ಚೀನ ಸವಾಲಿಗೆ ಸಿದ್ಧ: ಸೇನಾದಿನದಲ್ಲಿ ಭೂಸೇನಾ ಮುಖಸ್ಥ ಜ| ಪಾಂಡೆ
Team Udayavani, Jan 16, 2023, 7:00 AM IST
ಬೆಂಗಳೂರು: ಲಡಾಖ್ ಸೇರಿದಂತೆ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ಭೂಸೇನೆ ಸಿದ್ಧವಾಗಿದೆ ಎಂದು ಭೂಸೇನಾ ಮುಖ್ಯಸ್ಥ ಜ| ಮನೋಜ್ ಪಾಂಡೆ ಪ್ರತಿಪಾದಿಸಿದ್ದಾರೆ. ಚೀನದ ಯಾವುದೇ ಅನಿರೀಕ್ಷಿತ ಚಿತಾವಣೆಗಳನ್ನು ಎದುರಿಸಲು ಭೂಸೇನೆ ಶಕ್ತವಾಗಿದೆ ಎಂದಿದ್ದಾರೆ.
ಇದೇ ಮೊದಲ ಬಾರಿಗೆ ಹೊಸದಿಲ್ಲಿಯಿಂದ ಹೊರಗೆ, ಅಂದರೆ ಬೆಂಗಳೂರಿನಲ್ಲಿ ನಡೆದ “ಸೇನಾ ದಿನ’ದಲ್ಲಿ ಮಾತನಾಡಿದ ಅವರು, ಉತ್ತರದ ಗಡಿ ಪ್ರದೇಶದಲ್ಲಿ ಶಾಂತಿ ನೆಲೆಸಿದೆ. ಎಲ್‌ಎಸಿ ವ್ಯಾಪ್ತಿಯಲ್ಲಿ ಕದನ ವಿರಾಮ ಮುಂದುವರಿಸುವ ನಿಟ್ಟಿನಲ್ಲಿ ಆದ್ಯತೆಯ ಕ್ರಮ ಕೈಗೊಳ್ಳಲಾಗಿದೆ. ಪಶ್ಚಿಮ ವ್ಯಾಪ್ತಿಯಲ್ಲಿ ನಿಯಮ ಉಲ್ಲಂ ಸುವ ಪ್ರಕರಣಗಳು ಮುಂದುವರಿದಿವೆ ಎಂದರು.
ಸ್ಥಿತಿ ಸುಧಾರಣೆ
ಪಾಕಿಸ್ಥಾನ ಜತೆಗಿನ ಗಡಿ ಪ್ರದೇಶದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮತ್ತು ಶಸ್ತ್ರಾಸ್ತ್ರ ಸಾಗಣೆ ತಡೆಯಲು ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಈಶಾನ್ಯ ಭಾರತದಲ್ಲಿ ಕೂಡ ಭದ್ರತ ಸ್ಥಿತಿಯಲ್ಲಿ ಸುಧಾರಣೆಯಾಗಿದೆ ಎಂದು ಜ| ಪಾಂಡೆ ಪ್ರತಿಪಾದಿಸಿದರು. ಅಲ್ಲಿ ಸಕ್ರಿಯವಾಗಿರುವ ಹಲವು ಉಗ್ರಗಾಮಿ ಗುಂಪುಗಳನ್ನು ಶಾಂತಿ ಒಪ್ಪಂದಕ್ಕೆ ಬರುವಂತೆ ಮಾಡಲು ಸೇನೆ ಶ್ರಮಿಸಿದೆ ಎಂದರು.
ಆತ್ಮನಿರ್ಭರತೆಗೆ ಒತ್ತು
ಭವಿಷ್ಯದ ಸವಾಲುಗಳನ್ನು ಎದುರಿಸಲು ಆಧುನಿಕತೆ ಮತ್ತು ಆತ್ಮನಿರ್ಭರ ಭಾರತ ನಮ್ಮ ಮೂಲಮಂತ್ರವಾಗಿರಲಿದೆ. ಇದಕ್ಕೆ ಪೂರಕವಾಗಿ ಹಲವಾರು ಸುಧಾರಣೆಗಳನ್ನು ತಂದಿದ್ದು, ಭಾರತೀಯ ಕೈಗಾರಿಕೆಗಳೊಂದಿಗೆ ಖರೀದಿ- ಮಾರಾಟಗಾರ ಸಂಬಂಧದ ಬದಲಿಗೆ “ಸಹಭಾಗಿತ್ವ’ದ ಬಾಂಧವ್ಯ ಬೆಳೆಸಿಕೊಂಡಿದ್ದೇವೆ ಎಂದರು.
ಚೀನ, ಪಾಕ್‌ಗೆ ತಕ್ಕ ಉತ್ತರ
ಚೆನ್ನೈ: ಸದಾ ಕಾಲು ಕೆರೆದು ಬರುವ ಚೀನ ಮತ್ತು ಪಾಕಿಸ್ಥಾನಗಳಿಗೆ ತಕ್ಕ ಉತ್ತರ ನೀಡುವ ಮೂಲಕ ಭಾರತವನ್ನು ಬೆದರಿಸುವ ದೃಷ್ಟಾಂತಗಳಿಗೆ ಪೂರ್ಣ ವಿರಾಮ ಹಾಕಲಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಪ್ರತಿಪಾದಿಸಿದ್ದಾರೆ. ಚೆನ್ನೈಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಟದ ಹೊರತಾಗಿಯೂ 2020ರ ಮೇ ಮತ್ತು ಡಿಸೆಂಬರ್‌ನಲ್ಲಿ ಪೂರ್ವ ಲಡಾಖ್ ಹಾಗೂ ತವಾಂಗ್‌ನಲ್ಲಿ ಚೀನಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ ಎಂದರು. ಹಾಗೆಯೇ ಉರಿಯಲ್ಲಿ ಸಂಭವಿಸಿದ ಘಟನೆಗೆ ಬಾಲಾಕೋಟ್ ದಾಳಿಯ ಮೂಲಕ ಪಾಕಿಸ್ಥಾನಕ್ಕೆ ಪ್ರತ್ಯುತ್ತರ ನೀಡಲಾಯಿತು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.