗೆ ಸಿದ್ಧ: ಬೆಂಗಳೂರಿನಲ್ಲಿ ನಾಳೆಯಿಂದ ಮೂರು ದಿನ ಸಭೆ
Team Udayavani, Dec 12, 2022, 6:15 AM IST
ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಜಿ20 ದೇಶಗಳ ಮೊದಲ ಹಂತದ ಶೆರ್ಪಾಗಳ ಸಭೆಯನ್ನು ಮುಗಿಸಿರುವ ಭಾರತ, ಈಗ 2ನೇ ಹಂತದಲ್ಲಿ ಬೆಂಗಳೂರಿನಲ್ಲಿ ಜಿ20 ದೇಶಗಳ ಹಣಕಾಸು ಮತ್ತು ಕೇಂದ್ರ ಬ್ಯಾಂಕ್‌ಗಳ ಪ್ರತಿನಿಧಿಗಳ (ಎನ್‌ಸಿಬಿಡಿ) ಸಭೆ ನಡೆಸಲು ಸಿದ್ಧವಾಗಿದೆ. ಮಂಗಳವಾರದಿಂದ ಮೂರು ದಿನಗಳ ಕಾಲ ಇದು ನಡೆಯಲಿದೆ.
ಭಾರತದ ಅಧ್ಯಕ್ಷತೆಯಲ್ಲಿ ಜಿ-20 ಫೈನಾನ್ಸ್ ಟ್ರ್ಯಾಕ್ ನ ಕಾರ್ಯಸೂಚಿಯ ಮೇಲಿನ ಚರ್ಚೆಗಳ ಆರಂಭವನ್ನು ಸೂಚಿಸುವ ಈ ಸಭೆಯನ್ನು ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಜಂಟಿಯಾಗಿ ಆಯೋಜಿಸಿವೆ. ಭಾರತವು ಈ ಶೃಂಗಸಭೆಯ ಗುಂಪಿನ ಅಧ್ಯಕ್ಷತೆ ವಹಿಸಿಕೊಂಡ ಅನಂತರ ನಡೆಯಲಿರುವ ಸಭೆಗಳ ಪೈಕಿ ಎರಡು ಸಭೆಗಳು ಉದ್ಯಾನ ನಗರಿಯಲ್ಲಿ ನಿಗದಿಯಾಗಿವೆ. ಇದರಲ್ಲಿ ಎಫ್ಸಿಬಿಡಿ ಸಭೆ ಡಿ. 13ರಿಂದ 15ರ ವರೆಗೆ ನಡೆಯಲಿದೆ.
ಜಿ-20 ರಾಷ್ಟ್ರಗಳ ಹಣಕಾಸು ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ನೇತೃತ್ವದ ಜಿ-20 ಫೈನಾನ್ಸ್ ಟ್ರ್ಯಾಕ್ ಬಂಡವಾಳ ಮತ್ತು ಆರ್ಥಿಕ ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ. ಇದು ಜಾಗತಿಕ ಆರ್ಥಿಕ ಚರ್ಚೆ ಮತ್ತು ನೀತಿ ಸಮನ್ವಯಕ್ಕೆ ಪರಿಣಾಮ ಕಾರಿ ವೇದಿಕೆ ಒದಗಿಸಲಿದೆ. 2023ರ ಫೆ. 23ರಿಂದ 25ರ ವರೆಗೆ ಬೆಂಗಳೂರಿನಲ್ಲಿ ಹಣ ಕಾಸು ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆ ನಡೆಯಲಿದೆ.
ಫೈನಾನ್ಸ್ ಟ್ರ್ಯಾಕ್ ಕಾರ್ಯಸೂಚಿ ನಿಗದಿ
ಜಾಗತಿಕ ಆರ್ಥಿಕತೆ, ಆರ್ಥಿಕ ದೃಷ್ಟಿಕೋನ, ಅಂತಾರಾಷ್ಟ್ರೀಯ ಹಣಕಾಸು ರಚನೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು, ಸುಸ್ಥಿರ ಹಣಕಾಸು, ಜಾಗತಿಕ ಆರೋಗ್ಯ, ಅಂತಾರಾಷ್ಟ್ರೀಯ ತೆರಿಗೆ ಮತ್ತು ಹಣಕಾಸು ವಲಯದ ಸಮಸ್ಯೆಗಳನ್ನು ಒಳಗೊಂಡ ಜಾಗತಿಕ ಆರ್ಥಿಕತೆಯ ಪ್ರಸ್ತುತ ಪ್ರಮುಖ ವಿಷಯಗಳನ್ನು ಜಿ-20 ಫೈನಾನ್ಸ್ ಟ್ರ್ಯಾಕ್ ಚರ್ಚಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.