Bengaluru: ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಆರೋಪ: ರೀಲ್ಸ್ ಸ್ಟಾರ್ ಸೋನು ಗೌಡ ಬಂಧನ
ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು.
Team Udayavani, Mar 22, 2024, 12:28 PM IST
ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋ ಸ್ಪರ್ಧಿ, ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ (ಮಾರ್ಚ್ 22) ನಡೆದಿದೆ.
ಇದನ್ನೂ ಓದಿ:Exams; ಶಾಲೆಗಳ 5,8,9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ
ನಗರದ ಬ್ಯಾರಡ ಹಳ್ಳಿ ಪೊಲೀಸರು ಸೋನು ಅವರನ್ನು ಬಂಧಿಸಿ ಎಫ್ ಐಆರ್ ದಾಖಲು ಮಾಡಿದ್ದಾರೆ. ಇತ್ತೀಚೆಗೆ ಸೋನು ಗೌಡ ಅವರು, ಏಳು ವರ್ಷದ ಸೇವಂತಿ ಎಂಬ ಮಗುವನ್ನು ದತ್ತು ಪಡೆದುಕೊಂಡಿರುವುದಾಗಿ ಹೇಳಿಕೊಂಡಿದ್ದರು.
ಆದರೆ ಸೋನು ಶ್ರೀನಿವಾಸ ಗೌಡ ಕಾನೂನು ಪ್ರಕಾರವಾಗಿ ಮಗುವನ್ನು ದತ್ತು ಪಡೆದುಕೊಂಡಿಲ್ಲ ಎಂದು ಆರೋಪಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು.
ಸೋನು ಗೌಡ ಹೇಳೋದೇನು?
ನಮ್ಮ ಅಪಾರ್ಟ್ ಮೆಂಟ್ ಸಮೀಪ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಮಗು ನಮ್ಮ ಮನೆಗೆ ಬಂದು ಆಟ ಆಡುತ್ತಿತ್ತು. ಏತನ್ಮಧ್ಯೆ ಮಗು ಊರಿಗೆ ಹೋದಾಗ ಜ್ವರ ಬಂದ ಸಂದರ್ಭದಲ್ಲಿ ನನಗೆ ಕರೆ ಮಾಡಿದ್ದಳು. ಹೀಗಾಗಿ ಆ ಮಗುವನ್ನು ನಾನೇ ಸಾಕಿಕೊಳ್ಳುವುದಾಗಿ ಹೇಳಿ ರಾಯಚೂರಿನಿಂದ ಕರೆದುಕೊಂಡು ಬಂದಿದ್ದೆ. ದತ್ತು ತೆಗೆದುಕೊಳ್ಳುವ ಪ್ರಕ್ರಿಯೆ ನಡೆದಿದ್ದು, ಅದಕ್ಕಾಗಿ ಮೂರು ತಿಂಗಳ ಕಾಲಾವಕಾಶ ಬೇಕಾಗಿದೆ ಎಂದು ಪೊಲೀಸರ ವಿಚಾರಣೆ ವೇಳೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್ ಸ್ಟಾಪ್ ಎಂದ ಮೋಕ್ಷಿತಾ; ಒಂಟಿಯಾದ ಮಂಜು
BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಆದ ಹನುಮಂತು
BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್ ಸುರೇಶ್; ಬಿಗ್‌ಬಾಸ್ ಆಟದಲ್ಲಿ ರಾದ್ಧಾಂತ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.