ʻಪ್ರಾಜೆಕ್ಟ್‌ Kʼಯ ರಿಲೀಸ್‌ ಡೇಟ್‌ ಹೊರಕ್ಕೆ: ಬಿಗ್‌ ಬಿ, ದೀಪಿಕಾ, ಪ್ರಭಾಸ್‌ ಅಭಿನಯದ ಚಿತ್ರ

Team Udayavani, Feb 18, 2023, 1:31 PM IST

project k

ಮುಂಬೈ: ಬಾಲಿವುಡ್‌ ತಾರೆಗಳಾದ ಅಮಿತಾಬ್‌ ಬಚ್ಚನ್‌, ದೀಪಿಕಾ ಪಡುಕೋಣೆ, ತೆಲುಗು ಸೂಪರ್‌ಸ್ಟಾರ್‌  ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ʻಪ್ರಾಜೆಕ್ಟ್‌ Kʼಯ ರಿಲೀಸ್‌ ದಿನಾಂಕ ಹೊರಬಿದ್ದಿದೆ.

ಶಿವರಾತ್ರಿಯ ಶುಭದಿನದಂದೇ ಚಿತ್ರತಂಡ ʻಪ್ರಾಜೆಕ್ಟ್‌ Kʼಯ ಬಿಡುಗಡೆ ದಿನಾಂಕ ಘೋಷಿಸಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ. ʻಪ್ರಾಜೆಕ್ಟ್‌ Kʼ ಚಿತ್ರ 2024ರ ಜನವರಿ 12ರಂದು ತೆರೆಗೆ ಅಪ್ಪಳಿಸಲಿದೆ ಎಂದು ಚಿತ್ರತಂಡ ಹೇಳಿದೆ.

ಅಲ್ಲದೇ ಈ ಬಗ್ಗೆ ಇನಸ್ಟಾಗ್ರಾಮ್‌ನಲ್ಲಿ ಸಿನೆಮಾದ ಪೋಸ್ಟರ್‌ ಹಂಚಿಕೊಂಡಿರುವ ದೀಪಿಕಾ ಪಡುಕೋಣೆ “12.1.2024 #Project K.. Happy Mahashivaratri”  ಎಂದು ಬರೆದುಕೊಂಡಿದ್ದಾರೆ.

ಸಿನೆಮಾದ ಪೋಸ್ಟರ್‌ನಲ್ಲಿ ಕೈಯೊಂದು ತನ್ನ ತೋರು ಬೆರಳನ್ನು ತೋರಿಸುತ್ತಿದ್ದು, ಯುದ್ಧ ಭೂಮಿಯಂತಿರುವ ಪ್ರದೇಶದಲ್ಲಿ ಮೂರು ಜನ ಬಂದೂಕು ಹಿಡಿದುಕೊಂಡಿರುವ ದೃಶ್ಯ ಕಂಡುಬಂದಿದೆ.

View this post on Instagram

A post shared by Vyjayanthi Movies (@vyjayanthimovies)

ದೀಪಿಕಾ ಮಾತ್ರವಲ್ಲದೆ ಬಿಗ್‌ ಬಿ, ಪ್ರಭಾಸ್‌ ಕೂಡಾ ಪೋಸ್ಟರ್‌ ಹಂಚಿಕೊಂಡಿದ್ದಾರೆ.

ನಾಗ್‌ ಅಶ್ವಿನ್‌ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ʻಪ್ರಾಜೆಕ್ಟ್‌ Kʼ ಚಿತ್ರ ದ್ವಿಭಾಷಾ ಚಿತ್ರವಾಗಿರಲಿದ್ದು, ಹಿಂದಿ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಅಲ್ಲದೇ ಈ ಚಿತ್ರ ದೀಪಿಕಾ ಅಭಿನಯದ ಮೊದಲ ತೆಲುಗು ಚಿತ್ರವಾಗಿರಲಿದೆ ಎಂಬುದು ವಿಶೇಷ.

ಜನವರಿಯಲ್ಲಿ ದೀಪಿಕಾ ಪಡುಕೋಣೆಯ ಹುಟ್ಟುಹಬ್ಬದಂದು ದೀಪಿಕಾಳ ಫಸ್ಟ್‌ಲುಕ್‌ ಪೋಸ್ಟರ್‌ ಹೊರಬಿಟ್ಟಿದ್ದ ಚಿತ್ರತಂಡ ಸಿನಿಪ್ರಿಯರ ಎದೆಬಡಿತ ಹೆಚ್ಚಿಸಿತ್ತು. ಅದರಲ್ಲಿ ಮಹಿಳೆಯೊಬ್ಬಳು ಯುದ್ಧಭೂಮಿಯಲ್ಲಿರುವಂತೆ ಭಾಸವಾಗುತ್ತಿದ್ದು ಮಹಿಳೆಯ ಮುಖ ಕಾಣಿಸುತ್ತಿಲ್ಲ. ಗಿಡ್ಡ ಕೂದಲುಗಳನ್ನು ಹೊಂದಿದ್ದು ಯುದ್ಧದ ಉಡುಗೆಯನ್ನು ತೊಟ್ಟಂತಿದೆ.

ಸದ್ಯಕ್ಕೆ ಸಿನೆಮಾಗೆ ʻಪ್ರಾಜೆಕ್ಟ್‌ Kʼ ಎಂದು ಹೆಸರಿಟ್ಟಿದ್ದು ಟೈಟಲ್‌ ಬದಲಾಗುವ ಸಂಭವವಿದೆ ಎಂದು ಹೇಳಲಾಗುತ್ತಿದೆ. ಬಾಲಿವುಡ್‌ ಬೆಡಗಿ ದಿಶಾ ಪಟಾನಿ ಕೂಡಾ ಚಿತ್ರತಂಡದ ಭಾಗವಾಗಿರಲಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ: ವಿಚಾರಣೆ ವೇಳೆ ʻಪೃಥ್ವಿ ಶಾ ಯಾರೆಂದೇ ಗೊತ್ತಿಲ್ಲʼ ಎಂದ ಸ್ವಪ್ನಾ ಗಿಲ್‌

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.