ಎಸ್‌ಸಿ,ಎಸ್ಟಿ ಮೀಸಲು ಹೆಚ್ಚಳಕ್ಕೆ ಶಿಫಾರಸು
ಪ. ಜಾತಿಗೆ ಶೇ.17, ಪಂಗಡಕ್ಕೆ ಶೇ.7ರ ವರೆಗೆ; ಉದ್ಯೋಗ, ಶೈಕ್ಷಣಿಕ ಕ್ಷೇತ್ರಕ್ಕೆ ಅನ್ವಯ
Team Udayavani, Jul 3, 2020, 6:20 AM IST
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿಯನ್ನು ಕ್ರಮವಾಗಿ ಶೇ.17ಕ್ಕೆ ಮತ್ತು ಶೇ.7ಕ್ಕೆ ಹೆಚ್ಚಳ ಮಾಡಬಹುದು ಎಂದು ನಿವೃತ್ತ ನ್ಯಾ| ನಾಗಮೋಹನ್‌ದಾಸ್ ನೇತೃತ್ವದ ಆಯೋಗ ಶಿಫಾರಸು ಮಾಡಿದೆ.
ಪ.ಜಾತಿಯವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಶೇ.2 ಹಾಗೂ ಪ. ಪಂಗಡದ ಮೀಸಲಾತಿಯನ್ನು ಶೇ.4ರಷ್ಟು ಹೆಚ್ಚಳ ಮಾಡಬಹುದೇ ಎಂಬ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ರಾಜ್ಯ ಸರಕಾರ ಆಯೋಗ ರಚಿಸಿತ್ತು. ನಿವೃತ್ತ ನ್ಯಾ| ನಾಗಮೋಹನ್ ದಾಸ್ ಗುರುವಾರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ವರದಿ ನೀಡಿದರು.
ಸದ್ಯ ಪ.ಜಾತಿಗೆ ಶೇ.15 ಮತ್ತು ಪ. ಪಂಗಡಕ್ಕೆ ಶೇ.3ರಷ್ಟು ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಇದೆ.
ಶೇ.50 ಮೀರಲು ಶಿಫಾರಸು?
ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.50 ಮೀರಬಾರದು ಎಂಬುದಾಗಿ ಸುಪ್ರೀಂ ಕೋರ್ಟ್ ಆದೇಶವಿದೆ. ಆದರೂ ಮೀಸಲಾತಿ ಅಂಶವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಿ ಪ್ರಮಾಣ ಹೆಚ್ಚಳಕ್ಕೆ ಅವಕಾಶವಿದ್ದು, ಈ ಬಗ್ಗೆ ಸರಕಾರ ಪರಿಶೀಲಿಸಬಹುದು ಎಂದು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.
ದೇಶದಲ್ಲೇ ಮೊದಲ ಆಯೋಗ
ಮೀಸಲಾತಿ ಹೆಚ್ಚಳ ವಿಚಾರದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಆಯೋಗ ರಚನೆ ಯಾಗಿತ್ತು. ಅನ್ಯ ರಾಜ್ಯಗಳಲ್ಲಿ ಕೇವಲ ಆದೇಶಗಳ ಮೂಲಕ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಆದರೆ ಹೆಚ್ಚಳ ಬೇಕೇ, ಬೇಡವೇ ಎಂಬುದನ್ನು ತಿಳಿಯಲು ಆಯೋಗ ರಚಿಸಿರುವುದರಲ್ಲಿ ರಾಜ್ಯವೇ ಮೊದಲು ಎಂದು ಎಚ್.ಎನ್. ನಾಗಮೋಹನ್ ದಾಸ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಒಳಮೀಸಲಾತಿ ಕಲ್ಪಿಸಿ
ಅಲೆಮಾರಿ, ಅರೆ ಅಲೆಮಾರಿ, ಅರಣ್ಯವಾಸಿಗಳು, ಬುಡಕಟ್ಟು ಜನರ ಅಭಿವೃದ್ಧಿಗೆ ಪ್ರತ್ಯೇಕ ಆಯೋಗ ಸ್ಥಾಪಿಸಬೇಕು. ಒಳಮೀಸಲಾತಿ ಅಗತ್ಯ. ಆದರೆ ಆಳ ಅಧ್ಯಯನದ ಜತೆಗೆ ವೈಜ್ಞಾನಿಕವಾಗಿ ಜಾತಿ ಗಣತಿ ನಡೆದು ಒಳಮೀಸಲಾತಿ ಸೌಲಭ್ಯ ಕಲ್ಪಿಸಬಹುದು ಎಂದೂ ಶಿಫಾರಸಿನಲ್ಲಿದೆ ಎಂದು ತಿಳಿದುಬಂದಿದೆ.
ನಾನು ಗ್ರಾಮಾಂತರ ಪ್ರದೇಶದಲ್ಲಿ ಹುಟ್ಟಿ ಬೆಳೆದವನು. ತಳ ಸಮುದಾಯದವರ ಬದುಕು, ಕಷ್ಟ ಗೊತ್ತಿದೆ. ಆದರೆ ಅವರಿಂದಲೇ ಅದನ್ನು ಕೇಳಿದ್ದು ವಿಶೇಷ ಅನುಭವ ನೀಡಿತು.
– ನ್ಯಾ| ನಾಗಮೋಹನ್‌ದಾಸ್
ನಿವೃತ್ತ ನ್ಯಾಯಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.