ರೆಮಿಡಿಸಿವಿರ್‌ ಕೊರತೆಯಾಗದಂತೆ ನೋಡುವ ಹೊಣೆಗಾರಿಕೆ ಸರಕಾರದ್ದು

Team Udayavani, Apr 21, 2021, 6:40 AM IST

ರೆಮಿಡಿಸಿವಿರ್‌ ಕೊರತೆಯಾಗದಂತೆ ನೋಡುವ ಹೊಣೆಗಾರಿಕೆ ಸರಕಾರದ್ದು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವಂತೆ ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆಗಳು ಬಹಿರಂಗಗೊಳುತ್ತಿವೆ. ಕೊರೊನಾ ಸೋಂಕಿತ ಪ್ರಕರಣಗಳು ಪ್ರತೀ ದಿನ ಹೆಚ್ಚಾಗುತ್ತಿರುವಂತೆ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಲ್ಲಿ ಕೊರತೆ ಎದ್ದು ಕಾಣುತ್ತಿದ್ದು, ಅದರ ಜತೆಗೆ ಕೊರೊನಾ ರೋಗಿಗಳಿಗೆ ಜೀವರಕ್ಷಕವಾಗಿ ಕಾರ್ಯ ನಿರ್ವಹಿಸುವ ರೆಮಿಡಿಸಿವಿರ್‌ ಚುಚ್ಚು ಮದ್ದಿನ ಅಭಾವ ಹೆಚ್ಚಾಗಿದೆ ಎಂಬ ಆರೋಪ ಬಹಿರಂಗವಾಗಿ ಕೇಳಿ ಬರುತ್ತಿದೆ.

ರೆಮಿಡಿಸಿವಿರ್‌ ಅಭಾವದ ಬಗ್ಗೆ ಕೇಂದ್ರ ಸರಕಾರ ಕೂಡ ಗಂಭೀರವಾಗಿ ಪರಿಗಣಿಸಿದ್ದು, ಕಾಳಸಂತೆ ಹಾಗೂ ಕೃತಕ ಅಭಾವ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೊರೊನಾ ಸೋಂಕಿತ ರೋಗಿಗಳಿಗೆ ರಿಮಿಡಿಸಿವಿರ್‌ ಸಿಗದೇ ಸಂಕಷ್ಟ ಅನುಭವಿಸುತ್ತಿರುವುದು ಬೆಳಕಿಗೆ ಬರುತ್ತಿದೆ. ರೆಮಿಡಿಸಿವಿರ್‌ ಔಷಧವನ್ನು ಸರಕಾರ ಮುಕ್ತ ಮಾರು   ಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸದೇ ಕೊರೊನಾ ಸೋಂಕಿತ ರೋಗಿಗೆ ಅಗತ್ಯವಿದೆ ಎಂದು ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ಮಾತ್ರ ಸರಕಾರ ಅಗತ್ಯವಿದ್ದಷ್ಟು ಔಷಧವನ್ನು ಸರಬರಾಜು ಮಾಡುವ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.

ಆದರೆ ಇದರ ಮಧ್ಯದಲ್ಲಿಯೇ ರಿಮಿಡಿಸಿವಿರ್‌ ಔಷಧ ಅಕ್ರಮವಾಗಿ ಮಾರಾಟ ಮಾಡುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅಕ್ರಮವಾಗಿ ರಿಮಿಡಿಸಿವಿರ್‌ ಮಾರಾಟ ಮಾಡುವವರ ವಿರುದ್ಧ ನೇರವಾಗಿ ಎಫ್ಐಆರ್‌ ದಾಖಲಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸರಕಾರದ ಕಟ್ಟುನಿಟ್ಟಿನ ಸೂಚನೆಯ ನಡುವೆಯೂ ಬೆಂಗಳೂರು, ಮೈಸೂರು, ಹೊಸಕೋಟೆಗಳಲ್ಲಿ ಅಕ್ರಮವಾಗಿ ಖಾಸಗಿ ಮೆಡಿಕಲ್‌ ಶಾಪ್‌ಗ್ಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಪ್ರಕರಣ, ಖಾಲಿ ರೆಮಿಡಿ   ಸಿವಿರ್‌ ಬಾಟಲಿಯಲ್ಲಿ ನಕಲಿ ಔಷಧ ಸೇರಿಸಿ ಮಾರಾಟ ಮಾಡಿರುವುದು, ನೀರು ಹಾಕಿ ಮಾರಾಟ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ.

