ಜು.17ರಿಂದ ಉಡುಪಿಯಲ್ಲಿ ಅಗ್ನಿಪಥ್ ನೇಮಕಾತಿ ರ‍್ಯಾಲಿ:6,800ಕ್ಕೂ ಅಧಿಕ ಅಭ್ಯರ್ಥಿಗಳ ನೋಂದಣಿ
Team Udayavani, Jul 13, 2023, 7:40 AM IST
ಉಡುಪಿ: ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮ ಕಾತಿ ರ್ಯಾಲಿಯು ಜು. 17ರಿಂದ 25ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ರ್ಯಾಲಿ ಕುರಿತ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರ್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. 6,800ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ರ್ಯಾಲಿಗೆ ನಿತ್ಯ 1000 ಮಂದಿ ಆಗಮಿಸಲಿದ್ದು, ಇವರಿಗೆ ಕ್ರೀಡಾಂಗಣ ದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮೊಬೈಲ್ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಬೇಕು. ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಬಗ್ಗೆ ನಿತ್ಯವೂ ಪರಿ ಶೀಲಿಸುವಂತೆ ನಗರಸಭೆಯ ಪೌರಾ ಯುಕ್ತರಿಗೆ ಸೂಚನೆ ನೀಡಿದರು.
ಅಭ್ಯರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗದಂತೆ, ವಾಹನಗಳು ಮತ್ತು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಯಾಗದಂತೆ ಮತ್ತು ರಾತ್ರಿ ವೇಳೆಯಲ್ಲಿ ರಸ್ತೆ ಬದಿಗಳಲ್ಲಿ ಅಭ್ಯರ್ಥಿಗಳು ಮಲಗ ದಂತೆ, ಕ್ರೀಡಾಂಗಣದ ಸುತ್ತಮುತ್ತ ಅಗತ್ಯ ಭದ್ರತ ವ್ಯವಸ್ಥೆ ಒದಗಿಸಲು ಪೊಲೀಸ್ ಇಲಾಖೆಗೆ ತಿಳಿಸಿದರು.
ಮೆಸ್ಕಾಂ ವತಿಯಿಂದ ಕ್ರೀಡಾಂಗಣಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಅಪಾಯಕಾರಿ ಮರದ ಕೊಂಬೆಗಳು ಮತ್ತು ವಿದ್ಯುತ್ ತಂತಿಗಳಿದ್ದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬಿಎಸ್‌ಎನ್‌ಎಲ್ ವತಿಯಿಂದ ಸೇನಾ ಕಾರ್ಯಗಳನ್ನು ನಿರ್ವಹಿಸಲು ಇಂಟರ್‌ನೆಟ್, ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳ ನೈಜತೆ ಪರಿಶೀಲಿಸಲು ಶಿಕ್ಷಣ ಇಲಾ ಖೆಯ ಸಿಬಂದಿ ನಿಯೋಜನೆ, ತುರ್ತು ಆರೋಗ್ಯ ಸಹಾಯಕ್ಕಾಗಿ ಆ್ಯಂಬುಲೆನ್ಸ್ ಸಹಿತ ವೈದ್ಯಕೀಯ ಸಿಬಂದಿ ನಿಯೋಜಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈಗಾಗಲೇ ನೋಂದಣಿ ಪ್ರಕ್ರಿಯೆ ನಡೆದಿದ್ದು, ಅಗ್ನಿವೀರ್ ಜನರಲ್ ಡ್ನೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮನ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಪತ್ರಗಳನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದೆ ಎಂದರು.
ಸಹಾಯಕ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ಪೌರಾಯುಕ್ತ ರಾಯಪ್ಪ, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.