![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 3, 2022, 12:51 PM IST
ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು,ವಿದ್ಯಾರ್ಥಿಗಳು ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಲು ಒಳ್ಳೆಯದಾಗುತ್ತದೆ.ಧರ್ಮ ಆಚರಣೆಗೆ ಪೂಜೆ ಪುನಸ್ಕಾರಕ್ಕೆ ಚರ್ಚ್, ಮಸೀದಿ, ದೇವಸ್ಥಾನಗಳಿವೆ. ಅಲ್ಲಿ ಏನು ಮಾಡಲೂ ನಾವು ಸ್ವತಂತ್ರರು ಎಂದರು.
ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯದಿದ್ದರೆ ಹೇಗಾಗುತ್ತದೆ? ಎಲ್ಲರೂ ಕೂಡಾ ಈ ಬಗ್ಗೆ ಯೋಚನೆ ಮಾಡಬೇಕು ಎಂದರು.
ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಯಾವುದೇ ಧರ್ಮದವರು ಅವರವರ ಧರ್ಮ ಆಚರಣೆ ಮಾಡಲು ಶಾಲೆಗೆ ಬರುವುದಲ್ಲ.ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು.
ಶಾಲೆ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು.ಶಾಲಾ ಮ್ಯಾನೇಜ್ ಮೆಂಟ್ ಹೇಳುವ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.