ಆರೋಗ್ಯ ಕ್ಷೇತ್ರ ಎಲ್ಲವನ್ನೂ ಮೀರಿ ನಿಲ್ಲುವಂಥದ್ದು, ಈ ಕ್ಷೇತ್ರದಲ್ಲಿ ವ್ಯಾಪಾರೀಕರಣಕ್ಕಿಂತ ಮಾನವೀಯತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅದೇ ಕಾರಣಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯಲಾಗುತ್ತದೆ. ವಿಶ್ವವನ್ನೇ ಕಾಡುತ್ತಿರುವ ಕೊರೊನಾದಂತಹ ಮಹಾಮಾರಿಯನ್ನು ನಿಯಂ  ತ್ರಿಸಲು ಸರಕಾರ ಶಕ್ತಿ ಮೀರಿ ಪ್ರಯತ್ನಿಸುವ ಸಂದಿಗª ಸಮಯ  ವಿದು. ಈ ಸಂದರ್ಭದಲ್ಲಿ ಆರೋಗ್ಯ ಸಂಬಂಧಿ ವಸ್ತುಗಳ ಕೃತಕ ಅಭಾವ ಸೃಷ್ಠಿಸುವುದು, ಅದರಿಂದ ಲಾಭ ಮಾಡಿಕೊಳ್ಳುವ ಮನಃಸ್ಥಿತಿಗಳು ಮಾನ  ವೀ  ಯತೆ  ಗಿಂತ ವ್ಯಾಪಾರಿ ಮನೋಭಾವ ಹೊಂದಿದಂತಾಗುತ್ತದೆ. ಸಾವಿನ ಸಂದರ್ಭದಲ್ಲೂ ಕೃತಕ ಅಭಾವ, ಅಕ್ರಮವಾಗಿ ಹೆಚ್ಚಿನ ದರಕ್ಕೆ ಮಾರು  ವುದು ಪೈಶಾಚಿಕ ಮನೋಭಾವವನ್ನು ಎತ್ತಿ ತೋರಿಸುತ್ತದೆ.

ರಾಜ್ಯ ಸರಕಾರ ಇಂತಹ ಮನಃಸ್ಥಿತಿಗಳ ವಿರುದ್ಧ ಕೇವಲ ಹೇಳಿಕೆಗಳನ್ನು ನೀಡುವ ಹಾಗೂ ಎಚ್ಚರಿಕೆ ನೀಡುವ ಬದಲು ಕಠಿನ ಶಿಕ್ಷೆ ನೀಡಿ ಈ ರೀತಿಯ ಮನಃಸ್ಥಿತಿಯವರಿಗೆ ಮಹತ್ವದ ಸಂದೇಶ ರವಾನಿಸುವ ಕೆಲಸ ಮಾಡಬೇಕಿದೆ. ಜೀವನದ ಕೊನೆಯ ಗಳಿಗೆಯಲ್ಲಿ ಜೀವ ರಕ್ಷಕವಾಗುವ ಒಂದು ಔಷಧ ದೊರೆಯದೇ ಒಂದು ಜೀವ ಕಳೆದುಕೊಂಡರೆ, ಆ ಸಾವಿಗೆ ಅಕ್ರಮವಾಗಿ ರೆಮಿಡಿಸಿವಿರ್‌ ಸಂಗ್ರಹಿಸಿ ಮಾರಾಟ ಮಾಡುವವರಷ್ಟೇ ಅಲ್ಲ, ಅದನ್ನು ನಡೆಯಲು ಬಿಡುವ ಆಡಳಿತವೂ ಜವಾಬ್ದಾರಿಯಾಗುತ್ತದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.