ಕೊಪ್ಪಳ: ಅಪ್ಪು ಬ್ಯಾನರ್ ಕಿತ್ತು ಹಾಕಿಸಿದ್ದಕ್ಕೆ ಜಿಲ್ಲಾಧಿಕಾರಿ ಎದುರು ಆಕ್ರೋಶ
ಟಯರ್ ಗೆ ಬೆಂಕಿ, ಉದ್ವಿಗ್ನ ಸ್ಥಿತಿ ನಿರ್ಮಾಣ , ಇಬ್ಬರ ಬಂಧನ
Team Udayavani, Mar 19, 2022, 1:15 PM IST
ಕೊಪ್ಪಳ : ತಾಲೂಕಿನ ಹೂವಿನಹಾಳ ಗ್ರಾಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ಕನ್ನಡ ಬಾವುಟ ಕಿತ್ತು ಹಾಕಿಸಿದ್ದಕ್ಕೆ ಗ್ರಾಪಂ ಸದಸ್ಯನ ವಿರುದ್ದ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಆಕ್ರೋಶದ ಬೆನ್ನಲ್ಲೇ ಬ್ಯಾನರ್ ಕಿತ್ತು ಹಾಕಿಸಿದ್ದ ಗ್ರಾಪಂ ಸದಸ್ಯ ಪತ್ರಯ್ಯ ಹಾಗೂ ಶಾಂತಯ್ಯನನ್ನು ಎಸಿ ಸೂಚನೆ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ನಡೆದ ಕಾರ್ಯಕ್ರಮಕ್ಕೆ ಅಧಿಕಾರಿಗಳು ಆಗಮಿಸಿದ ವೇಳೆ ಅಪ್ಪು ಅಭಿಮಾನಿಗಳು ಆಕ್ರೋಶ ಹೋರ ಹಾಕಿದ್ದಾರೆ. ನಾಮ ಫಲಕ, ಕನ್ನಡ ಬಾವುಟ ಕಿತ್ತು ಹಾಕಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಅಪ್ಪು ಅಭಿಮಾನಿಗಳು ಗ್ರಾಮದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಎಸಿ ಹಾಗೂ ಪೊಲೀಸ್ ಅಧಿಕಾರಿಗಳ ಮುಂದೆ ಯುವಕರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಅಪ್ಪು ಫಲಕ ಮತ್ತೆ ಸ್ಥಾಪನೆ ಮಾಡುವ ಭರವಸೆಯನ್ನು ಎಸಿ ನೀಡಿದ್ದಾರೆ.
ಆರೋಪಿಗಳನ್ನು ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.